ಯುವತಿ ಪರಾರಿ ಪ್ರಕರಣ: ‘ಲವ್ ಜಿಹಾದ್’ ಶಂಕೆ ವ್ಯಕ್ತಪಡಿಸಿದ ತಂದೆ, ಎಸ್‌ಡಿಪಿಐ ಕೈವಾಡ ಆರೋಪ
ಮಂಗಳೂರು:ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಶಂಕೆ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈ ಶಂಕೆ ವ್ಯಕ್ತಪಡಿಸಿದರು.ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ ಎಸ್.ಡಿ.ಪಿ.ಐ. ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ ಎಸ್.ಡಿ.ಪಿ.ಐ .ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಜುವೆಲ್ಲರ್ಸ್ ಮಾಲೀಕರು…