ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪುರಸ್ಕೃತ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ (Kasturi Rangan) ನಿಧನರಾಗಿದ್ದಾರೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. 84 ವರ್ಷದ ಕಸ್ತೂರಿ ರಂಗನ್ ಅವರು ಬೆಂಗಳೂರಿನಲ್ಲಿ (Bengaluru) ಕೊನೆಯುಸಿರೆಳೆದಿದ್ದಾರೆ. ಕಸ್ತೂರಿ ರಂಗನ್ ಅವರು 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು, ಅಪಾರ ಕೊಡುಗೆ ನೀಡಿದ್ದಾರೆ.