ರೈಲಲ್ಲಿ ಮಂಗಳೂರಿಗೆ ಗಾಂಜಾ ತಂದ ಇಬ್ಬರು ಅರೆಸ್ಟ್

ಮಂಗಳೂರು: ಮಾದಕ ವಸ್ತುವಾದ ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಮಂಗಳೂರಿನ ಬಜಪೆ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 03-01-2026 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 Kg ತೂಕದ ಮಾದಕವಸ್ತು ಗಾಂಜಾವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬಿಹಾರದ ಸುನೀಲ್ ಕುಮಾರ್, ಬ್ರಿಜೇಶ್ ಶ್ರೀವಾಸ್ತವ ಎಂಬವರನ್ನು ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಆರೋಪಿತರಿಂದ…

Read More

ಹಸಿವಿನ ಬಳಲಿಕೆ ಉಳ್ಳವರಿಗೆ ಅವಮಾನ.ವೆನ್ಲಾಕ್ ಆಸ್ಪತ್ರೆಯ ಕಾರುಣ್ಯ ಯೋಜನೆಗೆ ನೆರವು ನೀಡಿದ ರೊನಾಲ್ಡ್ ಮಾರ್ಟಿಸ್

ಮಂಗಳೂರು: ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬಾಯಿಯ ಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಹೇಳಿದರು.ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಫಿಸಿಯೋಥೆರಪಿ ಸೆಂಟರ್ ಬಳಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಲ್ಲಿ ನಿರಂತರ…

Read More

ಬೋಳೂರು ವಾರ್ಡಿನಲ್ಲಿ 40 ಲಕ್ಷ ರೂ. ಅನುದಾನದ ರಸ್ತೆ–ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆಯ 27ನೇ ಬೋಳೂರು ವಾರ್ಡಿನಲ್ಲಿ 40 ಲಕ್ಷ ರೂ ವಿಶೇಷ ಅನುದಾನಲ್ಲಿ ಸುನೀಲ್ ಕುಮಾರ್ ರಸ್ತೆಯಿಂದ ಚಾರಂದಾಯ ದೈವಸ್ಥಾನ ಹಾಗೂ ಕುಚ್ಚಿಕಾಡು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಹಾಗೂ ಒಳಚರಂಡಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಹದಗೆಟ್ಟಿರುವ ಈ ರಸ್ತೆಯ ಅಭಿವೃದ್ಧಿ ಕಾರ್ಯವು ಶೀಘ್ರವಾಗಿ ಮುಗಿದು ಜನರ ಬಳಕೆಗೆ ಸಿಗಬೇಕೆಂಬ ಉದ್ದೇಶದಿಂದ ವಿಶೇಷ ಮುತುವರ್ಜಿ ವಹಿಸಿ ಅನುದಾನವನ್ನು ಹೊಂದಿಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಎಂದರು….

Read More

ಕೋಳಿ ಅಂಕ ವಿವಾದದ ಬಗ್ಗೆ ಸ್ಪೀಕರ್ ಯು ಟಿ ಖಾದರ್

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕೋಳಿ ಅಂಕ ನಿಷೇಧ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ಖಾದರ್ ಅವರು, ‘ಕೋಳಿ ಅಂಕದಲ್ಲಿ ಜೂಜು ನಡೆಯುತ್ತದೆ ಎಂಬುದು ಪೊಲೀಸ್ ಇಲಾಖೆಯ ಆರೋಪ. ಜೂಜು ನಡೆದರೆ, ಅದರಲ್ಲಿ ತೊಡಗಿದವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು. ಸಾಂಪ್ರದಾಯಿಕ ಕೋಳಿ ಅಂಕವನ್ನೇ ತಡೆಯುವುದು ಸರಿಯಲ್ಲ ಎಂಬುದು ಆಯೋಜಕರ ವಾದ. ಈ ಸಮಸ್ಯೆಯನ್ನು ಸೂಕ್ತ ನಿಯಮಗಳನ್ನು ರೂಪಿಸುವ ಮೂಲಕವೇ ಬಗೆಹರಿಸಬೇಕಿದೆ. ಈ ಬಗ್ಗೆ ಕಾನೂನು ಸಚಿವರು ಮತ್ತು ಸರ್ಕಾರದ ಕಾನೂನು ಸಲಹೆಗಾರರ ಜೊತೆ ಮಾತನಾಡಿ, ಸಲಹೆಗಳನ್ನು ಕೊಟ್ಡಿದ್ದೇನೆ….

Read More

49ನೇಯ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮ ಜನವರಿ 10ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ

49ನೇಯ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮ * ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ . ಪತ್ರಿಕೆಯ ವತಿಯಿಂದ ನಡೆಯುವ 49ನೇ ಸರಣಿ ಕೃತಿ ಬಿಡುಗಡೆ ಹಿರಿಯ ಸಾಹಿತಿ ಬಿ .ಸತ್ಯವತಿ ಭಟ್ ಕೊಳಚಪ್ಪುರವರ ಕೌಟುಂಬಿಕ ಕಥಾಸಂಕಲನ * ಹೆಜ್ಜಾಲದ ಬಿಳಲುಗಳು ಕೃತಿ ಲೋಕಾರ್ಪಣೆಯೂ ಜನವರಿ 10ರಂದು ಶನಿವಾರ 10.30ಕ್ಕೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಅರುಣ ನಾಗರಾಜ್ ವಹಿಸುವರು…

Read More

ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ…20 ವರ್ಷ ನಂತರ ನೋಡುವಾ – ಸ್ಪೀಕರ್ ಖಾದರ್

ಮಂಗಳೂರು: ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ..ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ‌. ಕ್ಷೇತ್ರದ ಮತದಾರರು ಇನ್ನೂ ನಾಲ್ಕು ಸಲ ಗೆಲ್ಲಿಸಿ ಕಳುಹಿಸಿದರೆ, ಅಮೇಲೆ ನೋಡುವ ಎಂದು ಸ್ಪೀಕರ್ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಹುದ್ದೆಗೆ ತಾವೂ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ, ‘ಅದಕ್ಕೆ ತರಾತುರಿ ಇಲ್ಲ. ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ‌ ಎಂದರು. ಬಳ್ಳಾರಿ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಶಾಸಕರು ಸಿನಿಮೀಯ ಶೈಲಿಯಲ್ಲಿ ಪರಸ್ಪರ ಕಚ್ಚಾಡುವುದು, ರಾಜಕೀಯ ದ್ವೇಷ ಸಾಧಿಸುವುದು ಸರಿಯಲ್ಲ. ಇ‌ಂತಹ…

Read More

ಜ.3-4: ತಣ್ಣೀರುಬಾವಿ ಮ್ಯೂಸಿಕ್ ಫೆಸ್ಟಿವಲ್ ಹಿನ್ನಲೆ ವಾಹನ ಪಾರ್ಕಿಂಗ್ ಸ್ಥಳ ನಿಗದಿ, ಸಂಚಾರ ನಿಯಮ ಪಾಲನೆಗೆ ನೂತನ ಗೈಡ್ ಲೈನ್ .. !

ಮಂಗಳೂರು:ದ.ಕ. ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ ಜ.3 ಮತ್ತು 4ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿದೆ. ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ. ಕಾರ್ಯಕ್ರಮಗಳು ನಡೆಯುವ ಸಮಯ ಕುದುರೆಮುಖ ಜಂಕ್ಷನ್‌ನಿಂದ ತಣ್ಣೀರುಬಾವಿ ಬೀಚ್‌ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನು ಪಾರ್ಕ್ ಮಾಡುವಂತಿಲ್ಲ. ಸಾರ್ವಜನಿಕರು ತನ್ನ ವಾಹನಗಳನ್ನು ತಣ್ಣೀರುಬಾವಿ ಬೀಚ್ ರಸ್ತೆಯಲ್ಲಿ ನಿಗದಿಪಡಿಸಿದ…

Read More

ಸಮಾಜ ಸುಧಾರಕಿ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಆಚರಣೆ

ಮಂಗಳೂರು:ನಗರದ ಗಾಂಧಿನಗರ ಉರ್ವಾ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಾಮರಸ್ಯ ಮಂಗಳೂರು ನೇತೃತ್ವದಲ್ಲಿ ಶೋಷಿತರ ಎದೆಗಳಲ್ಲಿ ಅಕ್ಷರದ ಬೀಜ ಬಿತ್ತಿದ ಮೊಟ್ಟ ಮೊದಲ ಶಿಕ್ಷಕಿ,ಸಮಾಜ ಸುಧಾರಕಿ, ಅಕ್ಷರ ದಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಪ್ರಯುಕ್ತ , ಅಕ್ಷರದವ್ವ ಕುರಿತು ಮಾಹಿತಿ ತರಬೇತಿ ನಡೆಸಲಾಯಿತು.ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಸಾಮರಸ್ಯ ಮಂಗಳೂರು ಅಧ್ಯಕ್ಷೆ ಶ್ರೀಮತಿ ಮಂಜುಳಾ ನಾಯಕ್ ರವರು ಉದ್ಘಾಟಿಸಿದರು. ಸಾಮರಸ್ಯ ಮಂಗಳೂರು ಅಧ್ಯಕ್ಷೆ ಶ್ರೀಮತಿ ಮಂಜುಳಾ ನಾಯಕ್ ಹಾಗೂ ದಲಿತ ಪರ ಚಳುವಳಿಯ ಮುಖಂಡರಾದ ಶ್ರೀಯುತ ಮೋಹನಂಗಯ್ಯ ಸ್ವಾಮಿಯವರು ಸಾವಿತ್ರಿಬಾಯಿ…

Read More

ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಕನ್ನಡ ಚಲಚಿತ್ರ ಜನವರಿ 23ರಂದು ಕರ್ನಾಟಕದಾದ್ಯಂತ ಬಿಡುಗಡೆ… !

ಮಂಗಳೂರು : ಕೆವಿಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ. ಉಪಾಧ್ಯಕ್ಷ ಚಿತ್ರದ ಅನಿಲ್ ಕುಮಾರ್ ನಿರ್ದೇಶನದ ಬಹು ನಿರೀಕ್ಷಿತ ‘ಕಲ್ಟ್‌’ ಕನ್ನಡ ಸಿನಿಮಾ ದಿನಾಂಕ 23ರಂದು ಕರ್ನಾಟಕದಾದ್ಯಂತ ಸುಮಾರು 200ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಟ ಝೈಧ್ ಖಾನ್ ತಿಳಿಸಿದರು . ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಇದು ನನ್ನ ಎರಡನೇ ಚಿತ್ರವಾಗಿದ್ದು ಈ ಮೊದಲು ಬನಾರಸ್ ಎಂಬ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದೆ. ಕಲ್ಟ್…

Read More

ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನನ್ನು ಅಡ್ಡಗಟ್ಟಿ ಧಾಂಧಲೆ ಮಾಡಿದ ಗುಂಪು … !

ಮಂಗಳೂರು:ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ. ಶಾಲಾ‌ ಬಸ್‌ ಸ್ಕೂಟರ್‌ ಒಂದಕ್ಕೆ‌ ಡಿಕ್ಕಿ ಹೊಡೆಯುವ ಸಂಭವವಿತ್ತು‌ ಎಂದು ಆರೋಪಿಸಿ ಗುಂಪೊಂದು ಶಾಲಾ‌ ಬಸ್ ತಡೆದಿದೆ. ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ‌ ಬಸ್ ಇದಾಗಿದೆ. ಬಸ್ ಒಳಗೆ ಶಾಲಾ ಮಕ್ಕಳಿದ್ದರೂ ಗುಂಪು ಗಲಾಟೆಗೆ ಮುಂದಾಗಿದೆ. ಬಸ್ ನ ಸಿಬ್ಬಂದಿಗೆ ಅವಾಜ್ ಹಾಕಿದ ಗುಂಪು ಬಳಿಕ ಶಾಲಾ ಬಸ್ ಬಿಟ್ಟು ಕಳುಹಿಸಿದೆ.

Read More
error: Content is protected !!