ಬ್ರಿಕ್ಸ್ ಶೃಂಗಸಭೆಗೂ ಮುನ್ನ ಭಾರತಕ್ಕೆ ಜಾಗತಿಕ ಗಮನ: ಕ್ಸಿ ಜಿನ್‌ಪಿಂಗ್, ಪುಟಿನ್ ಭೇಟಿ ಸಾಧ್ಯತೆ
ಈ ವರ್ಷದ ಬ್ರಿಕ್ಸ್ (BRICS) ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಳ್ಳುತ್ತಿರುವ ಹಿನ್ನೆಲೆ, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ದೇಶ ಮತ್ತೊಮ್ಮೆ ಕೇಂದ್ರಬಿಂದುವಾಗಿದ್ದು, ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆ ಭಾರೀ ಮಹತ್ವ ಪಡೆದುಕೊಂಡಿದೆ. ಆರ್ಥಿಕ ಮತ್ತು ಭೌಗೋಳಿಕ ರಾಜಕೀಯ ಚರ್ಚೆಗಳ ಜೊತೆಗೆ, ಭಾರತ-ಚೀನಾ ನಡುವಿನ ದೀರ್ಘಕಾಲದ ಬಿಕ್ಕಟ್ಟಿನ ಸಂಬಂಧಗಳಿಗೆ ಹೊಸ ತಿರುವು ಸಿಗುವ ಸಾಧ್ಯತೆಯೂ ಈ ಸಮ್ಮೇಳನದಿಂದ ಮೂಡಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸುವ ಸಾಧ್ಯತೆ ದಟ್ಟವಾಗಿದ್ದು, ಅವರು…
