Avatar

Shramitha bejja

ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025 ರ ಕಿರೀಟ.

ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2025 ಸೀಸನ್-4 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡವು ಪ್ರತಿಷ್ಠಿತ ಪಿಲಿಪರ್ಬ- 2025 ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ತಂಡ…

Read More

ಪುತ್ತೂರು ಯೋಜನಾ ಪ್ರಾಧಿಕಾರದಿಂದ ಕಡತ ವಿಲೇವಾರಿ.ರಾಜ್ಯದಲ್ಲೇ ಪ್ರಪ್ರಥಮ ಬಾರಿ ಕಡತ ವಿಲೇವಾರಿ ಕಾರ್ಯಾಗಾರ-ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ.

ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ವಿನ್ಯಾಸ ಅನುಮೋದನೆ ಕುರಿತ ಅರ್ಜಿಗಳಿಗೆ ಸಂಬಂಧಿಸಿ ೪ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಯ ಅದಾಲತ್ ಸೆ.೩೦ರಂದು ಶಾಸಕರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ ಕರ್ನಾಟಕ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಯೋಜನಾ ಪ್ರಾಧಿಕಾರದಿಂದ ಕಡತ ವಿಲೇವಾರಿ ಕಾರ್ಯಾಗಾರ ಆಯೋಜಿಸಲಾಗಿದೆ. ಏಕ ನಿವೇಶನ ನಕ್ಕಷೆ ಈ ಮೊದಲು ಗ್ರಾಮ ಪಂಚಾಯತ್‌ನಲ್ಲಿ…

Read More

ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡ‌ರ್ ಬೆಲೆ ಏರಿಕೆ.

ನವದೆಹಲಿ: ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡ‌ರ್ ಬೆಲೆ ಪರಿಷ್ಕರಿಸಲಾಗಿದ್ದು, ಇಂದಿನಿಂದ 15.50 ರೂ.ನಷ್ಟು ದುಬಾರಿಯಾಗಿದೆ.ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಲಾಗಿದ್ದು, ಸರ್ಕಾರಿ ಸ್ವಾಮ್ಯದ ಒಎಂಸಿಗಳು ಅಥವಾ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆ ಈಗ 1,595.50 ರೂ.ಗಳಿಗೆ ತಲುಪಿದೆ. ಹಿಂದಿನ ಬೆಲೆ 1580.00 ಆಗಿದ್ದು, 15.5 ರೂ.ನಷ್ಟು ಏರಿಕೆಯಾಗಿದೆ.ವಾಣಿಜ್ಯ ಎಲ್‌ಪಿಜಿ ಅನಿಲದ ಇತ್ತೀಚಿನ ಬೆಲೆ ಏರಿಕೆಯು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು…

Read More

ಅಮಾಸೆಬೈಲು: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚನೆ: ಆರೋಪಿ ಸೆರೆ.

ಉಡುಪಿ: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ. ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು. ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಆತನಿಗೆ…

Read More

ಕಲಾವಿದ, ಸಂಘಟಕ ವಸಂತ್ ಕೆರೆಮನೆಗೆ, ಕಾಸರಗೋಡು ದಸರಾ ಗೌರವ.

ಕಾಸರಗೋಡು : ಕಲಾವಿದ, ಸಂಘಟಕ, ಉತ್ತಮ ಫೋಟೋಗ್ರಾಫರ್, ಬಹುಮುಖ ಪ್ರತಿಭೆ ಶ್ರೀ ವಸಂತ್ ಕೆರೆಮನೆ ಇವರಿಗೆ, ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರತ್ಯದ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025.”ವೇದಿಕೆಯಲ್ಲಿ ಪಾಂಗೋಡು ಶ್ರೀ ಕ್ಷೇತ್ರ ಹಾಗೂ ಕಾಸರಗೋಡು ದಸರಾ ಸಮಿತಿ ಸಂಯುಕ್ತವಾಗಿ ದಸರಾ ಗೌರವ ನೀಡಿದರು. ಪಾಂಗೋಡು ಕ್ಷೇತ್ರ ಸಾಂಸ್ಕೃತಿಕ ಘಟಕ ಅಧ್ಯಕ್ಷರೂ, ಕ್ಷೇತ್ರ ಪಾತ್ರಿಗಳಾದ ಪಾಂಗೋಡು ಪ್ರವೀಣ್ ನಾಯಕ್ ಶಾಲು ಹೊದಿಸಿ ಗೌರವಿಸಿದರು. ಡಾ. ವಾಮನ್…

Read More

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ – 2025, ಕೇರಳ ರಾಜ್ಯ – ಕಾಸರಗೋಡು ಜಿಲ್ಲೆಯ ಸಾಹಿತ್ಯಾಸಕ್ತರಿಗೆ ಸಣ್ಣ ಕಥೆ, ಕವನ, ಪ್ರಬಂಧ ಸ್ಪರ್ಧೆ.

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ನಡೆಯುವ ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ ಹಾಗೂ ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಕೇರಳ ರಾಜ್ಯದ ಸಾಹಿತ್ಯಾಸಕ್ತರಿಗೆ ಸಣ್ಣ ಕಥೆ, ಕವನ,ಪ್ರಬಂಧ,ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸಣ್ಣ ಕಥೆ ರಚನೆ (ಎ 4 ಅಳತೆಯ ಹಾಳೆಯಲ್ಲಿ ಒಂದು ಪುಟ ಮೀರದಂತೆ ಇರಬೇಕು)….

Read More

ಕೇರಳ ರಾಜ್ಯ – ಕಾಸರಗೋಡು ಜಿಲ್ಲಾ ಕನ್ನಡ ಸಂಘಟನೆಗಳ ವಿಳಾಸದ ಡೈರೆಕ್ಟರಿ ಪ್ರಕಟಣೆ.

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ , ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕೇರಳ ರಾಜ್ಯ ಸಹಿತ ಕಾಸರಗೋಡು ಜಿಲ್ಲಾ ಕನ್ನಡ ಸಂಘಟನೆಗಳ ವಿಳಾಸದ ಡೈರೆಕ್ಟರಿಯ 2ನೇ ಪರಿಷ್ಕೃತ ಆವೃತ್ತಿಯನ್ನು ಪ್ರಕಟಿಸಲು ನಿರ್ಧರಿಸಲಾಗಿದೆ. ಕೇರಳ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಕಾಸರಗೋಡು ಜಿಲ್ಲೆಯಲ್ಲಿರುವ ಸುಮಾರು 400 ರಷ್ಟು ಕನ್ನಡ ಸಂಘ ಸಂಸ್ಥೆಗಳು ಮತ್ತು ಇತರ ಉಪಭಾಷೆಯ ಸಾಹಿತ್ಯಿಕ, ಸಾಂಸ್ಕೃತಿಕ,ಸಾಮಾಜಿಕ,…

Read More

ತಿಮರೋಡಿ ಗಡಿಪಾರು ಆದೇಶ. ವಿರೋಧಿಸಿ ಪ್ರತಿಭಟನೆಗೆ ಅನುಮತಿ ನಿರಾಕರಣೆ.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.ಈ ಗಡಿಪಾರು ಆದೇಶದ ವಿರುದ್ಧ…

Read More

ಧರ್ಮಸ್ಥಳ ಪ್ರಕರಣ.ಇಂದು ಚಿನ್ನಯ್ಯನ ಹೇಳಿಕೆ ಪೂರ್ಣಗೊಳ್ಳುವ ನಿರೀಕ್ಷೆ.

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ  ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶನಿವಾರ ಕರೆತಂದಿದ್ದು ಇಂದು ಆತ ನ್ಯಾಯಾಲಯದ ಮುಂದೆ‌ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾನೆ .  ಬೆಳ್ತಂಗಡಿ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ  ಶಿವಮೊಗ್ಗ ಜೈಲಿನಿಂದ  ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. 11.30 ಕ್ಕೆ ಆತನನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ  .ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ. ಈತ ಈ ಹಿಂದೆ ಎರಡು ದಿನಗಳ ಕಾಲ ಹೇಳಿಕೆ ನೀಡಿದ್ದು ಈತನ ಹೇಳಿಕೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಇಂದು ಮುಂದುವರಿದ ಹೇಳಿಕೆ…

Read More

ಸಿಗ್ನಲ್ ಲೈಟ್ ಇಲ್ಲೇಕೆ…… ?!

ಮಂಗಳೂರು: ಸಿಗ್ನಲ್ ಲೈಟ್ ನಗರದ ಮುಖ್ಯ ರಸ್ತೆಯಲ್ಲಿರುವುದು ಸಹಜ . ಆದರೆ ಕೆಟ್ಟು ಹೋದ ಸಿಗ್ನಲ್ ಲೈಟನ್ನು ಕಂಕನಾಡಿ ಬಸ್ ನಿಲ್ದಾಣದ ಫುಟ್ ಪಾತ್ ಮೇಲೆಯೇ ಇಡಲಾಗಿದೆ . ಇದು ಕಳೆದ ಒಂದು ಕೆಲವಾರು ದಿನಗಳ ಕಾಲ ಈ ಸ್ಥಳದಲ್ಲಿಯೇ ಇದ್ದು ಅಧಿಕಾರಿಗಳ ಬೇಜವಾಬ್ದಾರಿಯನ್ನು ಕಾಣಿಸುತ್ತಿದೆ . ಆದಷ್ಟು ಬೇಗನೆ ಸಾರ್ವಜನಿಕ ಸ್ಥಳದಲ್ಲಿರುವ ಈ ಸಿಗ್ನಲ್ ಲೈಟಿನ ಅವಶೇಷವನ್ನು ಸೂಕ್ತ ಸ್ಥಳದಲ್ಲಿ ಸ್ಥಳಾಂತರ ಮಾಡಬೇಕು .

Read More
error: Content is protected !!