ದೇಶಾದ್ಯಂತ 1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು; ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ ಇಂಡಿಗೋ ಸಂಸ್ಥೆ
ನವದೆಹಲಿ: ದೇಶಾದ್ಯಂತ 1000ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ.ಈ ಕುರಿತು ಮಾಹಿತಿ ಡಿಜಿಸಿಎಗೆ ನೀಡಿರುವ ಇಂಡಿಗೋ ಸಂಸ್ಥೆ, ಸದ್ಯಕ್ಕೆ ಈ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ ಫೆಬ್ರವರಿ 10ರ ವೇಳೆಗೆ ವಿಮಾನಗಳ ಹಾರಾಟವನ್ನು ಪುನರಾರಂಭಿಸಲಾಗುವುದು ಎಂದು ಹೇಳಿದೆ. ಇನ್ನೂ ಕಳೆದೆರಡು ದಿನಗಳಿಂದ ಸಮಸ್ಯೆ ಅನುಭವಿಸುತ್ತಿರುವ ಗ್ರಾಹಕರಲ್ಲಿ ಕ್ಷಮೆಯಾಚಿಸಿದೆ. ಇನ್ನೂ ಕಳೆದ ಮೂರು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಸಿಬ್ಬಂದಿ ಸಮಸ್ಯೆಯಿಂದ ಅಂತಾರಾಷ್ಟ್ರೀಯ…