Avatar

Shramitha bejja

ಮಂಗಳೂರು:ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ.

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರವನ್ನು ತ್ವರಿತವಾಗಿ ಒದಗಿಸುವಂತೆ ಜಿಲ್ಲಾಧಿಕಾರಿ (ಡಿಸಿ) ದರ್ಶನ್ ಎಚ್. ವಿ. ಅವರು ನಿರ್ದೇಶನ ನೀಡಿದ್ದಾರೆ.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಯ್ದೆಯಡಿ ಜಿಲ್ಲೆಯಲ್ಲಿ ದಾಖಲಾದ ಎಲ್ಲಾ ದೌರ್ಜನ್ಯ ಪ್ರಕರಣಗಳಿಗೂ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು….

Read More

ಉಡುಪಿ: ಅಪರಿಚಿತ ವಾಹನ ಡಿಕ್ಕಿ; ಯುವಕ ಮೃತ್ಯು.

ಉಡುಪಿ: ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಸ್ಕೂಟರ್ ಗೆ ಡಿಕ್ಕಿ ಹೊಡೆದ ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಮೃತ ಯುವಕನನ್ನು ಸಂತೆಕಟ್ಟೆಯ ನಿವಾಸಿ ಅನೂಶ್ ಭಂಡಾರಿ (21) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೂಶ್ ಭಂಡಾರಿ ಸೋಮವಾರ ರಾತ್ರಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಬೇರೆ ವಾಹನಗಳು ದೇಹದ ಮೇಲೆ…

Read More

ಸ್ಕೂಟರ್ ಮತ್ತು ಪೊಲೀಸ್ ವಾಹನ ನಡುವೆ ಅಪಘಾತ: ವಿದ್ಯಾರ್ಥಿ ಸ್ಥಿತಿ ಗಂಭೀರ.

ಬೆಳ್ತಂಗಡಿ: ಪೂಂಜಾಲಕಟ್ಟೆ ಸಮೀಪ ಪೊಲೀಸ್ ವಾಹನ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಇದೀಗ ಸಂಭವಿಸಿದೆ. ಗಾಯಗೊಂಡ ಯುವಕ ಕೊಳ್ಳೆಬೈಲ್ ನಿವಾಸಿ ಹರ್ಷಿತ್ ಎಂದು ತಿಳಿದುಬಂದಿದ್ದು, ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಮಾಹಿತಿಯ ಪ್ರಕಾರ, ಹರ್ಷಿತ್ ಪರೀಕ್ಷೆ ಬರೆಯಲು ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಪೊಲೀಸ್ ವಾಹನವು ಬೇರೊಂದು ವಾಹನವನ್ನು ಓವ‌‌ಟೇಕ್ ಮಾಡುವ ಸಂದರ್ಭದಲ್ಲಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದ್ದಾಗಿ ತಿಳಿದುಬಂದಿದೆ.

Read More

ಮುಂಬೈನಿಂದ ಮಂಗಳೂರಿಗೆ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳ ಬಂಧನ.

ಮಂಗಳೂರು :ಮುಂಬೈನಿಂದ ಮಂಗಳೂರಿಗೆ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಚಿರಾಗ್ ಸನಿಲ್, ಆಲ್ವಿನ್ ಕ್ಲಿಂಟನ್ ಡಿ ಸೋಜಾ,ಜನನ್ @ ಜನನ್ ಜಗನ್ನಾಥ, ರಾಜೇಶ್ ಬಂಗೇರ @ ಅಚ್ಚು @ ರಕ್ಷಿತ್, ವರುಣ್ ಗಾಣಿಗ ಮತ್ತು ಕೇರಳದ ಅಬ್ದುಲ್ ಕರೀಂ ಇ.ಕೆ ಎಂದು ಗುರುತಿಸಲಾಗಿದೆ. ಬಂಧಿತರಿಂದ ರೂ. 22,30,000/- ಮೌಲ್ಯದ 111.83 ಗ್ರಾಂ ಎಂಡಿಎಂಎ ಮತ್ತು ರೂ. 1,90.000/- ಮೌಲ್ಯದ 21.03 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ

Read More

ಸೆ.29ರಿಂದ ಅ.1ರ ತನಕ ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ.

ಮಂಗಳೂರು: ಉಳ್ಳಾಲ ತಾಲೂಕು ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯು ಆಯೋಜಿಸುವ 44ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 1ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಅಧ್ಯಕ್ಷರಾದ ಮೋಹನ್ ಶೆಟ್ಟಿ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು , 1982ರಲ್ಲಿ ಸ್ಥಾಪನೆಯಾದ ಸಮಿತಿಯು ಕಳೆದ 43 ವರ್ಷಗಳಿಂದ ನವರಾತ್ರಿ ಹಬ್ಬದ ಅಂಗವಾಗಿ ಶಾರದಾ ಮಹೋತ್ಸವವನ್ನು ಆಚರಿಸುತ್ತಿದ್ದು,…

Read More

ಮಂಜೇಶ್ವರ ಟ್ರಕ್ ಪಾರ್ಕಿಂಗ್ ಪ್ರದೇಶದಲ್ಲಿ ಗಾಂಜಾ ಸಸ್ಯ ಪತ್ತೆ ಹಚ್ಚಿದ ಕುಂಬಳೆ ಅಬಕಾರಿ ಇಲಾಖೆಯ ಅಧಿಕಾರಿಗಳು.

ಮಂಜೇಶ್ವರ : ಮಂಜೇಶ್ವರ ತಾಲೂಕು ವ್ಯಾಪ್ತಿಯ ಕಾಸರಗೋಡು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿರುವ ಟ್ರಕ್ ಪಾರ್ಕಿಂಗ್ ಪ್ರದೇಶದ ಸಮೀಪದಲ್ಲಿ 90 ಸೆಂಟಿಮೀಟರ್ ಎತ್ತರದಲ್ಲಿ ಬೆಳೆದ ಗಾಂಜಾ ಸಸ್ಯವನ್ನು ಕುಂಬಳ ಅಬಕಾರಿ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಬಕಾರಿ ಇಲಾಖೆಯ ಮಂಜೇಶ್ವರ ಶಾಖೆಯ ಇನ್ಸ್ಪೆಕ್ಟರ್ ಶ್ರಾವಣ್ ಕೆ.ವಿ ಹಾಗೂ ಅವರ ತಂಡ ಗಾಂಜಾ ಸಹಿತ ಪತ್ತೆಹಚ್ಚಿ, ಕಾನೂನು ಅನುಸಾರ ವಶಪಡಿಸಿಕೊಂಡು NDPS ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಆರೋಪಿಗಳೆಂದೇ ಯಾರನ್ನೂ ಪ್ರಕರಣದಲ್ಲಿ ಸೇರಿಸಲು ಸಾಧ್ಯವಾಗಿಲ್ಲ….

Read More

ಸೆ .26 ರಂದು OTT ಯಲ್ಲಿ ಭರ್ಜರಿ ಬಿಡುಗಡೆಗೆ ಸಿದ್ದವಾದ ಮೀರಾ.

ಮಂಗಳೂರು: ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡ ಮಹಿಳಾ ಪ್ರಧಾನ ತುಳು ಚಲನಚಿತ್ರ “ಮೀರಾ” ಇದೀಗ OTT ಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ . ಅಸ್ತ್ರ, ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ ಈ ಚಿತ್ರ, ಸೆಪ್ಟೆಂಬರ್ 26 (ಶುಕ್ರವಾರ) ರಂದು “ಟಾಕೀಸ್ OTT ಆ್ಯಪ್” ನಲ್ಲಿ ಬಿಡುಗಡೆಯಾಗಲಿದೆ ಎಂದು ಅಸ್ತ್ರ ಗ್ರೂಪ್ ಸಿಇಒ, ಚಿತ್ರ ನಿರ್ಮಾಪಕ ಲಂಚುಲಾಲ್ ಮಾಹಿತಿ ನೀಡಿದ್ದಾರೆ. ಚಿತ್ರವು ಪ್ರೀಮಿಯರ್ ಶೋ ನಲ್ಲೆ ಯಶಸ್ಸು ಕಂಡು ಜನಮನ ಗೆದ್ದಿತ್ತು. ನಾಯಕಿಯಾಗಿ ಇಶಿತಾ ಶೆಟ್ಟಿ ಅಭಿನಯಿಸಿದ್ದು, ಜೊತೆಗೆ ಅರವಿಂದ್ ಬೋಳಾರ್, ಜೆ.ಪಿ….

Read More

ಪುಚ್ಛತ್ ವಯಲ್ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ನಬಿದಿನೋತ್ಸವದ ಅದ್ಧೂರಿ ಆಚರಣೆ.

ಪುಚ್ಛತ್ ವಯಲ್: ಮುಹಿಯುದ್ದೀನ್ ಜುಮಾ ಮಸ್ಜಿದ್ ಆವರಣದಲ್ಲಿರುವ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ನಬಿ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮಕ್ಕೆ ಯಾಕೂಬ್ ಮಜ್ಮಾ ಅವರು ಅಧ್ಯಕ್ಷತೆ ವಹಿಸಿದ್ದರು. ಜಮಾಅತ್ ಖತೀಬ್ ಉಮರುಲ್ ಫಾರುಕ್ ಹನೀಫಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರವಾದಿ ಮುಹಮ್ಮದ್ (ಸ.ಅ) ಅವರ ಬದುಕು ಮತ್ತು ಸಂದೇಶಗಳ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಜಮಾಅತ್ ಕಾರ್ಯದರ್ಶಿ…

Read More

ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವಕ ಹೃದಯಾಘಾತದಿಂದ ನಿಧನ.

ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ.(23 ವ.) ಹೃದಯಾಘಾತದಿಂದ ಮೈಸೂರಿನಲ್ಲಿ ಭಾನುವಾರ ರಾತ್ರಿ ನಿಧನ ಹೊಂದಿದರು. ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿನೋದ್ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ಕಡಿಮೆಯಾಗಿತ್ತು. ಭಾನುವಾರ ರಾತ್ರಿ ತನ್ನ ರೂಂನಲ್ಲಿ ಊಟ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಅವಿವಾಹಿತರಾಗಿದ್ದ ಮೃತರು ತಂದೆ, ತಾಯಿ…

Read More

ಮಂಗಳೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ.

ಮಂಗಳೂರು: ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರು ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವಮಂಗಳೂರು ಬಂದರು ಪ್ರಾಧಿಕಾರ ( ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.ಮಂಗಳೂರು ದಸರಾ ಮೈಸೂರ ದಸರಾದಷ್ಟೇ ಪ್ರಸಿದ್ಧಿ‌ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ…

Read More
error: Content is protected !!