ಡಿ 13 ರಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ದ.ಕ ಜಿಲ್ಲಾ ಮಹಾಸಮ್ಮೇಳನ ಹಾಗೂ ವಿಜಯ ದಿವಸ್ ಆಚರಣೆ

ಮಂಗಳೂರು:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ದ.ಕ ಜಿಲ್ಲಾ ಮಹಾಸಮ್ಮೇಳನ ಹಾಗೂ ವಿಜಯ ದಿವಸ್ ಜಂಟಿ ಆಚರಣೆಯು ಡಿ 13 ರಂದು ಬೆಳಿಗ್ಗೆ ೯.೩೦ ರಿಂದ ಕಡಬ ತಾಲ್ಲೂಕಿನ ನೆಲ್ಯಾಡಿ ಬಿರ್ವಾ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಸೈನಿಕರ ಸಂಘದ ಜಿಲ್ಲಾಧ್ಯಕ್ಷರು , ಮಾಜಿ ಸೈನಿಕರಾದ ನೋಬರ್ಟ್ ರೋಡಿಗ್ರಾಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಸಭೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷರಾದ ಡಾ|…

Read More

ಡಿ.13 ರಂದು : ಜಿಎಸ್‌ಬಿ ಸೇವಾ ಸಂಘದ ” ವಾಗ್ದೇವಿ ಟವರ್ಸ್‌ ಕಟ್ಟಡದ ಶಿಲಾನ್ಯಾಸ

ಮಂಗಳೂರು :ನಗರದ ಕದ್ರಿ ಪರಿಸರದಲ್ಲಿ ಸುಮಾರು 60000 ಚದರ ಅಡಿಗಳ “ವಾಗ್ವೇವಿ ಟವರ್ಸ” ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಡಿ 13 ರಂದು ಬೆಳಿಗ್ಗೆ 8:31ಕ್ಕೆ ಉದ್ಯಮಿ ಡಾ.ಪಿ.ದಯಾನಂದ ಪೈ ಯವರು ಈ ಹೊಸ ಯೋಜನೆಯ ಶಿಲಾನ್ಯಾಸ ಮಾಡಲಿದ್ದಾರೆ ಎಂದು ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ ಅಧ್ಯಕ್ಷರಾದ ಡಾ.ಕಸ್ತೂರಿ ಮೋಹನ್ ಪೈ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , 60000 ಚದರ ಅಡಿಗಳ ‘ವಾಗ್ದೇವಿ ಟವರ್ಸ್’ ಕಟ್ಟಡದ ಶಿಲಾನ್ಯಾಸ…

Read More

ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ಚತುರ್ಥ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 07-12-2025ನೇ ಅದಿತ್ಯವಾರದಂದು ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು. ಅಂದು ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ ಹಾಗೂ ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಭಜನೆ ಹಾಗೂ ಹರಿನಾಮ…

Read More

ಡಿಸೆಂಬರ್ 13 ಮತ್ತು 14 ರಂದು ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಮತ್ತು ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಯುಕ್ತ ಆಶ್ರಯದಲ್ಲಿ “ಸೌಹಾರ್ದ ಕ್ರಿಸ್ಮಸ್ ಉತ್ಸವ 2025”

ಮಂಗಳೂರು: ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಮತ್ತು ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಯುಕ್ತ ಆಶ್ರಯದಲ್ಲಿ “ಸೌಹಾರ್ದ ಕ್ರಿಸ್ಮಸ್ ಉತ್ಸವ 2025” ಆಚರಣೆಯನ್ನು ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್ನಲ್ಲಿ, ಮಧ್ಯಾಹ್ನ 2:30ರಿಂದ ರಾತ್ರಿ 9:30ರ ತನಕ ನಡೆಯಲಿದೆ ಎಂದು ವಿಚಾರ ವೇದಿಕೆಯ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸರ್ವ ಧರ್ಮದ ಹಬ್ಬಗಳು…

Read More

ಡಿ.12ಕ್ಕೆ ತೆರೆ ಮೇಲೆ ಘರ್ಜಿಸಲು ಬರುತ್ತಿದೆ ಬಹುನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾ… !

ಮಂಗಳೂರು:ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ನಿರ್ದೇಶಕ ಭರತ್ ಶೆಟ್ಟಿ, “ಈಗಾಗಲೇ ಸಿನಿಮಾದ ಮೂರು ಪ್ರೀಮಿಯರ್ ಶೋಗಳು ನಡೆದಿದ್ದು ಪ್ರೇಕ್ಷಕರು…

Read More

ರೋಡಲ್ಲಿ ತೇಲಾಡಿದ ಮೊಟ್ಟೆ … !?

ಮಂಗಳೂರು: ಮೊಟ್ಟೆ ಸಾಗಾಟದ ವಾಹನಕ್ಕೆ ಲಾರಿ ಢಿಕ್ಕಿಯಾಗಿ ರಸ್ತೆ ತುಂಬಾ ಮೊಟ್ಟೆ ಚೆಲ್ಲಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದುದರಿಂದ ಈ ಹಾನಿ ಸಂಭವಿಸಿದೆ. ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವಾಗಿದೆ. ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ವಾಹನಕ್ಕೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಹಿಂದಿನಿಂದ ಲಾರಿ ಢಿಕ್ಕಿಯಾಗಿದೆ. ಇದರಿಂದ ಡಿವೈಡರ್ ಮೇಲೆ ಹತ್ತಿದ್ದ ಮೊಟ್ಟೆ ಸಾಗಾಟದ ವಾಹನ ಮಗುಚಿ…

Read More

ದಕ್ಷಿಣ ಕನ್ನಡ ಜಿಲ್ಲಾ ಪೌರಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘ ನೇತೃತ್ವದಲ್ಲಿ ಊರ್ವ ಪತ್ರಿಕಾ ಭವನದಿಂದ ಜಿಲ್ಲಾ ಪಂಚಾಯತ್ ಕಚೇರಿ ತನಕ ಕಾಲ್ನಡಿಗೆ ಜಾಥಾ…. !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೌರಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘ (ರಿ) ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್‌ಗಳಲ್ಲಿ ದುಡಿಯುತ್ತಿರುವ ಸ್ವಚ್ಛತಾ ಕಾರ್ಮಿಕರು ಮತ್ತು ಸ್ವಚ್ಛತಾ ವಾಹನ ಚಾಲಕರು ತಮ್ಮ ಬೇಡಿಕೆಗಳಿಗೆ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಮಂಗಳವಾರ ಉರ್ವಾ ಸ್ಟೋರ್‌ನಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಊರ್ವ ಪತ್ರಿಕಾ ಭವನದಿಂದ ಕಾಲ್ನಡಿಗೆ ಜಾಥಾ ಹೊರಟ ಕಾರ್ಮಿಕರು ಘೋಷಣೆ ಕೂಗುತ್ತ ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ…

Read More

ಮಂಗಳೂರು: ಅಕ್ರಮ ಎಂಡಿಎಂಎ ಮಾರಾಟ- ಮೂವರು ಆರೋಪಿಗಳ ಬಂಧನ

ಮಂಗಳೂರು : ತಲಪಾಡಿ ಗ್ರಾಮದ ತಚ್ಚಣಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದ ಬಗ್ಗೆ “ವಿಶ್ವಾಸಾರ್ಹ ಮಾಹಿತಿ” ಆಧಾರದ ಮೇಲೆ ದಾಳಿ ನಡೆಸಿ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಬ್ದುಲ್ ರವೂಫ್ (30), ಶರೀಫ್ ಅಲಿಯಾಸ್ ಅಮೀನ್ (34) ಮತ್ತು ನಿಯಾಜ್ (23) ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 42 ಗ್ರಾಂ ಎಂಡಿಎಂಎ, ಒಂದು ಟೊಯೋಟಾ ಕಾರು, ಮೂರು ಮೊಬೈಲ್ ಫೋನ್ ಹ್ಯಾಂಡ್‌ಸೆಟ್‌ಗಳು ಮತ್ತು 2,500 ರೂ. ನಗದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಪ್ರಾಥಮಿಕ ವಿಚಾರಣೆಯಲ್ಲಿ ನಿಯಾಜ್…

Read More

ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ 2 ವರ್ಷದ ಮಗು ಪತ್ತೆ

ಮಂಗಳೂರು: ಮಂಗಳೂರು ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಜುಲೈ 7 ರಂದು ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಮಂಗಳೂರು ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ. ಈ ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ (ದೂರವಾಣಿ ಸಂಖ್ಯೆ:0824-2440004) ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಖಂಡಿಸಿ ವಿಶ್ವ ಹಿಂದು ಪರಿಷತ್ ಮಂಗಳೂರು ಪ್ರತಿಭಟನೆ…. !

ಮಂಗಳೂರು:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ಮಾಡುವುದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ ಮಂಗಳೂರು ಗೋರಕ್ಷಾ ವಿಭಾಗ ವತಿಯಿಂದ ನಗರದ ಮಿನಿ ವಿಧಾನಸೌಧ ಎದುರು ಸೋಮವಾರ ಪ್ರತಿಭಟನೆ ನಡೆಯಿತು. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಈಗಿರುವ ಕಾನೂನು ಪ್ರಬಲವಾಗಿದ್ದು, ಅದನ್ನು ಯಥಾವತ್ತಾಗಿ ಜಾರಿಗೊಳಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕೇ ಹೊರತು ಯಾವುದೇ ಕಾರಣಕ್ಕೂ ಕಾಯ್ದೆಯನ್ನು ಸಡಿಲಗೊಳಿಸಬಾರದು. ಆದರೆ ರಾಜ್ಯ ಸರ್ಕಾರವು ಕಾನೂನು ಸಡಿಲಗೊಳಿಸಿ ಗೋ ಕಳ್ಳರಿಗೆ ಅನುಕೂಲ ಮಾಡಿಕೊಡಲು…

Read More
error: Content is protected !!