ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ” ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ
ಮಂಜೇಶ್ವರ : ಗಡಿ ಪ್ರದೇಶದಲ್ಲಿ ಗಮನ ಸೆಳೆಯಿತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಂದು ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು. ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ನ ತೀರ್ಪುಗಾರರ ಪರಿಶೀಲನೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಿನ್ನೆಸ್ ದಾಖಲೆಯಲ್ಲಿ ಸ್ಥಾನ…