ಕುದ್ರೋಳಿಯಲ್ಲಿ ವಿಶೇಷ ಗುರುಪೂಜೆ, ರಥೋತ್ಸವ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುವಾರ ಕ್ಯಾಲೆಂಡರ್ ಹೊಸ ವರ್ಷದ ಪ್ರಯುಕ್ತ ವಿಶೇಷ ಗುರುಪೂಜೆ, ಗಣಪತಿ ಹೋಮ ಹಾಗು ರಥೋತ್ಸವ ನೆರವೇರಿತು. ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ,ಸದಸ್ಯರಾದ ವೇದಕುಮಾರ್, ಪಿ.ಕೆ.ಗೌರವಿ, ರಾಧಾಕೃಷ್ಣ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಕಾವೂರು, ಜಯರಾಮ‌ ಕಾರಂದೂರು,…

Read More

ನಿಟ್ಟೆ ಕುಲಪತಿ ಡಾ.ವಿನಯ್ ಹೆಗ್ಡೆ ನಿಧನಕ್ಕೆ ಶಾಸಕ ಮಂಜುನಾಥ ಭಂಡಾರಿ ಸಂತಾಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ವಿನಯ್ ಹೆಗ್ಡೆ ಅವರು ಶಿಕ್ಷಣ ತಜ್ಞ ಮಾತ್ರವಲ್ಲದೆ ಉದ್ಯಮಿ, ಸಮಾಜ ಸೇವಕರಾಗಿ ಹೆಸರು ಪಡೆದಿದ್ದರು. ಅವರು ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು…

Read More

ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ

ಮಂಗಳೂರು:ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ. ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ ಮತ್ತು ನೀಲಿ ಬಣ್ಣದ ದಪ್ಪಗೆರೆಗಳ ಟೀ ಶರ್ಟ್, ಬಳಿ ಬಣ್ಣದ ಬರಹಗಳಿರುವ ಕಪ್ಪು ಬಣ್ಣದ ಸ್ಪೋರ್ಟ್ಸ್ ಪ್ಯಾಂಟ್ ಧರಿಸಿದ್ದಾರೆ. ಸದ್ಯ ಮೃತದೇಹವನ್ನು ಮೇಲೆತ್ತಿರುವ ಪಣಂಬೂರು ಪೊಲೀಸರು ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಚಹರೆಯ ವ್ಯಕ್ತಿಯ ಪರಿಚಯಸ್ಯರು, ವಾರೀಸುದಾರರು…

Read More

ವರ್ಷದ ಮೊದಲ ದಿನವೇ ಎಲ್‌ಪಿಜಿ ಬೆಲೆ ಏರಿಕೆ ಬಿಸಿ … !

ಮಂಗಳೂರು : ಹೊಸ ಕ್ಯಾಲೆಂಡರ್ ವರ್ಷದ ಮೊದಲ ದಿನವೇ ಎಲ್‌ಪಿಜಿ ಬಳಕೆದಾರರಿಗೆ ಬೆಲೆ ಏರಿಕೆಯ ಶಾಕ್‌ ತಟ್ಟಿದೆ. ಈ ಬಾರಿ ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದೆ. ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಮೊದಲು ರೂ.1580.50ಕ್ಕೆ ಲಭ್ಯವಾಗುತ್ತಿದ್ದರೆ, ಈಗ ರೂ.1691.50ಕ್ಕೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಬೆಲೆ ರೂ.1795ಕ್ಕೆ ಏರಿದ್ದು, ರೂ.111 ರಷ್ಟು ಹೆಚ್ಚಳವಾಗಿದೆ. ಚೆನ್ನೈ ಮತ್ತು ಬೆಂಗಳೂರಿನಲ್ಲಿ ಅನುಕ್ರಮವಾಗಿ ರೂ.1849.50 ಮತ್ತು ರೂ.1700 ರುಪಾಯಿಗಳಲ್ಲಿ ಸಿಲಿಂಡರ್ ಲಭ್ಯವಾಗಲಿದೆ….

Read More

ಬದುಕಿ ಬಾಳ ಬೇಕಾದ 13ರ ಹರೆಯದ ಬಾಲಕನ ಎದುರು ಯಮ ಸ್ವರೂಪಿಯಾಗಿ ಬಂದ ಕಾರು ಢಿಕ್ಕಿ ಹೊಡೆದು ಧಾರುಣ ಅಂತ್ಯ …. !

ಮಂಗಳೂರು :ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ಮಾರೂರು ಹೊಸಂಗಡಿ ಬಳಿ ಸಂಭವಿಸಿದೆ. ಹೊಸಂಗಡಿ ನಿವಾಸಿ ನಝೀರ್ ಅವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಬುಧವಾರ ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು…

Read More

ಗಾಂಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿ ಅರೆಸ್ಟ್

ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸುಮಾರು 21,000/- ರೂಪಾಯಿ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತುವಾದ ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ, ತಲಪಾಡಿ ರೈಲ್ವೇ ಟ್ರ್ಯಾಕ್ ಬಳಿ ಕಲ್ಪನೆ ಎಂಬಲ್ಲಿ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಕೃತ್ಯದಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು…

Read More

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ.ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ದಕ್ಷಿಣ ಕನ್ನಡ…

Read More

‘ಅವೇಕ್ ಕುಡ್ಲ’ ಅಪ್ಲಿಕೇಷನ್‌ಗೆ ಜ.1 ರಂದು ಚಾಲನೆ – ಕರಾವಳಿ ತ್ಯಾಜ್ಯ ವಿಲೇವಾರಿಗೆ ಸಹಾಯ.. !

ಮಂಗಳೂರು:ಅಂಬಾಮಹೇಶ್ವರಿ ಕ್ಷೇಮಾಭಿವೃದ್ಧಿ ಸಂಘವು 2015ರಲ್ಲಿ ಸ್ಥಾಪಿತವಾಗಿದ್ದು, ಕಳೆದ ಹತ್ತು ವರ್ಷಗಳಿಂದ ಮಂಗಳೂರು ನಗರದಲ್ಲಿ ವ್ಯವಸ್ಥಿತ ತ್ಯಾಜ್ಯ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ ವಿವಿಧ ಸರ್ಕಾರಿ ಇಲಾಖೆಗಳೊಂದಿಗೆ ಕೈಜೋಡಿಸಿ, ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ‘ಅವೇಕ್ ಕುಡ್ಲ’ (awake kudla) ಅಪ್ಲಿಕೇಷನ್‌ಗೆ ಜ.1 ರಂದು ಚಾಲನೆ ಸಿಗಲಿದ್ದು ತ್ಯಾಜ್ಯ ಹಾಗೂ ಸಂಚಾರ ನಿರ್ವಹಣೆ ಸಂಬಂಧಿ ಸಮಸ್ಯೆಗಳಿದ್ದರೆ ದೂರು ನೀಡಬಹುದು ಎಂದು ಸಂಘದ ಅಧ್ಯಕ್ಷ ಸೀತಾರಾಮ ಎ. ತಿಳಿಸಿದರು….

Read More

ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ ….. !

ಮಂಗಳೂರು:ಕರಾವಳಿ ಶ್ರದ್ದಾ ಭಕ್ತಿಯ ತಾಣ ಇಲ್ಲಿ ಹಬ್ಬ ಆಚರಣೆಗಳನ್ನು ತುಂಬಾನೇ ವಿಜೃಂಣೆಯಿಂದ ಆಚರಿಸಿಕೊಂಡು ಬರಲಾಗುತ್ತದೆ .ಅದರಂತೆ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಧನುರ್ಮಾಸದ ವೈಕುಂಠ ಏಕಾದಶಿಯನ್ನು ವಿವಿಧ ವೈಧಿಕ ಆಚರಣೆಗಳಿಂದ ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ . ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ಶ್ರೀ ಸನ್ನಿಧಿಯಲ್ಲಿ ನಡೆಯುತ್ತಾ ಇದೆ . ರಾಜ್ಯ – ಅಂತರರಾಜ್ಯ ದಿಂದ ವೆಂಕಟರಮಣ ಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಬಹು ದೂರದಿಂದ ಭಕ್ತರು ಆಗಮಿಸುತ್ತಾ ಇದ್ದಾರೆ . ಕ್ಷೇತ್ರಕ್ಕೆ ಭೇಟಿ…

Read More

ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬಂದಿಗೆ ಹಲ್ಲೆ .ಹಲ್ಲೆ ನಡೆಸಿದ ಆರೋಪಿ ವಶಕ್ಕೆ … !

ಬಂಟ್ವಾಳ:ಬಿ.ಸಿ.ರೋಡು ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ನಲ್ಲಿ ಆರೋಪಿಗಳಾದ ಲಾರಿ ಚಾಲಕ ಹಾಗೂ ಕ್ಲೀನರ್ ಟೋಲ್ ಗೇಟ್ ಗೆ ಹಾನಿ ಮಾಡಿ ಸಿಬಂದಿಗೆ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದ್ದು, ಘಟನೆಯಲ್ಲಿ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.ಚಿಕ್ಕಮಗಳೂರು ಮೂಲದ ಲಾರಿ ಚಾಲಕ ಭರತ್(23) ಹಾಗೂ ಕ್ಲೀನರ್ ತೇಜಸ್(26) ಪ್ರಕರಣದ ಆರೋಪಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಲ್ ಮೇಲ್ವಿಚಾರಕ ಕಾಸರಗೋಡಿನ ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ. ಪೊಲೀಸರಿಗೆ ದೂರು ನೀಡಿದ್ದಾರೆ.ಆರೋಪಿಗಳು ಸೋಮವಾರ ಮುಂಜಾನೆ ಟಾಟಾ ಲಾರಿಯಲ್ಲಿ ಟೋಲ್ ಬಳಿ ವಿರುದ್ಧ…

Read More
error: Content is protected !!