ರಾಜ್ಯದಲ್ಲಿ ಜಾತಿ ಗಣತಿ‌ ನಡೆಸುವ ವಿಚಾರವಾಗಿ ಹಲವಾರು ಗೊಂದಲಗಳಿದ್ದು ಅದನ್ನು ಪರಿಹರಿಸಿದ ಬಳಿಕ ಜಾತಿ ಗಣತಿ ಮಾಡಿದರೆ ಒಳಿತು – ಸತೀಶ್ ಕುಂಪಲ

ಮಂಗಳೂರು:ರಾಜ್ಯದಲ್ಲಿ ಜಾತಿ ಗಣತಿ‌ ನಡೆಸುವ ವಿಚಾರವಾಗಿ ಹಲವಾರು ಗೊಂದಲಗಳಿದ್ದು ಅದನ್ನು ಪರಿಹರಿಸಿದ ಬಳಿಕ ಜಾತಿ ಗಣತಿ ಮಾಡಿದರೆ ಒಳಿತೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು . ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಈಗಾಗಲೇ ಮನೆಗಳಲ್ಲಿ ಜಾತಿ ಗಣತಿಯ ಅಂಗವಾಗಿ ಸ್ಟಿಕ್ಕರ್ ಅಂಟಿಸಲಾಗುತ್ತಿದೆ . ಆದರೆ ಜನರಿಗೆ ಈ ಬಗ್ಗೆ ಹಲವು ಗೊಂದಲಗಳಿವೆ . ಜನಜಾಗೃತಿ ಮೂಡಿಸಿದ ನಂತರ ಈ ಸಮೀಕ್ಷೆಯನ್ನು ಕೈಗೊಂಡರೆ ಒಳ್ಳೆಯದಿತ್ತು . ಜಿಲ್ಲಾ ಪಂಚಾಯತ್ ನಲ್ಲಿ ಈ…

Read More

ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ವತಿಯಿಂದ ‘ವಿಶ್ವ ಹೃದಯ ದಿನದ ವಾಕಥಾನ್’ ಸೆ. 21ಕ್ಕೆ

ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯು ವಿಶ್ವ ಹೃದಯ ದಿನದ ಅಂಗವಾಗಿ ಸೆ.21ರಂದು ‘ವಿಶ್ವ ಹೃದಯ ದಿನದ ವಾಕಥಾನ್-2025’ (“World Heart Day Walkathon 2025”) ಅನ್ನು ಆಯೋಜಿಸುವುದಾಗಿ ಆಸ್ಪತ್ರೆಯ ಡೀನ್ ಡಾ.ಉಣ್ಣಿಕೃಷ್ಣನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಕೆಎಂಸಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ನರಸಿಂಹ ಪೈ ಅವರು, ‘ಒಂದು ಬೀಟ್ ಕೂಡ ತಪ್ಪಿಸಿಕೊಳ್ಳಬೇಡಿ’ ಎನ್ನುವುದು ಈ ವರ್ಷದ ವಿಶ್ವ ಹೃದಯ ದಿನದ ಥೀಮ್ ಆಗಿದೆ. ಹೃದಯ ಕಾಯಿಲೆಗಳ ಪ್ರಮಾಣವು, ವಿಶೇಷವಾಗಿ ಯುವಕರಲ್ಲಿ ಹೆಚ್ಚುತ್ತಿರುವುದು…

Read More

ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ.

ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ.ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಹಲವಾರು ಬೆಳವಣಿಗಳು ನಡೆದಿದ್ದವು. ಬೆಳ್ತಂಗಡಿ ಎಸ್‌‌‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.23ರಂದು ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಕಸ್ಟಡಿಗೆ ಪಡೆದ ತನಿಖೆ ನಡೆಸಿ ಸೆ.3 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಚಿನ್ನಯ್ಯನನ್ನು ಮತ್ತೆ…

Read More

ದ. ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ. ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಮಂಗಳೂರು ಮಿನಿ ವಿಧಾನ ಸೌಧದ ಎದುರು ಇಂದು ನಡೆಯಿತು‌. ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ ‘ಬಾವಾ ಬಂದರೋ’ ಹಾಡಿನ ಶೈಲಿಯಲ್ಲಿ ‘ಗುಂಡೂರಾವ್ ಓಡಿ ಹೋದರು’ ಎಂಬ ಹಾಸ್ಯಸ್ಯದ ಶೈಲಿಯಲ್ಲಿ ಹಾಡನ್ನು…

Read More

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ 2024-25 ರಲ್ಲಿ 1174 ಕೋಟಿ ರೂ. ವ್ಯವಹಾರ ವಹಿವಾಟು ನಡೆಸಿ 12.79 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ – ರವಿರಾಜ್ ಹೆಗ್ಡೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ರಲ್ಲಿ 1174 ಕೋಟಿ ರೂ. ವ್ಯವಹಾರ ವಹಿವಾಟು ನಡೆಸಿ 12.79 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ. ಸೋಮವಾರ ಒಕ್ಕೂಟದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 751 ಹಾಲು ಸಂಘಗಳು ಪ್ರಸ್ತುತ ಪ್ರತಿದಿನ 3.97 ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿವೆ ಎಂದು ಹೇಳಿದರು. “2024-25ರಲ್ಲಿ, ಸಂಗ್ರಹವು ದಿನಕ್ಕೆ 3.42 ಲಕ್ಷ ಲೀಟರ್…

Read More

ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮ ಸೆಪ್ಟೆಂಬರ್ 21ರಂದು

ಮಂಗಳೂರು:ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಮಂಗಳೂರಿನ ಶ್ರೀರಾಮಕೃಷ್ಣ ಮಠದ ಆವರಣದಲ್ಲಿ ಪೂರ್ಣ ದಿನದ ಕಾರ್ಯಕ್ರಮದೊಂದಿಗೆ ನಡೆಸಲಾಗುವುದು ಎಂದು ತುಳುನಾಡು ಶಿಕ್ಷಣ ಸಂಸ್ಥೆ ಹಾಗೂ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಬನ್ನಂಜೆಯವರು ಬದುಕಿದ್ದರೆ ಈಗ 90 ವರ್ಷ ಪೂರೈಸುತ್ತಿದ್ದರು. ಆ ನೆನಪಿಗಾಗಿ ಕರ್ನಾಟಕ ಮಾತ್ರವಲ್ಲದೆ ಹೃಷಿಕೇಶ ಮತ್ತು ಅಮೆರಿಕ ಸೇರಿದಂತೆ…

Read More

‘ಬದ್ರಿಯಾ ಅಲುಮಿನಿ ಅಸೋಸಿಯೇಷನ್ ‘ ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶ ಸೆಪ್ಟೆಂಬರ್19 ರಂದು

ಮಂಗಳೂರಿನ ಪ್ರತಿಷ್ಠಿತ ಬದ್ರಿಯಾ ವಿದ್ಯಾಸಂಸ್ಥೆ 1928ರಲ್ಲಿ ಸ್ಥಾಪನೆಗೊಂಡು 2028ರಲ್ಲಿ ಸಂಸ್ಥೆಯು ಶತಮಾನೋತ್ಸವ ಆಚರಿಸಲಿದೆ . ಇದರ ಪೂರ್ವ ತಯಾರಿಯ ಭಾಗವಾಗಿ ಬದ್ರಿಯಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ ಸಂಘ ‘ಬದ್ರಿಯಾ ಅಲುಮಿನಿ ಅಸೋಸಿಯೇಷನ್ ‘ ನನ್ನು ರೂಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್19 ರಂದು ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಹಮ್ಮದ್ ಕುಂಞ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು , ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶವು ಸಂಜೆ 4:00ರಿಂದ 6:00 ಗಂಟೆ ತನಕ…

Read More

ಕರಾವಳಿ ಕೆಂಪುಕಲ್ಲು ಸಮಸ್ಯೆಗೆ ಶಾಶ್ವತ ಪರಿಹಾರ ; ಸ್ಪೀಕ‌ರ್ ಯು.ಟಿ. ಖಾದರ್

ಮಂಗಳೂರು:ಇತ್ತೀಚಿಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆಗಳೆಲ್ಲವನ್ನೂ ಬಗೆಹರಿಸಲಾಗಿದೆ. ಇನ್ನು ಮುಂದೆ ಕೆಂಪು ಕಲ್ಲಿನ ದರ ಹಿಂದಿನ ದರಕ್ಕಿಂತ ಅಧಿಕವಾಗಲು ಸಾಧ್ಯವಿಲ್ಲ. ಸರ್ಕಾರಕ್ಕೆ ಸಲ್ಲಿಸಬೇಕಾದ ರಾಜಧನವನ್ನು ಕಡಿಮೆಗೊಳಿಸಲಾಗಿದ್ದು ಹಿಂದೆ ಇದ್ದ ನಿಯಮಗಳನ್ನು ಸರಳೀಕರಣಗೊಳಿಸಲಾಗಿದೆ. ಇನ್ನು ಮುಂದೆ ವ್ಯಾಪಾರಸ್ಥರು ಕೆಂಪು ಕಲ್ಲು ವ್ಯಾಪಾರವನ್ನು ಧೈರ್ಯದಿಂದ ಮಾಡಬಹುದು ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್ ತಿಳಿಸಿದರು . ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊನ್ನೆಯ ಕ್ಯಾಬಿನೆಟ್‌ನಲ್ಲಿ ಅಧಿಕಾರಿಗಳು, ಶಾಸಕರು, ಕೆಂಪು ಕಲ್ಲಿನ…

Read More

ದಕ್ಷಿಣ ಕನ್ನಡ ಜಿಲ್ಲೆಯ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತನಿಖೆಗೆ ಕೇಂದ್ರ ಸರಕಾರ ತನಿಖಾ ತಂಡವನ್ನು ರಚಿಸಲಿ ; ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ.

ಕರಾವಳಿ ಭಾಗದಲ್ಲಿ ನಿರ್ಮಾಣವಾದ ರಾಷ್ಟ್ರೀಯ ಹೆದ್ದಾರಿಯು ಅವೈಜ್ಞಾನ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಸೂಕ್ತವಾದ ತನಿಖೆ ನಡೆಯಬೇಕೆಂದು ಕೇಂದ್ರ ಸರಕಾರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಆಗ್ರಹಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕರಾವಳಿಯ ರಸ್ತೆಗಳು ಅವ್ಯವಸ್ಥೆಗಳ ಆಗರವಾಗಿದೆ . ಮಾರ್ಗಗಳು ಅವೈಜ್ಞಾನಿಕತೆ ಮತ್ತು ಕಳಪೆ ಕಾಮಗಾರಿಯಿಂದ ಕೂಡಿದೆ . ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇಂದ್ರದ ಹೆದ್ದಾರಿ ಇಲಾಖೆಗೆ ಪತ್ರವನ್ನು ಬರೆಯಲಾಗಿದೆ . ಕರಾವಳಿ…

Read More

ಮಂಗಳೂರಿಗೆ ಕೀರ್ತಿ ತಂದ ಸಹೋದರ ಸಹೋದರಿಯರು

ಮಂಗಳೂರು : ಮಂಗಳೂರು ನಗರದ ಬಜಾಲ್ ನಿವಾಸಿಯಾದ ಕೇವಲ ಐದೂ ವರ್ಷದ ಹಾಗೂ 11 ವರ್ಷದ ಸಹೋದರ ಸಹೋದರಿಯವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ ಸೆಪ್ಟೆಂಬರ್ 6 ,2025 ಬೆಂಗಳೂರಿನ , ಕಿಂಗ್ಸ್ ಮೆಡವ್ಸ್ ಹೋಟೆಲ್ ನಲ್ಲಿ ಆಯೋಜಿಸಲಾದ ಮಿಸ್ ಪ್ರತಿಭಾ ಸಂಶಿಮಠ ಇವರ ನೇತೃತ್ವದಲ್ಲಿ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಅನ್ನು ಲಹರ್ ಸಾಯಿ ಇವರು ಹಾಗೂ ಅವರ ಸಹೋದರಿ…

Read More
error: Content is protected !!