Avatar

Shramitha bejja

ಅ. 11 ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ

ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಅಕ್ಟೋಬರ್ 11 ರಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೆಯ “ಅಮೃತೋತ್ಸವ 2025” ನ್ನು ಶದ್ಧಾ ಭಕ್ತಿಯಿಂದ ವೈವಿಧಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದರು. ಅಂದು ಪೂರ್ವಾಹ್ನ 11.45 ಕೆ.ಸಾಮಿನಿ ಮಂಗಳಾಮೃತ ಪ್ರಾಣ ರವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಲಿರುವರು. ಬೆಳಗ್ಗೆ 9.00…

Read More

13 ವರ್ಷಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಪತ್ತೆ!

ಉಡುಪಿ: 13 ವರ್ಷಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯವರಿಗೆ ಹೆದರಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳದ ಯುವಕನೋರ್ವನನ್ನು ಕೊನೆಗೂ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಇಲ್ಲಿನ ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತ ಕೃಷ್ಣ ಪ್ರಭು (ಆಗ 16 ವರ್ಷ) ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ಅಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. 2012 ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ…

Read More

ಪ್ರತಿಭೆಗಳ ಅನಾವರಣಕ್ಕೆ ಸೃಜನೋತ್ಸವ ಸಹಕಾರಿ : ಕಮಲಾಕ್ಷ ಡಿ

ಕೊಡ್ಲಮೊಗರು : ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ವೇದಿಕೆಯನ್ನು ನೀಡುವುದರೊಂದಿಗೆ ಪ್ರತಿಭೆಗಳ ಅನಾವರಣಕ್ಕೆ ಸೃಜನೋತ್ಸವ ಸೂಕ್ತ ವೇದಿಕೆಯನ್ನು ನೀಡುತ್ತದೆ.ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಮಕ್ಕಳ ಬೆಳವಣಿಗೆಗೆ ಉತ್ತೇಜನ ನೀಡುವ ಗ್ರಂಥಾಲಯದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಕಾರ್ಯದರ್ಶಿ ಕಮಲಾಕ್ಷ ಡಿ ರವರು ತಿಳಿಸಿದರು. ಅವರು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಹಕಾರದಲ್ಲಿ ವರ್ಕಾಡಿ ಪಂಚಾಯತ್ ನೇತೃತ್ವ ಸಮಿತಿಯ ಆಶ್ರಯದಲ್ಲಿ ಜರಗಿದ ವರ್ಕಾಡಿ ಪಂಚಾಯತ್ ಮಟ್ಟದ ಸೃಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಂಜೇಶ್ವರ…

Read More

ಎಂ ಎಲ್ ಸಿ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆ.

ಮಂಗಳೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ , ಕ್ರಿಸ್ಮಸ್ ಹಬ್ಬ ಹಾಗೂ ರಂಜಾನ್ ಹಬ್ಬಗಳನ್ನು ಸರ್ವಧರ್ಮಿಯರ ಜೊತೆಗೆ ಸೇರಿ ಆಚರಿಸುತ್ತ ಬಂದಿದ್ದು , ಇದೀಗ 11ನೇ ವರ್ಷದ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆಯು ಅಕ್ಟೋಬರ್ 20 ರಂದು ನರಕಚತುರ್ದಶಿ ದಿನದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಸಭಾಭವನದಲ್ಲಿ ಸಂಜೆ ಗಂಟೆ 3:00ರಿಂದ ರಾತ್ರಿಯವರೆಗೆ ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಜೆ….

Read More

ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಅನಿವಾಸಿ ಕನ್ನಡಿಗರ ಸಮ್ಮೇಳನ ಹೊರನಾಡ ಕನ್ನಡಿಗರ ಸಮ್ಮೇಳನದ ಗೌರವ ಪುರಸ್ಕಾರಕ್ಕೆ ಆಯ್ಕೆ .

ಮಂಜುನಾಥ ಎಜುಕೇಷನ್ ಟ್ರಸ್ಟ್ (ರಿ ),ಹೃದಯವಾಹಿನಿ ಕರ್ನಾಟಕ,ಮಂಗಳೂರು ಹಾಗೂ ಎಸ್. ಕೆ.ಮುನ್ಸಿಪಾಲ್ ಎಂಪ್ಲಾಯಿಸ್ ಯೂನಿಯನ್(ರಿ),ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ 2025 ಅಕ್ಟೋಬರ್ 9 ಗುರುವಾರದಂದು ನಡೆಯುವ ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದಲ್ಲಿ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ ಕಾಸರಗೋಡು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ…

Read More

ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ. 10ರಂದು.

ಪುತ್ತೂರು; ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 2024ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ 2025ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಸಾಹಿತಿ ಮಕ್ಕಳ ಮಂಟಪದ ರೂವಾರಿ ಡಾ.ಎನ್.ಸುಕುಮಾರ ಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ…

Read More

ಪೆರ್ಲದ ವಾಹನ ಚಾಲಕ ಕುಂಬಳೆಯಲ್ಲಿ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ.

ಕುಂಬಳೆ : ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ರೈಲಿಗೆ ತಲೆ ಒಡ್ಡಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಮೃತ ವ್ಯಕ್ತಿ ಪೆರ್ಲದಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಟುಕುಕ್ಕೆ ಸಮೀಪ ಸೂರ್ಡೇಲು ನಿವಾಸಿ ದಿ.ಶೀನಪ್ಪ ರೈಗಳ ಪುತ್ರ ತಾರನಾಥ ರೈ (46) ಎಂದು ಗುರುತಿಸಲಾಗಿದೆ. ಈ ಹಿಂದೆ ಪೆರ್ಲದಲ್ಲಿ ಬಾಡಿಗೆ ವಾಹನ ಚಲಾಯಿಸುತ್ತಿದ್ದ ಇವರು ಇದೀಗ ಸ್ವಲ್ಪ ಸಮಯಗಳ ಹಿಂದೆ ತನ್ನ ವಾಹನಗಳನ್ನು ಮಾರಿದ್ದು ಬಳಿಕ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರೆಂದು ತಿಳಿದು ಬಂದಿದೆ….

Read More

ಸಂಘಟಿತ ಮತ್ತು ಅಸಂಘಟಿಕ ಕಾರ್ಮಿಕ ವಲಯಗಳಲ್ಲಿ ಕನಿಷ್ಠ ವೇತನ ಜಾರಿಗೆ ಬರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಸುಧಾರಣೆಯನ್ನು ಕಾಣಲಿದೆ-ಟಿ.ಎಂ ಶಹೀದ್ ತೆಕ್ಕಿಲ್

ಮಂಗಳೂರು: ರಾಜ್ಯ ಕಾರ್ಮಿಕ ವಲಯವನ್ನು ಸುಧಾರಣೆಯನ್ನು ತರುವಲ್ಲಿ ಕನಿಷ್ಠ ವೇತನ ಸಲಹಾ ಮಂಡಳಿಯು ಪ್ರಧಾನ ಪಾತ್ರವನ್ನು ವಹಿಸಲಿದೆ . ರಾಜ್ಯದಲ್ಲಿ ಸರಿಯಾದ ಪ್ರಮಾಣದಲ್ಲಿ ಸಂಘಟಿತ ಮತ್ತು ಅಸಂಘಟಿಕ ಕಾರ್ಮಿಕ ವಲಯಗಳಲ್ಲಿ ಕನಿಷ್ಠ ವೇತನ ಜಾರಿಗೆ ಬರುವುದರಿಂದ ಅವರ ಜೀವನ ಸಾಕಷ್ಟು ಪ್ರಮಾಣದಲ್ಲಿ ಸುಧಾರಣೆಯನ್ನು ಕಾಣಲಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ,, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ…

Read More

ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕಂಪೆನಿಯು 70 ಟನ್ ನ ಮೂರು ಬೋಲಾರ್ಡ್ ಪುಲ್ ಟಗ್‌ಗಳ ಸರಣಿಯ ಮೊದಲ ನೌಕೆ ಗೆ ಹಸಿರು ನಿಶಾನೆ.

ಉಡುಪಿ: ಭಾರತದ ಪ್ರಮುಖ ಶಿಪ್‌ಯಾರ್ಡ್ ಆಗಿರುವ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ಮಾಲೀಕತ್ವದ ಅಂಗಸಂಸ್ಥೆಯಾದ ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕಂಪೆನಿಯು ಎಂ/ಸ್ ಓಷನ್ ಸ್ಪಾರ್ಕಲ್ ಲಿಮಿಟೆಡ್ ಗಾಗಿ ನಿರ್ಮಿಸುತ್ತಿರುವ ಮೂರು 70 ಟನ್ ಬೋಲಾರ್ಡ್ ಪುಲ್ ಟಗ್‌ಗಳ ಸರಣಿಯ ಮೊದಲ ನೌಕೆಯನ್ನು ಯಶಸ್ವಿಯಾಗಿ ಪ್ರಾರಂಭಿಸಿದೆ. ಈ ಟಗ್‌ನ ಪ್ರಾರಂಭವನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ತಾಂತ್ರಿಕ ನಿರ್ದೇಶಕರು, ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಇತರ…

Read More

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ :- ಶಾಸಕ ಕಾಮತ್.

ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ…

Read More
error: Content is protected !!