ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಕಾಂಗ್ರೆಸ್ ಸರಕಾರದಿಂದ ಪ್ರಬಲ ಹೋರಾಟ : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು:ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು ‘ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025’ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬೊಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ…

Read More

ಸುಳ್ಯ ಶಾಸಕಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಪೋಸ್ಟ್ ವಿಚಾರದಲ್ಲಿ ದುಷ್ಕರ್ಮಿಗಳನ್ನು ಬಂಧಿಸಬೇಕು:ಬಿಜೆಪಿ ಆಗ್ರಹ

ಮಂಗಳೂರು :ಸುಳ್ಯ ಶಾಸಕಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಪೋಸ್ಟ್ ವಿಚಾರದಲ್ಲಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.ಈ ವಿದ್ಯಮಾನವನ್ನು ಕಟುವಾಗಿ ಖಂಡಿಸಿರುವ ಶಾಸಕ ವೇದವ್ಯಾಸ್ ಕಾಮತ್ ಖಂಡನೆ ಪೋಸ್ಟ್ ಮಾಡಿದವನನ್ನ ಬಂಧಿಸಲು ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ವಿಕೃತಿಯ ಮನಸಿನ ವ್ಯಕ್ತಿ ಶಾಸಕಿಗೆ ಅವಮಾನ ಮಾಡಿದ್ದಾನೆ.ಪರಿಶಿಷ್ಟ ಜಾತಿಗೆ ಸೇರಿದ ಒಂದು ಮಹಿಳೆಗೆ ಈ ರೀತಿ ಮಾಡಿರುವುದನ್ನು ಸಮಾಜ ಒಪ್ಪುವುದಿಲ್ಲ ಎಂದವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಸಂವಿಧಾನಕ್ಕೆ ಗೌರವ ಕೊಡುತೇವೆ ಎನ್ನುತ್ತಾರೆ. ಇವತ್ತು…

Read More

50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ; ಶಾಸಕ ವೇದವ್ಯಾಸ್ ಕಾಮತ್ ನೇತೃತ್ವ

ಮ.ನ.ಪಾ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಪಡೀಲ್ ಕುಂದರ್ ಕುಟುಂಬಸ್ಥರ ದೈವಸ್ಥಾನ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.ಈ ವೇಳೆ ಮಾತನಾಡಿದ ಶಾಸಕರು ಇಲ್ಲಿ ತುರ್ತು ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಾ ರೀತಿಯಲ್ಲೂ ವಿಶೇಷ ಸಹಕಾರ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಪ್ರವೀಣ್ ನಿಡ್ಡೇಲ್, ಭಾಸ್ಕರ್…

Read More

ಸುಳ್ಯ ಶಾಸಕಿ ವಿರುದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು

ಮಂಗಳೂರು :ಸುಳ್ಯ ಶಾಸಕಿ ವಿರುದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡಲಾಗಿದೆ.ದ‌ಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಛಾ ಈ ಬಗ್ಗೆ ಎಸ್ಪಿ ಡಾ.ಅರುಣ್ ಅವರಿಗೆ ದೂರು ನೀಡಿದೆ. ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಯುವಕನೋರ್ವನ ಹೆಸರಿನಲ್ಲಿ ಶ್ರದ್ಧಾಂಜಲಿ ಪೋಸ್ಟ್ ಮಾಡಲಾಗಿತ್ತು. ‘ಬಿಲ್ಲವ ಸಂದೇಶ್’ ಎಂಬ ಫೇಸ್ ಬುಕ್ ಖಾತೆಯಲ್ಲಿ ಮಾಡಲಾದ ಪೋಸ್ಟ್ ನಲ್ಲಿ ‘ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಇವರು ಶೋಷಣೆಗೊಳಗಾದ ದಲಿತ…

Read More

ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆ: ದೈವದ ಬಗ್ಗೆ ರೀಲ್ಸ್ ಅಲ್ಲ -ಸುಧೀರ್ ಅತ್ತಾವರ್

ಮಂಗಳೂರು: ಹೊಸವರ್ಷದ ಶುಭಾರಂಭದಂದು ‘ಸಾಂಗ್ಸ್ ಪ್ರೀಮಿಯರ್’ ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ “ಕೊರಗಜ್ಜ” ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ ಸುಮಾರು ಮುನ್ನೂರಕ್ಕೂ ಹೆಚ್ಚು ಆಡಿಯೋ ಪ್ಲಾಟ್ ಫಾರ್ಮ್ ಗಳಲ್ಲಿ ಝೀ ಮ್ಯೂಜಿಕ್ ಮುಖೇನ ಹರಿಯಬಿಟ್ಟಿತ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಹಾಲಿಡೇ ಇನ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾವು ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆಯನ್ನು ಘೋಷಿಸಿದ್ದೆವೆಯೇ ಹೊರತು, ತ್ರಿವಿಕ್ರಮ ಸಪಲ್ಯ ನಿರ್ಮಾಣ ದಲ್ಲಿರುವ “ಕೊರಗಜ್ಜ” ಚಿತ್ರದ…

Read More

ನಾಡಿನ ಹೆಮ್ಮೆ ಮಂಗಳೂರು ಲಿಟ್ ಫೆಸ್ಟ್:ಜ.10 ಮತ್ತು ಜ.11ರಂದು ಆಯೋಜನೆ; ರಾಜ್ಯಸಭಾ ಸದಸ್ಯೆ ಪದ್ಮಶ್ರೀ ಮೀನಾಕ್ಷಿ ಜೈನ್ ಅವರಿಗೆ ಪ್ರಶಸ್ತಿ

ಮಂಗಳೂರು: ನಾಡಿನ ಹೆಮ್ಮೆ ಮಂಗಳೂರು ಲಿಟ್ ಫೆಸ್ಟ್ ಜ.10 ಮತ್ತು ಜ.11ರಂದು ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಎರಡು ದಿನಗಳ ಕಾಲ ವಿಶಿಷ್ಟವಾಗಿ ನಡೆಯಲಿದೆ. ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮಂಗಳೂರು ಲಿಟ್ ಫೆಸ್ಟ್ ನ 2026ನೇ ಆವೃತ್ತಿಯ ವಿಶೇಷ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತರು, ಖ್ಯಾತ ಇತಿಹಾಸಕಾರ್ತಿ, ರಾಜ್ಯಸಭಾ ಸದಸ್ಯರಾದ ಮೀನಾಕ್ಷಿ ಜೈನ್ ಆಯ್ಕೆಯಾಗಿದ್ದಾರೆ. ಜ.10ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕ ಸಂಸ್ಥೆ ಭಾರತ್ ಫೌಂಡೇಷನ್ ತಿಳಿಸಿದೆ. ಭಾರತದ ಪರಿಕಲ್ಪನೆಯನ್ನು…

Read More

ಸಂಸದ ಕ್ಯಾ. ಚೌಟ, ಶಾಸಕ ರಾಜೇಶ್ ನಾಯ್ಕ್ ಜಂಟಿ ನೇತೃತ್ವದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ.ಬಂಟ್ವಾಳ ಪುರಸಭೆ ಗುತ್ತಿಗೆ ನೌಕರರ ಬಾಕಿ ವೇತನ ಶೀಘ್ರ ಪಾವತಿಗೆ ಸೂಚನೆ

ಮಂಗಳೂರು: ಬಂಟ್ವಾಳ ಪುರಸಭೆಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವ ಗಂಭೀರ ಸಮಸ್ಯೆ ಹಾಗೂ ಪುರಸಭೆ ವ್ಯಾಪ್ತಿಯ ಇತರ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್‌ ಅವರ ಜಂಟಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಬಂಟ್ವಾಳ ಪುರಸಭೆಯ ಕನಿಷ್ಠ ವೇತನದಡಿ ಮತ್ತು ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಕಾಲದಲ್ಲಿ…

Read More

ಕರ್ನಾಟಕದಲ್ಲಿ ಸುದೀರ್ಘ ಆಡಳಿತ ನಡೆಸಿದ ಸಿ ಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ : ಮಾಜಿ ಸಚಿವ ಬಿ.ರಮಾನಾಥ ರೈ

ಮಂಗಳೂರು:ಕರ್ನಾಟಕದಲ್ಲಿ ಸುದೀರ್ಘ ಆಡಳಿತ ನಡೆಸಿದ ಸಿ ಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ , ಮಾಜಿ ಸಿಎಂ ದೇವರಾಜ್ ಅರಸರ ಧಾಖಲೆಯನ್ನು ಮುರಿದು ಅವರ ಹಾದಿಯಲ್ಲೇ ನಡೆದು ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಬಿ.ರಮಾನಾಥ ರೈ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸಿದ್ದರಾಮಯ್ಯ ಜನರ ಕಲ್ಯಾಣಕ್ಕಾಗಿ ಸಾಕಷ್ಟು…

Read More

ಮಂಗಳೂರು ಶಾಂತವಾಗಿಸಿದ ಅಧಿಕಾರಿಗಳ ವರ್ಗಾವಣೆ ಸಂಚು: ರಾಜಕೀಯ ಹಸ್ತಕ್ಷೇಪಕ್ಕೆ ಎಸ್‌ಡಿಪಿಐ ತೀವ್ರ ಖಂಡನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಕ್ರಿಯರಾಗಿರುವ ನೂತನ ಪೊಲೀಸ್ ಅಧೀಕ್ಷಕರು (SP) ಹಾಗೂ ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲು ನಡೆಯುತ್ತಿರುವ ರಾಜಕೀಯ ತೆರೆಮರೆಯ ಪ್ರಯತ್ನಗಳನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡುವ ಶಕ್ತಿಗಳನ್ನು ಹತ್ತಿಕ್ಕುವಲ್ಲಿ ಈ ಅಧಿಕಾರಿಗಳು ಪ್ರಶಂಸನೀಯ ಕೆಲಸ ಮಾಡಿದ್ದಾರೆ. ಸುದೀರ್ಘ ಕಾಲದ ನಂತರ…

Read More

ಮಂಗಳೂರು : ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ

ಮಂಗಳೂರು :ವೈದಿಕ ಕಾಲದ ಅದ್ವೈತ ಪರಂಪರೆಯ ದೈವಜ್ಞ ಬ್ರಾಹ್ಮಣರು ತಮ್ಮ ಆಚಾರ ವಿಚಾರ ಸಂಪ್ರದಾಯಗಳಲ್ಲಿ ಇನ್ನಷ್ಟು ನಿಷ್ಠೆ ಹೊಂದಿ ತಮ್ಮ ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನ ಗೊಳಿಸಬೇಕಾಗಿದೆ. ನಾಲ್ಕು ದಶಕಗಳ ಹಿಂದೆ ಸಮಾಜಕ್ಕೊಂದು ಕುಲಗುರು, ಶ್ರೀ ಮಠ ಹೊಂದಿದ ಬಳಿಕ ದೈವಜ್ಞ ಸಮಾಜವು ಸರ್ವಾಂಗೀಣ ಅಭಿವೃದ್ಧಿ ಹೊಂದಿದೆ” ಎಂದು ಶ್ರೀ ಶಂಕರಾಚಾರ್ಯ ಸಂಸ್ಥಾನ, ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾ ಸ್ವಾಮೀಜಿ ಹೇಳಿದರು. ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ “ದೈವಜ್ಞ ದರ್ಶನ”…

Read More
error: Content is protected !!