Avatar

Shramitha bejja

ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಸೆ. 14ರಂದು ಆಚರಿಸಲಾಗುವುದು- ಎಸ್ ಪ್ರದೀಪ್ ಕುಮಾರ್ ಕಲ್ಕೂರ

ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಲು ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಉದ್ದೇಶದಿಂದ ಕಳೆದ 43ವರ್ಷಗಳಿಂದ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸೆಪ್ಟೆಂಬರ್ 14 ರವಿವಾರ ಆಚರಿಸಲಾಗುವುದೆಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೃಷ್ಣಾಷ್ಟಮಿಯಂದು ಬೆಳಗ್ಗೆ 9.00ರಿಂದ ಶ್ರೀ ಕೃಷ್ಣ…

Read More

ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣ ಪೂರ್ಣಗೊಂಡು ಒಂದೂವರೆ ವರ್ಷವಾದರೂ ಉದ್ಘಾಟನೆಯಾಗದ ಬಾಯಾರ್ ಕುಟುಂಬ ಆರೋಗ್ಯ ಕೇಂದ್ರದ ಸಾಂಕೇತಿಕ ಉದ್ಘಾಟನೆ

ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣ ಪೂರ್ಣಗೊಂಡು ಒಂದೂವರೆ ವರ್ಷವಾದರೂ ಉದ್ಘಾಟನೆಯಾಗದ ಬಾಯಾರ್ ಕುಟುಂಬ ಆರೋಗ್ಯ ಕೇಂದ್ರದ ಸಾಂಕೇತಿಕವಾಗಿ ಪ್ರತಿಭಟನ ಮೆರವಣಿಗೆ ತೆರಳಿ ಬಿಜೆಪಿ ಪೈವಳಿಕೆ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ಉದ್ಘಾಟನೆ ಮಾಡಿದರು. ಬಿಜೆಪಿ ಮುಖಂಡರಾದ ಪಿ ಆರ್ ಸುನಿಲ್,ಮಣಿಕಂಠ ರೈ, ಆದರ್ಶ ಬಿ ಎಂ, ಪ್ರಸಾದ್ ರೈ ಕಯ್ಯರ್,ಲೋಕೇಶ್ ನೊಂಡ, ಸದಾಶಿವ ಚೇರಲ್, ಸುಬ್ರಮಣ್ಯ ಭಟ್, ಸತ್ಯಶಂಕರ್, ಪ್ರವೀಣ ಪಟ್ಲ, ಜಯಲಕ್ಷ್ಮಿ ಭಟ್, ಚಂದ್ರವತಿ ಶೆಟ್ಟಿ, ರಾಜೀವಿ ನೇತೃತ್ವದಲ್ಲಿ ಹೊರಟ…

Read More

ರೈಲಿಗೆ ಯುವಕ ನೋರ್ವನು ತಲೆ ಇಟ್ಟು ಆತ್ಮಹತ್ಯೆ ಮಾಡಿರುವ ರೀತಿಯಲ್ಲಿ ಶವ ಪತ್ತೆ.

ಉಳ್ಳಾಲ: ಮಂಗಳೂರಿಂದ ಚೆನೈ ನಡುವೆ ಸಂಚರಿಸುವ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿಗೆ ಯುವಕ ನೋರ್ವನು ತಲೆಯನ್ನು ಇಟ್ಟು ಆತ್ಮಹತ್ಯೆ ಮಾಡಿರುವ ರೀತಿಯಲ್ಲಿ ಶವವೊಂದು ಪತ್ತೆಯಾಗಿದೆ. ಮೃತ ದೇಹವು ಉಳ್ಳಾಲ ರೈಲ್ವೇ ನಿಲ್ದಾಣದ ಬಳಿಗೆ ಸಿಕ್ಕಿದೆ. ಯುವಕ ಆತ್ಮ ಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಕಣ್ಣೂರು ಭಾಗಕ್ಕೆ ತೆರಳುವ ಪ್ಯಾಸೆಂಜರ್ ರೈಲು, ಮಾವೇಲಿ ಎಕ್ಸ್ಪ್ರೆಸ್ ಸೇರಿ ಹಲವು ರೈಲು ಸಂಚಾರದ ಸಮಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮಂಗಳೂರು ಕಣ್ಣೂರು ನಡುವಿನ ಪ್ಯಾಸೆಂಜರ್ ರೈಲು ವಿಳಂಬದಿಂದ ಯಾತ್ರಾರ್ಥಿಗಳು ತುಂಬಾನೇ ತ್ರಾಸ…

Read More

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ.

ಮಂಗಳೂರು: ರಾಜ್ಯದ ಕೆಲ ಇಂದು ವರುಣ ಅಬ್ಬರಿಸಲಿದ್ದಾನೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಮೈಸೂರು, ಮಂಡ್ಯ, ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 10ರಿಂದ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಹಾಗೂ…

Read More

ಈ ಬಾರಿಯೂ ಪಾಲಿಕೆ ವತಿಯಿಂದಲೇ ದಸರಾ ದೀಪಾಲಂಕಾರ – ಶಾಸಕ ಕಾಮತ್

ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಇಡೀ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರು, ಪ್ರವಾಸಿಗರ ದಂಡೇ ಹರಿದು ಬರಲಿದ್ದು ಈ ವೇಳೆ ಇಡೀ ನಗರಕ್ಕೆ ಹಿಂದಿನಂತೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂಬ ನಮ್ಮ ವಿಶೇಷ ಮನವಿಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಟೆಂಡರ್ ಪ್ರಕ್ರಿಯೆಯನ್ನು ಸಹ ಪ್ರಾರಂಭಗೊಳಿಸಲಾಗಿದೆ ಎಂದಿರುವುದು ಸ್ವಾಗತಾರ್ಹ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ದಸರಾ ಸಂದರ್ಭದಲ್ಲಿ ನಗರದ ದೀಪಾಲಂಕಾರದ ಜವಾಬ್ದಾರಿಯನ್ನು ಪಾಲಿಕೆ…

Read More

ಸಂತ ಮದರ್ ತೆರೇಸಾರವರ 28ನೇ ಸಂಸ್ಕರಣಾ ದಿನಾಚರಣೆಯ ಅಂಗವಾಗಿ ಸೆ.11ರಂದು ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ – ರೋಯ್ ಕ್ಯಾಸ್ಟಲಿನೋ .

ಮಂಗಳೂರು:: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು: ಇದರ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಕರಣಾ ದಿನಾಚರಣೆಯ ಅಂಗವಾಗಿ ಸೆ.11ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು, ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬವಿಷಯದಲ್ಲಿ ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು….

Read More

ಕೂಳೂರು ರಸ್ತೆ ಗುಂಡಿಯಿಂದಾಗಿ ಲಾರಿ ಚಕ್ರದಡಿ ಸಿಲುಕಿ ಯುವತಿ ದಾರುಣ ಸಾವು!!

ಮಂಗಳೂರು:: ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರು ರಾಯಲ್ ಓಕ್ ಮುಂಭಾಗದಲ್ಲಿ ರಸ್ತೆ ಗುಂಡಿಗೆ ಸಿಲುಕಿ ಸ್ಕೂಟರ್ ನಿಂದ ಉರುಳಿ ಬಿದ್ದ ಮಹಿಳೆಯ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ, 8:30 ಗಂಟೆ ಸುಮಾರಿಗೆ ನಡೆದಿದೆ . ಘಟನೆಯ ಪರಿಣಾಮ ಮೂಲತ: ಮಣಿಪಾಲ ವರ್ಕಳ ನಿವಾಸಿ ಸದ್ಯ ಚಿತ್ರಾಪುರದಲ್ಲಿ ನೆಲೆಸಿದ್ದ ಮಾಧವಿ (37) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಎಜೆ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಟೆಕ್ನಿಷಿಯನ್ ಆಗಿದ್ದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗುವಾಗ ಘಟನೆ…

Read More

ರಾಷ್ಟ್ರೀಯ ವಿಚಾರಗೋಷ್ಠಿಯು ಸೆ. 11,12 ರಂದು ಕೊಂಕಣಿ ಭಾಷೆಯಲ್ಲಿ ನಡೆಯಲಿದೆ-ಡಾ ಆಲ್ಮಿನ್ ಡೇಸಾ

ಮಂಗಳೂರು: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (AICTE) ಇವರ ಸಹಯೋಗದೊಂದಿಗೆ ಸಂತ ಅಲೋಸಿಯಸ್ ಪರಿಗಣಿತ ವಿಶ್ವವಿದ್ಯಾಲಯ ಮಂಗಳೂರು. ಇಲ್ಲಿ ಸ್ಮಾರ್ಟ್ ವೈದ್ಯಕೀಯ ಉಪಕರಣಗಳು ಮತ್ತು ತಂತ್ರಜ್ಞಾನಗಳ ಮೂಲಕ ಆರೋಗ್ಯ ಸುಧಾರಿಸುವುದು ಎಂಬ ಶೀರ್ಷಿಕೆಯಡಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರಗೋಷ್ಠಿಯು ಸೆಪ್ಟೆಂಬರ್ 11 ಮತ್ತು 12, 2025 ರಂದು ಕೊಂಕಣಿ ಭಾಷೆಯಲ್ಲಿ ನಡೆಯಲಿದೆ ಎಂದು ಸಂತ ಅಲೋಸಿಯಸ್ ಸ್ನಾಯತ್ತ ಕಾಲೇಜಿನ ಕುಲ ಸಚಿವರಾದ ಡಾ ಆಲ್ಮಿನ್ ಡೇಸಾ ತಿಳಿಸಿದರು . ಅವರು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…

Read More

ದಕ್ಷಿಣ ಏಷ್ಯಾದಲ್ಲೇ ಪ್ರಥಮ ಅರ್ಥೊಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ಆರಂಭಗೊಂಡಿದೆ-ಡಾ. ಮುಹಮ್ಮದ್ ತಾಹಿರ್

ಮಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಥಮ ಅರ್ಥೊಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆಯು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರಂಭಗೊಂಡಿದೆ ಎಂದು ಯೆನೆಪೋಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಮುಹಮ್ಮದ್ ತಾಹಿರ್ ಹೇಳಿದರು . ಅವರು ಕೊಡಿಯಾಲ್ ಬೈಲ್ ನಲ್ಲಿರುವ ಯೆನೆಪೋಯ ಆಸ್ಪತ್ರೆ ಹಾಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ , ಇದು ಮಂಡಿ ಬದಲಾವಣೆ ಆಪರೇಷನ್ ನಲ್ಲಿ ಕ್ರಾಂತಿ ಉಂಟುಮಾಡಲಿದೆ . ಏವೊಲ್ಯೂಷನ್ ಮೀಡಿಯಲ್ ಪೈವೊಟ್ ಬೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ…

Read More

ಶ್ರೀ ಚಾಮುಂಡೇಶ್ವರಿ ಭಜನಾ ಮಂದಿರ ಮಠ ಮೊಗ್ರಾಲ್ ಪುತ್ತೂರು.ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಚಾಮುಂಡೇಶ್ವರಿ ಭಜನಾ ಮಂದಿರ ಮಠ ಮೊಗ್ರಾಲ್ ಪುತ್ತೂರು ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಮಂದಿರದಲ್ಲಿ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀದರ ನಡುಹಿತ್ಲು ಇವರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು, ಈ ಸಂದರ್ಭದಲ್ಲಿ ಮಹಿಳಾ ಸಮಿತಿ ಅಧ್ಯಕ್ಷೆ ಸುಶೀಲ, ಮಂದಿರದ ಅರ್ಚಕರಾದ ಶ್ರೀ ಪ್ರಭಾಕರ ದೊಡ್ಡಹಿತ್ಲು, ಸಮಿತಿ ಕಾರ್ಯದರ್ಶಿ ಗಳು, ಸದಸ್ಯರು, ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು

Read More
error: Content is protected !!