ಅಮೆರಿಕ–ಇರಾನ್ ನಡುವೆ ಮಹತ್ವದ ಶಾಂತಿ ಒಪ್ಪಂದ ಅಂತಿಮ: ಟ್ರಂಪ್ ಘೋಷಣೆ
ವಾಷಿಂಗ್ಟನ್, ಜೂ. 15: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಮಹತ್ವದ ಶಾಂತಿ ಒಪ್ಪಂದವೊಂದು ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಸಂಬಂಧ ಜೂನ್ 19ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕವಾಗಿ ಒಪ್ಪಂದಕ್ಕೆ ಸಹಿ ಹಾಕಲು ಉಭಯ ರಾಷ್ಟ್ರಗಳು ನಿರ್ಧರಿಸಿವೆ ಎಂದು ಅವರು ತಿಳಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ‘ಟ್ರೂತ್ ಸೋಶಿಯಲ್’ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಒಪ್ಪಂದ ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು” ಎಂದು…
