ಪಾಕಿಸ್ತಾನದಲ್ಲಿ ಕಲ್ಲಿದ್ದಲು ಗಣಿ ದುರಂತ: ಮೀಥೇನ್ ಸ್ಫೋಟಕ್ಕೆ 32 ಗಣಿಗಾರರ ದುರ್ಮರಣ
ಬಲೂಚಿಸ್ಥಾನ (ಪಾಕಿಸ್ತಾನ), ಜು.31: ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದ ಕ್ವೆಟ್ಟಾ ಹೊರವಲಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಗಣಿಗಾರರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹಲವು ಕಾರ್ಮಿಕರು ಗಣಿಯೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಜುಲೈ 30ರಂದು ಸಂಭವಿಸಿದ ಈ ದುರಂತಕ್ಕೆ ಗಣಿಯೊಳಗೆ ಅಪಾಯಕಾರಿಯಾಗಿ ಸಂಗ್ರಹವಾಗಿದ್ದ ಮೀಥೇನ್ ಅನಿಲ ಸ್ಫೋಟಗೊಂಡಿರುವುದೇ ಕಾರಣ ಎಂದು ಅಧಿಕಾರಿಗಳು ಪ್ರಾಥಮಿಕವಾಗಿ ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಸುಮಾರು 4,500 ಅಡಿ…
