ಯುವಜನರು ವಿಕಸಿತ ಭಾರತಕ್ಕಾಗಿ ತಮ್ಮ ಆಲೋಚನೆಗಳನ್ನು ರಾಷ್ಟ್ರಮಟ್ಟಕ್ಕೆ ತಲುಪಿಸಲಿ

ಮಂಗಳೂರು: ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಪ್ರತಿವರ್ಷ ಜ.12ರಂದು ನಡೆಯುವ ರಾಷ್ಟ್ರೀಯ ಯುವಜನೋತ್ಸವವನ್ನು ‘ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್’ ಹೆಸರಿನಲ್ಲಿ ಆಯೋಜಿಸಲಾಗುತ್ತಿದ್ದು, 15ರಿಂದ 29 ವರ್ಷದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮೈ ಭಾರತ್ ಜಿಲ್ಲಾ ಡೆಪ್ಯೂಟಿ ಡೈರೆಕ್ಟರ್ ಉಲ್ಲಾಸ್ ಮನವಿ ಮಾಡಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರ ಪ್ರತಿಭೆ, ಜ್ಞಾನ, ಸೃಜನಶೀಲತೆ ಹಾಗೂ ವಿಕಸಿತ ಭಾರತದ ಕುರಿತಾದ ಆಲೋಚನೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ವಿವಿಧ ವಿಭಾಗಗಳಲ್ಲಿ ಕಾರ್ಯಕ್ರಮಗಳನ್ನು…

Read More

ಕೆಎಂಸಿ ಮಂಗಳೂರಿನಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

ಮಂಗಳೂರು: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ (MAHE) ಅಂಗಸಂಸ್ಥೆಯಾದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC), ಮಂಗಳೂರಿನ ಲೈಟ್‌ಹೌಸ್ ಹಿಲ್ ರೋಡ್ ಕ್ಯಾಂಪಸ್‌ನಲ್ಲಿ ಸೆ.14 ಮತ್ತು 15ರಂದು 70ನೇ ವರ್ಷದ ಗಣೇಶ ಚತುರ್ಥಿ ಉತ್ಸವವನ್ನು ಆಚರಿಸಲು ಸಜ್ಜಾಗಿದೆ ಎಂದು ಕೆಎಂಸಿ ಮಂಗಳೂರು ಡೀನ್ ಡಾ. ಬಿ. ಉಣ್ಣಿಕೃಷ್ಣನ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಸಿಯ ಗಣೇಶ ಚತುರ್ಥಿ ಆಚರಣೆ ಏಳು ದಶಕಗಳಿಂದ ಕ್ಯಾಂಪಸ್ ಜೀವನದ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳಿಂದ ಆರಂಭಗೊಂಡ ಈ ಉತ್ಸವ ಇಂದು…

Read More

ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ಆಗ್ರಹಿಸಿ ದ.ಕ.ದಲ್ಲಿ 10 ಲಕ್ಷ ಸಹಿ ಅಭಿಯಾನ

ಮಂಗಳೂರು: ದೇಶದಲ್ಲಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಕಾನೂನು ಜಾರಿಗೆ ತರಬೇಕು ಹಾಗೂ ಗೋವನ್ನು ರಾಷ್ಟ್ರಮಾತೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಂಚಾಲಕ ಶರಣ್ ಪಂಪವೆಲ್ ತಿಳಿಸಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ ‘ಗೋಮಾತೆಯ ಗೌರವ’ ಅಭಿಯಾನದ ಮೂರನೇ ಹಂತದ ಭಾಗವಾಗಿ ಜಿಲ್ಲೆಯ ವಿವಿಧ ಹಿಂದೂಪರ ಸಂಘಟನೆಗಳು, ಮಠ–ಮಂದಿರಗಳು ಹಾಗೂ ಗೋಶಾಲೆಗಳ ಸಹಯೋಗದಲ್ಲಿ ಅಭಿಯಾನ ನಡೆಯಲಿದೆ. ಮುಂದಿನ…

Read More

ದ.ಕ.ದ 7 ಗ್ರಾಪಂಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ

ಮಂಗಳೂರು, ಸೆ.10: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಪಂಜ, ಉಳ್ಳಾಲ ತಾಲೂಕಿನ ತಲಪಾಡಿ, ಕೊಣಾಜೆ ಹಾಗೂ ಬಾಳೆಪುಣಿ, ಮಂಗಳೂರು ತಾಲೂಕಿನ ಬಾಳ ಮತ್ತು ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯಿತಿಗಳಲ್ಲಿ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ನಡೆಸಿವೆ. ಲೋಕಾಯುಕ್ತ ಕೇಂದ್ರ ಕಚೇರಿಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಬಿ.ಪಿ….

Read More

ಹೂಹಾರ, ಪಟಾಕಿ, ಸಿಹಿ ಹಂಚಿ ಪದ್ಮರಾಜ್ ಪೂಜಾರಿ ಆಯ್ಕೆಗೆ ಕಾರ್ಯಕರ್ತರ ಸಂಭ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಪದ್ಮರಾಜ್ ಪೂಜಾರಿ ಅವರನ್ನು ಕಾರ್ಯಕರ್ತರು ಇಂದು ಅಭಿನಂದಿಸಿದರು. ಎನ್.ಎಸ್.ಯು.ಐ. ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳು ಕಾಂಗ್ರೆಸ್ ಕಛೇರಿ ಎದುರು ಆತ್ಮೀಯವಾಗಿ ಹೊಸ ಅಧ್ಯಕ್ಷರನ್ನು ಸ್ವಾಗತಿಸಿದರು .ನೂತನ ಅಧ್ಯಕ್ಷರಿಗೆ ಹೂ ಹಾರ ,ಹೂ ಗುಚ್ಚ ನೀಡಿ ,ಪಟಾಕಿ ಸಿಡಿಸಿ ,ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದರು . ಈ ಸಂದರ್ಭದಲ್ಲಿ ಘೋಷಣೆ ಕೂಗಿ ಹರ್ಷ ವ್ಯಕ್ತ ಪಡಿಸಿದರು.ಎಲ್ಲರ ನಿರೀಕ್ಷೆಗೆ ಸ್ಪಂದಿಸುವುದಾಗಿ ಹಾಗು ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಪದ್ಮರಾಜ ಪೂಜಾರಿ ಹೇಳಿದರು.

Read More

ದ.ಕ.ದಲ್ಲಿ ಕಾಂಗ್ರೆಸ್ ಗೆಲುವಿನ ಗತವೈಭವ ಮರುಕಳಿಸುವುದೇ ಗುರಿ: ಪದ್ಮರಾಜ್

ಮಂಗಳೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಗೆಲುವಿನ ಗತವೈಭವವನ್ನು ಮರಳಿ ತರುವುದೇ ತಮ್ಮ ಮೊದಲ ಆದ್ಯತೆ ಎಂದು ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿನ ಪಕ್ಷದ ಹಿನ್ನಡೆಯನ್ನು ಪುನರ್‌ವಿಮರ್ಶಿಸಿ, ತಳಮಟ್ಟದಿಂದ ಪಕ್ಷ ಸಂಘಟನೆ ಬಲಪಡಿಸಲಾಗುವುದು. ಹಿರಿಯ-ಕಿರಿಯ ನಾಯಕರನ್ನು ವಿಶ್ವಾಸಕ್ಕೆ ಪಡೆದು ಗ್ರಾಮ ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಸಂಪರ್ಕಿಸಿ ಸಂಘಟನೆಗೆ ಹೊಸ ಚೈತನ್ಯ ನೀಡಲಾಗುವುದು ಎಂದರು….

Read More

ಮೊನಾಲಿಸಾ ಇಸ್ ಇನ್ ಟ್ರಬಲ್ ಚಿತ್ರದ ನಾಯಕಿ ವಿನುತಾ ಸಿ. ನಾಯ್ಕ್ ರವರಿಗೆ ಕಲಾ ರತ್ನ ಪ್ರಶಸ್ತಿ-2026

ಇತ್ತೀಚೆಗೆ ಮೇ 15 ರಿಂದ 17 ರವರೆಗೆ ಮಂಗಳೂರಿನ ಭಾರತ್ ಸಿನಿಮಾ ಚಿತ್ರ ಮಂದಿರದಲ್ಲಿ 3 ದಿನಗಳಲ್ಲಿ ಹೌಸ್ ಫುಲ್ ಆಗಿ 8 ಪ್ರದರ್ಶನ ಕಂಡ ಕನ್ನಡದ ಕರಾವಳಿಯ ಮೊಟ್ಟಮೊದಲ ಟೆಲಿ ಮೂವಿ ಮೊನಾಲಿಸಾ ಇಸ್ ಇನ್ ಟ್ರಬಲ್ ಈ ಚಿತ್ರದ ನಾಯಕಿ ವಿನುತಾ ಸಿ. ನಾಯ್ಕ್ ಅವರಿಗೆ *ಕಲಾ ರತ್ನ ಪ್ರಶಸ್ತಿ -2026 ಲಭಿಸಿದೆ. ಬೃಂದಾವನ್ N ಶೆಟ್ಟಿ ನಿರ್ದೇಶನದ, ನವೀನ್ ಕುಮಾರ್ ಶೆಟ್ಟಿ ನಿರ್ಮಾಣದ, ಶ್ರೇಯಸ್ ಕುಮಾರ್ ಫರಂಗಿ ಪೇಟೆ ಇವರು ವಿಭಿನ್ನವಾಗಿ, ವಿಶಿಷ್ಟವಾಗಿ…

Read More

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಲಿ: ವೇದವ್ಯಾಸ ಕಾಮತ್ ಆಗ್ರಹ

ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕೆಂಬ ತುಳುವರ ಒಕ್ಕೊರಲ ಬೇಡಿಕೆಯನ್ನು ಪರಿಗಣಿಸಿ ಸೆಪ್ಟೆಂಬರ್ 18 ರಂದು ಮಂಗಳೂರಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟದಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಸರ್ಕಾರಕ್ಕೆ ಆಗ್ರಹಿಸಿದರು. ಈ ಬಗ್ಗೆ ನಾನು ಶಾಸಕನಾದಾಗಿನಿಂದಲೂ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ತುಳು ಪರ ಹೋರಾಟಗಾರರೊಂದಿಗೆ ತುಳು ಲಿಪಿ ಶಾಸನ, ಸಾವಿರಾರು ವರ್ಷಗಳ ಇತಿಹಾಸವಿರುವ ತಾಳೆ ಓಲೆಗಳು, ಪಾಡ್ದನ, ದೈವಾರಾಧನೆಯ ನುಡಿಗಳು, ತುಳುನಾಡಿನ ಪುರಾತನ ದೇವಸ್ಥಾನ ಹಾಗೂ…

Read More

ಪುತ್ತೂರು: ಆಟೋ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ – ವಿಮೆನ್ ಇಂಡಿಯಾ ಮೂವ್‌ಮೆಂಟ್ ತೀವ್ರ ಖಂಡನೆ

ಪುತ್ತೂರು: ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದ ಮಹಿಳೆಯೊಬ್ಬರಿಗೆ ಆಟೋ ಚಾಲಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆಯನ್ನು ‘ವಿಮೆನ್ ಇಂಡಿಯಾ ಮೂವ್‌ಮೆಂಟ್’ (WIM) ತೀವ್ರವಾಗಿ ಖಂಡಿಸಿದೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶಿನೀರ ಅವರು ಆಘಾತ ವ್ಯಕ್ತಪಡಿಸಿದ್ದು, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9ರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ನಿವಾಸಿಯಾದ ಮಹಿಳೆಯೊಬ್ಬರು ಕೆಲಸದ ನಿಮಿತ್ತ ಮನೆಯಿಂದ ಹೊರಟು ಪರಿಚಯದ ಆಟೋ ರಿಕ್ಷಾದಲ್ಲಿ ಪುತ್ತೂರಿಗೆ ತೆರಳುತ್ತಿದ್ದ ವೇಳೆ, ಆಟೋ…

Read More

ಬೆಂಗಳೂರು–ಮಂಗಳೂರು ವಂದೇ ಭಾರತ್‌ ರೈಲು ಮತ್ತೊಮ್ಮೆ ಪರೀಕ್ಷಾರ್ಥ ಸಂಚಾರ

ಮಂಗಳೂರು: ಬೆಂಗಳೂರು – ಮಂಗಳೂರು ವಂದೇಭಾರತ್ ರೈಲು ಪರೀಕ್ಷಾರ್ಥವಾಗಿ ಸೆ. 10ರಂದು ಮತ್ತೂಮ್ಮೆ ಸಂಚಾರ ನಡೆಸಿದೆ. ಬೆಳಗ್ಗೆ ಬೆಂಗಳೂರಿನ ಯಶವಂತ ಪುರದಿಂದ ಹೊರಟು ಮಧ್ಯಾಹ್ನ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ತಲುಪಿದೆ. ಬಳಿಕ ಮ ಗಳೂರಿನಿಂದ ಬೆಂಗಳೂರಿಗೆ ವಾಪಸಾಗಲಿದೆ ಎಂದು ತಿಳಿದುಬಂದಿದೆ. ಸೆ. 5ರಂದು ವಂದೇ ಭಾರತ್ ರೈಲು ಪರೀಕ್ಷಾರ್ಥವಾಗಿ, ಮುಖ್ಯವಾಗಿ ಸಮಯ ನಿಗದಿಗಾಗಿ ಬೆಂಗಳೂರು- ಮಂಗಳೂರು ನಡುವೆ ಸಂಚರಿಸಿತ್ತು. ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಆಗಮಿಸಿ ವಾಪಸಾಗಿತ್ತು. ಆದರೆ ಕೆಲವು ತಾಂತ್ರಿಕ ತೊಡಕುಗಳಿಂದಾಗಿ ನಿಗದಿತ ಅವಧಿಗಿಂತ ಸುಮಾರು…

Read More
error: Content is protected !!