ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಹಲ್ಲೆ ಆರೋಪ ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಬಂಧನ – ಹುದ್ದೆಯಿಂದ ಅಮಾನತು
ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ…