ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ದ …. !

ಮಂಗಳೂರು: ಕನ್ನಡ ಭಾಷೆಯ ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟರಾದ ಲಿಖಿತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಮೂರು ವರ್ಷಗಳ ಕಾಲ ಈ ಸಿನಿಮಾಕ್ಕೆ ದುಡಿದಿದ್ದು ಕಥೆ ತುಂಬಾ ಚೆನ್ನಾಗಿದೆ. ಚಿತ್ರದ ನಿರ್ದೇಶಕ ವಿನಾಯಕ್ ಇನ್ಸ್ಟಾಗ್ರಾಮ್ ಮೂಲಕ ನನ್ನನ್ನು ಸಂಪರ್ಕಿಸಿದರು. ಅವರು ಹೇಳಿದ ಕಥೆ ಕೇಳಿ ಖುಷಿಯಾಗಿ ಸಿನಿಮಾಕ್ಕೆ ಬಂಡವಾಳ ಹಾಕಿದ್ದೇನೆ. ಒರಿಯರ್ದೊರಿ ಅಸಲ್, ಮದಿಮೆ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಟ್ಟು ನನ್ನನ್ನು ಬೆಳೆಸಿರುವ ಹಿರಿಯ ರಂಗಭೂಮಿ ಕಲಾವಿದ ವಿಜಯ್…

Read More

ಸೌತ್ ಕೆನರಾ ಬೀಡಿ ವರ್ಕರ್ಸ್ ಪೆಡರೇಶನ್ ವತಿಯಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸುವಂತೆ ನವೆಂಬರ್ 24 ರಿಂದ ಮಂಗಳೂರಿನಲ್ಲಿ ಅಹೋರಾತ್ರಿ ಧರಣಿ…!

ಮಂಗಳೂರು: ಸೌತ್ ಕೆನರಾ ಬೀಡಿ ವರ್ಕರ್ಸ್ ಪೆಡರೇಶನ್ ವತಿಯಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 24 ರಿಂದ 27 ರ ತನಕ ಅಹೋರಾತ್ರಿ ಧರಣಿಯನ್ನು ನಗರದ ಮಿನಿ ವಿಧಾನ ಸೌಧದ ಎದುರು ನಡೆಸಲಾಗುವುದು ಇದಕ್ಕೆ ಪರಿಹಾರ ಸಿಗದೇ ಹೋದಲ್ಲಿ ನವೆಂಬರ್ 28ಕ್ಕೆ ಮಂಗಳೂರಿನ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯನ್ನು ಮುತ್ತಿಗೆ ಹಾಕಲಾಗುವುದೆಂದು ಸೌತ್ ಕೆನಾರ ಬೀಡಿ ವರ್ಕರ್ಸ್ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಜೆ ಬಾಲಕೃಷ್ಣ ಶೆಟ್ಟಿ ಎಚ್ಚರಿಕೆ ನೀಡಿದರು. ಅವರು ನಗರದ…

Read More

41 ದಿನಗಳ 700 ಕಿಲೋ ಮೀಟರ್ ಉದ್ದದ ಐತಿಹಾಸಿಕ ಪಾದಯಾತ್ರೆ ಕೈಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ …. !

ಮಂಗಳೂರು: ಈಡಿಗ , ಬಿಲ್ಲವ, ನಾಮಧಾರಿ ಧೀವರ ಸೇರಿದಂತೆ 26 ಪಂಗಡಗಳ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗಾಗಿ 2026ರ ಜನವರಿ 6 ರಂದು ಶಕ್ತಿಪೀಠ ಕರದಾಳದಿಂದ ಫೆಬ್ರವರಿ 12 ಬೆಂಗಳೂರ ತನಕ 41 ದಿನಗಳ 700 ಕಿಲೋ ಮೀಟರ್ ಉದ್ದದ ಐತಿಹಾಸಿಕ ಪಾದಯಾತ್ರೆ ಕೈಗೊಳ್ಳುವುದಾಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ ತಿಳಿಸಿದ್ದಾರೆ .ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಸಮುದಾಯದ ಹಕ್ಕುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುವಂತೆ…

Read More

ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ .ಮೂವರು ಸಾವು

ಮಂಗಳೂರು :ಪಣಂಬೂರು ಬಳಿ ಎರಡು ಟ್ಯಾಂಕರ್ ಲಾರಿಗಳ ನಡುವೆ ರಿಕ್ಷಾ ಸಿಲುಕಿ ಮೂವರು ಮೃತಪಟ್ಟ ದಾರುಣ ಘಟನೆ‌ ನಡೆದಿದೆ.ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ್ದಾರೆ.ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಆಟೊ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ…

Read More

ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಕ್ಷೇತ್ರ ಅಪಾರ ಕೊಡುಗೆ ನೀಡಿದೆ : ಸ್ಪೀಕರ್ ಯು ಟಿ ಖಾದರ್

ಮಂಗಳೂರು: ಸಹಕಾರ ಕ್ಷೇತ್ರವು ದೇಶದ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನರಿಗೆ ಶಕ್ತಿ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರ ರಂಗವು ಅಪಾರ ಕೊಡುಗೆ ನೀಡುತ್ತಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧ್ಯೇಯ ವಾಕ್ಯ ದೊಂದಿಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ…

Read More

ಸಮಾಜಕ್ಕೆ ಮಾದರಿ ಮಕ್ಕಳ ಕೃಷಿ ಕಾಯಕಕ್ಕೆ ಒಲಿದ ಫಲವತ್ತೆಯ ಧ್ಯಾನ ದೇವತೆ …. !

ಬಂಟ್ವಾಳ: ಬೆಳೆವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ಇಲ್ಲಿನ ನಾಲ್ವರು ಮಕ್ಕಳು ತಮ್ಮ ಬಾಲ್ಯವೆಂಬ ಮೊಳಕೆಯಲ್ಲಿಯೇ ಬದುಕಿನ ಬೆಳೆಯನ್ನು ತೆಗೆದು ಮಾದರಿ ಯಾಗಿದ್ದಾರೆ. ಬಂಟ್ವಾಳ ತಾಲ್ಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬುದು ಕಲೆಂಜಿಮಲೆ ಎಂಬ ರಕ್ಷಿತಾರಣ್ಯದ ಹಸಿರ ತಪ್ಪಲಿನಲ್ಲಿರುವ ಸಣ್ಣ ಊರು. ಊರಿನ ಹೆಬ್ಬಾಗಿಲಿ ನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಪುಣ್ಯ ಸನ್ನಿಧಿಯಿದೆ.ಪರಮ ಪೂಜ್ಯ ಮಹಾಭಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶ್ರದ್ದಾ ಕೇಂದ್ರವಾಗಿ ಬೆಳಗುತ್ತಿದೆ. ಈ ಕ್ಷೇತ್ರದ ಎದುರಿನ ಹೊರ ಭಾಗದಲ್ಲಿ ನೆರೆಹೊರೆಯ…

Read More

ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ಮೆರೆದ ಬರಕಾ ಎಕ್ಸ್‌ಪ್ಲೋರಿಯಾ 2025

ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜು ಇತ್ತೀಚೆಗೆ ತನ್ನ ಬಹು ನಿರೀಕ್ಷಿತ ಶೈಕ್ಷಣಿಕ ಪ್ರದರ್ಶನವಾದ ಬರಕಾ ಎಕ್ಸ್‌ಪ್ಲೋರಿಯಾ 2025ನ್ನು ಆಯೋಜಿಸಿತು. ಇದರಲ್ಲಿ ವಿದ್ಯಾರ್ಥಿಗಳ ರೋಮಾಂಚಕ ಪ್ರತಿಭೆಗಳನ್ನು ಪ್ರದರ್ಶಿಸಲಾಯಿತು. ಈ ಕಾರ್ಯಕ್ರಮವು ವಿಜ್ಞಾನ ಪ್ರಯೋಗಗಳು, ರೋಬೋಟಿಕ್ಸ್ ಪ್ರದರ್ಶನಗಳು, ಇತಿಹಾಸ, ಸಾಹಿತ್ಯ, ಕಲೆ, ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಇಸ್ಲಾಮಿಕ್ ಅಧ್ಯಯನಗಳು ಸೇರಿದಂತೆ ವಿವಿಧ ವಿಷಯಗಳನ್ನು ಒಳಗೊಂಡಿತ್ತು. ಇದು ಶಾಲೆಯ ಸಮಗ್ರ ಮತ್ತು ಅನುಭವಾತ್ಮಕ ಕಲಿಕೆಗೆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಪ್ರದರ್ಶನವನ್ನು ಮಂಗಳೂರಿನ ಪ್ರಸಿದ್ಧ ರಾಜಕಾರಣಿ ಮತ್ತು ಸಮಾಜಸೇವಕ ಪದ್ಮರಾಜ್ ಆರ್ ಪೂಜಾರಿ…

Read More

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ.ಎಕ್ಸ್‌ಪ್ಲೋರಾ 2025

ಫಾದರ್ ಮಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜ್ (FMHMC) ಮತ್ತು ಗ್ಲೋಬಲ್ ಹೋಮಿಯೋಪಥಿ ಫೌಂಡೇಶನ್ (GHF) ಹಾಗೂ ನವದೆಹಲಿಯ ಸೆಂಟ್ರಲ್  ಕೌನ್ಸಿಲ್ ಫಾರ್ ರಿಸರ್ಚ್ ಇನ್ ಹೋಮಿಯೋಪಥಿ (CCRH) ಯ ಸಹಯೋಗದಲ್ಲಿ, ಎಕ್ಸ್‌ಪ್ಲೋರಾ 2025 – ಹೋಮಿಯೋಪಥಿಕ್ ಶಿಕ್ಷಣ, ಅಭ್ಯಾಸ ಮತ್ತು ಸಂಶೋಧನೆಗಳ ಏಕೀಕರಣ ಎಂಬ ಅಂತರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವು 2025ರ ನವೆಂಬರ್ 14ರಂದು ಬೆಳಿಗ್ಗೆ 11.30ಕ್ಕೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಶ್ರೀಮತಿ…

Read More

ನಾಳೆ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಉದ್ಘಾಟನೆ

ಕರ್ನಾಟಕ ರಾಜ್ಯ ಮರಾಟ ಒಕ್ಕೂಟ ಮಂಗಳೂರು ಇದರ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭವು ನ.16ರಂದು ಪುತ್ತೂರಿನ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ನೂತನ ಒಕ್ಕೂಟವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ರಾಜ್ಯ ಮರಾಟಿ ಒಕ್ಕೂಟದ ಗೌರವಾಧ್ಯಕ್ಷ, ಭಾರತ ಸರಕಾರದ ಕೇಂದ್ರಾ ಡಳಿತ ಪ್ರದೇಶ ಮತ್ತು ಚಂಡೀಗಡದ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್‌ರನ್ನು ಅಭಿನಂದಿಸಿ ಗೌರವಿಸಲಾಗುವುದು….

Read More

ನಾಳೆ ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ, ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ವಿತರಣೆ …. !

ಮಂಗಳೂರು: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ಧೇಶದಿಂದ ನ.16ರಂದು ನಡೆಯುವ 2025ನೇ ಸಾಲಿನ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ ‘ಸಹಕಾರ ಮಾಣಿಕ್ಯ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು…

Read More
error: Content is protected !!