RSS ನೋಂದಣಿ, ಸರ್ಕಾರಿ ನೌಕರರ ಅಮಾನತು ಕುರಿತು ಅನುಪಮಾ ಶೆಣೈ ಪ್ರಶ್ನೆ

ಮಂಗಳೂರು: ಆರ್‌ಎಸ್‌ಎಸ್‌ ನೋಂದಣಿ ವಿಚಾರ ಹಾಗೂ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಸರ್ಕಾರಿ ನೌಕರರನ್ನು ಅಮಾನತುಗೊಳಿಸಿರುವ ಕುರಿತು ಮಾಜಿ ಡಿವೈಎಸ್ಪಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಅನುಪಮಾ ಶೆಣೈ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ಯಾವುದೇ ಕೋಮುಗಲಭೆಯಲ್ಲಿ ಭಾಗಿಯಾಗಿರುವ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಪ್ರಶ್ನೆಗೆ ‘ಇಲ್ಲ’ ಎಂಬ ಉತ್ತರ ನೀಡಲಾಗಿದೆ. ಆದರೆ ಗಲಭೆ ಪ್ರಕರಣ ಎದುರಿಸುತ್ತಿರುವ ರಾಜಕೀಯ ನಾಯಕರು ಹಾಗೂ ಕಾರ್ಯಕರ್ತರು ಆರ್‌ಎಸ್‌ಎಸ್‌ ಸದಸ್ಯರೇ ಎಂಬುದನ್ನೂ ಪರಿಶೀಲಿಸಬೇಕಿತ್ತು ಎಂದು ಹೇಳಿದರು….

Read More

ಪ್ರವಾಸೋದ್ಯಮ, ಮೀನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ: ವಿವೇಕಾನಂದ ಸಾಲಿನ್ಸ್

ಮಂಗಳೂರು:* ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಯುವಕರಿಗೆ ಉದ್ಯೋಗ ಹಾಗೂ ಉದ್ಯಮಾವಕಾಶ ಕಲ್ಪಿಸಲು ನೀತಿಗಳಲ್ಲಿ ಅಗತ್ಯ ಬದಲಾವಣೆ ತರಬೇಕು ಎಂದು ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಆಗ್ರಹಿಸಿದರು. ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಹಿಂದೆ ನೀಡಿದ್ದ ಭರವಸೆಯ ಬಳಿಕ ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಮಹತ್ವದ ಸಭೆ ನಡೆದಿಲ್ಲ ಎಂದು ಅವರು ಟೀಕಿಸಿದರು. ಜಿಲ್ಲೆಯಲ್ಲಿ…

Read More

ಸೆ.26ರಂದು ‘ಸ್ವರ ಕುಡ್ಲ–ಸೀಸನ್‌ 8’ ಗ್ರ್ಯಾಂಡ್ ಫಿನಾಲೆ

ಮಂಗಳೂರು: ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ 19ನೇ ವಾರ್ಷಿಕೋತ್ಸವದ ಅಂಗವಾಗಿ ‘ಸ್ವರ ಕುಡ್ಲ–ಸೀಸನ್‌ 8’ರ ಗ್ರ್ಯಾಂಡ್ ಫಿನಾಲೆ, ವಾರ್ಷಿಕೋತ್ಸವ ಸಮಾರಂಭ, ಪ್ರಶಸ್ತಿ ಪ್ರದಾನ, ಅಭಿನಂದನಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಸೆ.26ರಂದು ಮಧ್ಯಾಹ್ನ 2 ಗಂಟೆಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಧನುರಾಜ್ ಅತ್ತಾವರ ತಿಳಿಸಿದ್ದಾರೆ. 2007ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರಾವಳಿ ಸಂಗೀತ ಕಲಾವಿದರ ಒಕ್ಕೂಟವು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗಾಯಕರು, ಹಿನ್ನೆಲೆ ವಾದಕರು ಸೇರಿದಂತೆ 350ಕ್ಕೂ…

Read More

ಜಪ್ಪಿನಮೊಗರುವಿನಲ್ಲಿ ಸೆ.13ರಿಂದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ : ಜೆ. ನಾಗೇಂದ್ರ ಕುಮಾರ್

ಮಂಗಳೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಜಪ್ಪಿನಮೊಗರು ಇದರ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.13ರಿಂದ 15ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಜೆ. ನಾಗೇಂದ್ರ ಕುಮಾರ್ ತಿಳಿಸಿದ್ದಾರೆ. ಸೆ.13ರಂದು ಸಂಜೆ 4 ಗಂಟೆಗೆ ಜಪ್ಪಿನಮೊಗರು ಶ್ರೀ ವೈದ್ಯನಾಥ ಮಹಾದ್ವಾರದಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಶ್ರೀ ವಿಶ್ವೇಶ್ವರನ ವಿಗ್ರಹ ಹಾಗೂ ಭಕ್ತರು ಸಮರ್ಪಿಸಿದ ವಿವಿಧ ಹರಕೆ ಸಾಮಗ್ರಿಗಳನ್ನು ಗಣೇಶ ಮಂಟಪಕ್ಕೆ ತರಲಾಗುವುದು. ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ…

Read More

ಕ್ಯಾಂಪ್ಕೊಗೆ ದಾಖಲೆ ಸಾಧನೆ: ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

ಮಂಗಳೂರು: ಅಡಿಕೆ ಮಾರುಕಟ್ಟೆಯ ಏರಿಳಿತ ಹಾಗೂ ಕೊಕ್ಕೊ ವಲಯದ ಸವಾಲುಗಳ ನಡುವೆಯೂ ಕ್ಯಾಂಪ್ಕೊ 2025-26ನೇ ಆರ್ಥಿಕ ವರ್ಷದಲ್ಲಿ ದಾಖಲೆ ಸಾಧನೆ ಮಾಡಿದ್ದು, ₹3,735 ಕೋಟಿ ವಹಿವಾಟು ಹಾಗೂ ₹49.62 ಕೋಟಿ ತೆರಿಗೆಪೂರ್ವ ಲಾಭ ಗಳಿಸಿದೆ. ಸದಸ್ಯರಿಗೆ ಶೇ.14ರಷ್ಟು ಡಿವಿಡೆಂಡ್ ನೀಡಲು ನಿರ್ದೇಶಕ ಮಂಡಳಿ ಶಿಫಾರಸು ಮಾಡಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದ್ದಾರೆ. ಅವರು ನಗರದ ಕ್ಯಾಂಪ್ಕೊ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಅಡಿಕೆ ವಹಿವಾಟಿನಲ್ಲಿ ₹2,924.32 ಕೋಟಿ ಮೌಲ್ಯದ 58,742.76 ಮೆಟ್ರಿಕ್ ಟನ್…

Read More

ಧರ್ಮಸ್ಥಳ ಭಜನಾ ಕಮ್ಮಟ ಸಿದ್ಧತಾ ಸಭೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಕೇಂದ್ರ ಸಮಿತಿಯ ನೇತೃತ್ವದಲ್ಲಿ ಹಾಗೂ ಧರ್ಮಾಧಿಕಾರಿ ಡಾl ಡಿ. ವೀರೇಂದ್ರ ಹೆಗ್ಗಡೆ-ಶ್ರೀಮತಿ ಹೇಮಾವತಿ ಅಮ್ಮನವರ ಶುಭಾಶೀರ್ವಾದಗಳೊಂದಿಗೆ ಸೆಪ್ಟೆಂಬರ್ 28 ರಿಂದ ಒಕ್ಟೋಬರ್ 4 ನೇ ತಾರೀಕಿನ ತನಕ ಧರ್ಮಸ್ಥಳದಲ್ಲಿ ಜರಗಲಿರುವ 28 ನೇ ವರುಷದ ಭಜನಾ ಕಮ್ಮಟದ ಸಿದ್ಧತಾ ಸಭೆಯು ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ವ್ಯಾಸ ಮಂಟಪದಲ್ಲಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ಡಾl ಕೆ.ಎನ್.ವೆಂಕಟ್ರಮಣ ಹೊಳ್ಳ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ವರುಷದ ಕಮ್ಮಟದಲ್ಲಿ ಹೆಚ್ಚಿನ…

Read More

ಸೆ. 14 ರಂದು ಶಕ್ತಿನಗರದಲ್ಲಿ ‘ಹಿಂದು ಮಹಾ ಶಕ್ತಿ ಗಣಪತಿ’ ಉತ್ಸವ

ಮಂಗಳೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ–ದುರ್ಗಾವಾಹಿನಿ ಶ್ರೀ ವೈದ್ಯನಾಥ ಶಾಖೆ ಶಕ್ತಿನಗರ ಸಹಕಾರದೊಂದಿಗೆ ಶ್ರೀ ಗುರು ದತ್ತಾತ್ರೇಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರಥಮ ವರ್ಷದ ‘ಹಿಂದು ಮಹಾ ಶಕ್ತಿ ಗಣಪತಿ’ ಉತ್ಸವವು ಸೆ. 14 ರಂದು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬಳಿಯಿರುವ ಛತ್ರಪತಿ ಶಿವಾಜಿ ವೃತ್ತದ ಬಳಿ ನಡೆಯಲಿದೆ. ಉತ್ಸವದ ಅಂಗವಾಗಿ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆ. 14 ಬೆಳಗ್ಗೆ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಇವರ…

Read More

ಪುತ್ತೂರಿನಲ್ಲಿ ವಂದೇ ಭಾರತ್ ಶಾಶ್ವತ ನಿಲುಗಡೆಗೆ ‘ಗ್ರೀನ್ ಸಿಗ್ನಲ್’.ವೇಳಾಪಟ್ಟಿ ಬದಲಾವಣೆಗೆ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಪುತ್ತೂರು: ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪುತ್ತೂರಿನಲ್ಲಿ ತಾತ್ಕಾಲಿಕ (ಟ್ರಯಲ್ ರನ್) ನಿಲುಗಡೆ ಒದಗಿಸಿರುವುದು ಹರ್ಷದ ವಿಚಾರವಾಗಿದ್ದು, ಈ ನಿಲುಗಡೆಯನ್ನು ಶಾಶ್ವತಗೊಳಿಸುವ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೊಂದಿಗೆ ಸಕಾರಾತ್ಮಕ ಚರ್ಚೆ ನಡೆಸಲಾಗಿದೆ ಎಂದು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಿಲುಗಡೆಗಾಗಿ…

Read More

ಕೂಳೂರು ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ಕಾಯಕಲ್ಪ

ಮಂಗಳೂರು: ಸ್ವಚ್ಛ ಭಾರತ ಹಾಗೂ ಸ್ವಸ್ಥ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಅನುದಾನದಡಿ ನಿರ್ಮಾಣಗೊಂಡ ಯೋಜನೆಯೊಂದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪಿತ್ತು. ಮಂಗಳೂರು ಹೊರವಲಯದ ಕೂಳೂರು ಸೇತುವೆ ಸಮೀಪವಿರುವ ಕುದ್ರೆಮುಖ ಕಂಪೆನಿಯ ಮುಂಭಾಗದ ಬಸ್ ತಂಗುದಾಣವೇ ಈ ದುಸ್ಥಿತಿಗೆ ಸಾಕ್ಷಿಯಾಗಿತ್ತು. ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುವ ಈ ಜನನಿಬಿಡ ಸ್ಥಳವು, ನಿರ್ವಹಣೆಯಿಲ್ಲದೆ ತ್ಯಾಜ್ಯದ ತೊಟ್ಟಿಯಾಗಿ ಪರಿಣಮಿಸಿತ್ತು. ದುರ್ನಾತ, ಅಸ್ತವ್ಯಸ್ತವಾಗಿ ಬೆಳೆದಿದ್ದ ಹುಲ್ಲು ಮತ್ತು ಗಿಡಗಂಟಿಗಳಿಂದಾಗಿ ಪ್ರಯಾಣಿಕರು ಬಸ್ ಕಾಯಲು ನಿಲ್ಲುವುದಕ್ಕೂ…

Read More

ಕಬಡ್ಡಿಯಲ್ಲಿ ನಿಟ್ಟೆ ಶಾಲೆಯ ಕ್ರೀಡಾ ಸಾಧನೆ: ಬಾಲಕಿಯರಿಗೆ ಪ್ರಥಮ, ಬಾಲಕರಿಗೆ ದ್ವಿತೀಯ

ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ನಿಟ್ಟೆಯ ಡಾ. ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದೆ.ಈ ಮೂಲಕ ಬಾಲಕಿಯರ ತಂಡವು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಇದೇ ಪಂದ್ಯಾಟದಲ್ಲಿ ಶಾಲೆಯ ಬಾಲಕರ ತಂಡವು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.ವಿಜೇತ ತಂಡದ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More
error: Content is protected !!