ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ’ಧರ್ಮಸ್ಥಳ’ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವ ಆಘಾತಕಾರಿ ಸಂಗತಿ

ಮಂಗಳೂರು ಹೊರ ವಲಯದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣಾ ಮಾಹಿತಿ ಆರೋಪಿಯು, ಧರ್ಮಸ್ಥಳದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಎನ್ನುವುದನ್ನು ಬೆಳಕಿಗೆ ತಂದಿದೆ.ನವೆಂಬರ್ 2022ರಲ್ಲಿ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ಮಂಗಳೂರಿನಲ್ಲಿ ಹಿಂದೆ ಆಟೋರಿಕ್ಷಾದಲ್ಲಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿತ್ತು. ಜಾರಿ ನಿರ್ದೇಶನಾಲಯವು, ಪ್ರಮುಖ ಆರೋಪಿ ಸಯ್ಯದ್ ಯಾಸಿನ್ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮುಟ್ಟುಗೋಲು…

Read More

ಸರ್ಕಾರದ ಬೊಕ್ಕಸದಿಂದ ಪಿಂಚಣಿ ಕೊಡಿ. ಜನರ ಜೇಬಿನಿಂದ ಅಲ್ಲ :- ಶಾಸಕ ಕಾಮತ್

ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು, ಮುಚ್ಚಿಕೊಳ್ಳಲು ಪ್ರಯತ್ನಿಸಿ, “ಆ ನಿರ್ಧಾರ ನಮ್ಮದಲ್ಲ, ಹಿಂದಿನ ಸರ್ಕಾರದ್ದು” ಎಂದು ಬಾಲಿಶ ಹೇಳಿಕೆ ನೀಡಿ ಜನತೆಯ ಮುಂದೆ ಇನ್ನಷ್ಟು ಬೆತ್ತಲಾಗುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಅವಧಿಯ ಕರೆಂಟ್ ಬಿಲ್ಲುಗಳಲ್ಲಿ ಪಿಂಚಣಿ ಹಾಗೂ ಗ್ರ್ಯಾಚುಟಿ ಹೆಸರಿನಲ್ಲಿ ಒಂದೇ ಒಂದು…

Read More

‘ಕೃಷಿಯೇ ನಮ್ಮ ಜೀವನವಾಗಿದೆ’ -ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ:ದ.ಕ.ಜಿಲ್ಲೆಯ ಪ್ರತಿ ಮನೆಯಲ್ಲೂ ಒಂದಲ್ಲ ಒಂದು ಕೃಷಿಯನ್ನು ಮಾಡುತ್ತಿದ್ದು, ನಾವೆಲ್ಲರೂ ಕೃಷಿಕರಾಗಿದ್ದೇವೆ ,ಕೃಷಿಯೇ ನಮ್ಮ ಜೀವನವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಕೃಷಿ ಇಲಾಖೆ ಬಂಟ್ವಾಳ ಇದರ , 2025 -26 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಉಪ ಅಭಿಯಾನ,ATMA ( ಆತ್ಮ) ಯೋಜನೆಯಡಿ ” ಕಿಸಾನ್ ಗೋಷ್ಠಿ “ವಿವೇಚನಾತ್ಮಕ ಕೀಟನಾಶಕಗಳ ಬಳಕೆ ಹಾಗೂ ಬೆಳೆಗಳಲ್ಲಿ ಶೇಷಾಂಶ ತಗ್ಗಿಸಲು ಅಗತ್ಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ಖಾಸಗಿ ನಿವಾಸಿಗಳಿಗೆ ಬೆಳೆ ಸಮೀಕ್ಷೆ…

Read More

ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಆರೋಪ : ತಿಮರೋಡಿ, ಮಟ್ಟಣ್ಣನವ‌ರ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಉಜಿರೆ: ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸಹಿತ ಹಲವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಹರೀಶ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಗೆ ವರದಿ ಮಾಡಲೆಂದು ತೆರಳಿದ ವೇಳೆ ಚಾನೆಲ್ ನ ಲೋಗೊ ನೋಡಿ ತಡೆದ ತಂಡ ತನ್ನ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಬೆಳ್ತಂಗಡಿ…

Read More

ಆಕ್ರಮವಾಗಿ ಕೆಂಪುಕಲ್ಲು ಸಾಗಾಟದ ಲಾರಿ ಮತ್ತು ಅಪಾರ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ ವಿಟ್ಲಾ ಪೊಲೀಸರು.

ಬಂಟ್ವಾಳ: ಅಕ್ರಮವಾಗಿ ಕೇರಳ ರಾಜ್ಯದಿಂದ ದ.ಕ.ಜಿಲ್ಲೆಗೆ ಕೆಂಪು ಕಲ್ಲು ಸಾಗಿಸುವ ವೇಳೆ ವಿಟ್ಲ ಪೋಲೀಸರ ಕೈಗೆ ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದ್ದು, ಕೆಂಪು ಕಲ್ಲು ಸಹಿತ ಲಾರಿ ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ನಿವಾಸಿ ಮಹಮ್ಮದ್ ಮುಸ್ತಾಫ ಹಾಗೂ ಉಕ್ಕುಡ ನಿವಾಸಿ ಸಲಾಂ ಮತ್ತು ಧರ್ಮತ್ತಡ್ಕ ನಿವಾಸಿ ಅಶ್ರಫ್ ಎಂಬವರ ಮೇಲೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌ರೂ.7,500 ಸಾವಿರ ಮೌಲ್ಯದ 270 ಕೆಂಪು ಕಲ್ಲು ಸಹಿತ ಸಾಗಾಟಕ್ಕೆ…

Read More

ಕನ್ನಡ ಭವನ ಪ್ರಕಾಶನ ಮತ್ತು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ಏಕ ದಿನ ಸಾಹಿತ್ಯ ಅಭಿಯಾನ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’

ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೋಳಾರ ಇಲ್ಲಿ ನಡೆಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಬಳಿಕ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಶಾಲನ್ನು ಹಾಕಿ, ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು….

Read More

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬ ಆಚರಣೆ.

ಮಂಗಳೂರು: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಪಿ.ಬಿ ಬಳ್ಳಾಲ್ ಭಾಗ್ ರವರ ನೇತೃತ್ವದಲ್ಲಿ ಬುಧವಾರ ನಗರದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರ ನೆರವೇರಿಸಲಾಯಿತು. ಬಳಿಕ ನೆಹರು ಮೈದಾನ, ವೆನ್ ಲಾಕ್ ಆಸ್ಪತ್ರೆ ಬಳಿ ಸಾರ್ವಜಿನಿಕ ಅನ್ನಸಂತರ್ಪಣೆ ನೆರವೇರಿಸಲಾಯಿತು. ಈ ಸಂದರ್ಭ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ದಿನೇಶ್ ಮೂಳೂರು, ಜಿಲ್ಲಾ ಹಿಂದೂ ಧಾರ್ಮಿಕ ದತ್ತಿ…

Read More

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು‌ ಹೂತಿಟ್ಟ ಪ್ರಕರಣ.ಅಂತಿಮ ಘಟ್ಟದತ್ತ SIT ಕಾರ್ಯಾಚರಣೆ.

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಅಂತಿಮ ಘಟ್ಟಕ್ಕೆ ಬಂದು ತಲುಪಿದಂತಿದೆ. ಇಂದು ಪಾಯಿಂಟ್ ನಂಬರ್ 13 ಅಂದ್ರೆ ಮುಸುಕುಧಾರಿ ತೋರಿಸಿದ ಕೊನೆಯ ಪಾಯಿಂಟ್‌ನಲ್ಲಿ ಶವದ ಶೋಧ ಕಾರ್ಯ ನಡೆಯುತ್ತಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ತನಿಖೆ ಬಹಳ ಬಿರುಸಿನಿಂದ ಸಾಗುತ್ತಿದೆ. ಈಗಾಗಲೇ ಅನಾಮಿಕ ದೂರುದಾರ ಗುರುತಿಸಿದ 13ರ ಪೈಕಿ 12 ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ನಡೆದಿದೆ. 12 ಪಾಯಿಂಟ್‌ನಲ್ಲೂ ಏನೂ ಸಿಗದಿದ್ದು, ಇನ್ನು ಉಳಿದಿರುವುದು ಒಂದೇ ಒಂದು ಪಾಯಿಂಟ್ ಎನ್ನಲಾಗುತ್ತಿದೆಯಾದರೂ,…

Read More

ಮಂಗಳೂರಿನ ಮೆರುಗಿಗೆ ಭಾರತೀಯ ಸೇನೆಯ T-55 ಟ್ಯಾಂಕ್ ಸೇರ್ಪಡೆ.ಪ್ರವಾಸೋಧ್ಯಮ ಮತ್ತಷ್ಟು ಆಕರ್ಷಣೆ

ಮಂಗಳೂರು ನಗರಕ್ಕೆ ವಿಶೇಷ ಆಕರ್ಷಣೆಯಾಗಿ ಯುದ್ಧ ಟ್ಯಾಂಕ್ (ಟಿ-55) ಹಾಗೂ 303 ರೈಫಲ್ ಆಗಮಿಸಿದೆ.ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿ ಪಡೆದ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ವಾರ್ ಟ್ರೋಫಿ (ಯುದ್ಧ ಸ್ಮರಣಿಕೆ) ರೀತಿಯಲ್ಲಿ ಪ್ರದರ್ಶ ನಕ್ಕೆ ಇರಿಸಲಾಗುತ್ತದೆ. ಅದೇ ರೀತಿ ಮಂಗಳೂರಿಗೆ ಟ್ಯಾಂಕ್ ಅನ್ನು ನೀಡುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಕ್ಷಣಾ ಸಚಿವಾಲಯಕ್ಕೆ ಮಾಡಿದ ಮನವಿ ಮೇರೆಗೆ ಯುದ್ದ ಟ್ಯಾಂಕ್ ಮಂಗಳೂರು ತಲುಪಿದೆ. ಕದ್ರಿ ಯುದ್ಧಸ್ಮಾರಕ ಅಥವಾ ಸರ್ಕಿಟ್ ಹೌಸ್ ಮುಂಭಾಗ ಅಥವಾ ಇತರ…

Read More

ಪುತ್ತೂರು : ಕೆದಂಬಾಡಿ MRF ಘಟಕಕ್ಕೆ ಪರಿಶೀಲನಾ ಮತ್ತು ಅಧ್ಯಯನ ತಂಡ ಭೇಟಿ.

ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF ಘಟಕಕ್ಕೆ ಭೇಟಿ…

Read More
error: Content is protected !!