ಮಣಿಪಾಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಸ್ಥಳದಿಂದ ಪರಾರಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ನೋಂದಣಿಯ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು, ಮಣಿಪಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ…

Read More

ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮ

ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ಕಳಂಜದ್ದೇ ಸುದ್ದಿ. ಮನೆ ಮನೆಯ ರೋಗ-ರುಜಿನಗಳನ್ನು ದೂರ ಮಾಡಲೆಂದೇ ಆಟಿ ಕಳಂಜ ಬರುವನೆಂಬ ನಮ್ಮ ಹಿರಿಯರ ನಂಬಿಕೆ ಯಾವುದೇ…

Read More

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ-ಲಾರಿ ವಶಕ್ಕೆ

ಮಂಗಳೂರು ದಕ್ಷಿಣ ಕನ್ನಡ: ಅಕ್ರಮವಾಗಿ ಕೆಂಪು ಕಲ್ಲನ್ನು ಸಾಗಾಟ ಮಾಡ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ನಿನ್ನೆ ನಡೆದಿದೆ. ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಎಲ್ಲಿಂದಲೋ ಕದ್ದು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ಪತ್ತೆ ಮಾಡಿ ಲಾರಿ ಹಾಗೂ ಚಾಲಕರನ್ನು ವಶಕ್ಕೆ ಪಡೆದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಪ್ರಜ್ಞೆ ತಪ್ಪಿ ಬಿದ್ದ ಸರಕಾರಿ ಬಸ್ ನಿರ್ವಾಹಕಸಮಯ ಪ್ರಜ್ಞೆ ತೋರಿ ಜೀವ ಉಳಿಸಿದ ಚಾಲಕ,ಆಸ್ಪತ್ರೆಯ ಚೇರ್ ಮೆನ್ ರಿಂದ ಚಾಲಕನಿಗೆ ಸನ್ಮಾನ

ಮಂಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಬಸ್ ನಿರ್ವಹಕನನ್ನು ತಕ್ಷಣ ನೇರವಾಗಿ ಸಮೀಪದ ಆಸ್ಪತ್ರೆಗೆ ಚಲಾಯಿಸಿ ಎಮರ್ಜೆನ್ಸಿ ಯಲ್ಲಿ ಕ್ಲಪ್ತ ಸಮಯಕ್ಕೆ ಚಿಕಿತ್ಸೆ ಕೊಡಿಸಿ ನಿರ್ವಾಹಕನ ಜೀವ ಉಳಿಸಿದ್ದಾರೆ. ಒಂದು ಜೀವ ಉಳಿಸಿದ ಚಾಲಕನ ಸಮಯ ಪ್ರಜ್ಞೆಗೆ ಮೆಚ್ಚಿದ ಆಸ್ಪತ್ರೆಯ ಚೇರ್ ಮೆನ್ ಸೂಚನೆ ಮೇರೆಗೆ ಸಿಬ್ಬಂದಿ ಸನ್ಮಾಸಿದ್ದಾರೆ. ಶುಕ್ರವಾರ ಬೆಳಗ್ಗೆ 8.00ಗಂಟೆ ಮುಡಿಪುವಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಿರ್ವಾಹಕ ಸಂಜೀವ್ ಪ್ರಯಾಣಿಕರಿಗೆ ಟಿಕೆಟ್ ನೀಡಿ ದರ ವಸೂಲಿ ಮಾಡುತ್ತಿದ್ದನಂತೆ….

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆ – ಮೂರನೆ ವರ್ಷಕ್ಕೆ ಪಾದಾರ್ಪಣೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯೋಜನೆಗಳಲ್ಲಿ ಒಂದಾದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯು ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಯಕ್ಷಗಾನ ಕಲೆಯನ್ನು‌ ಶೈಕ್ಷಣಿಕ ಆಯಾಮದೊಂದಿಗೆ ಪರಿಚಯಿಸಬೇಕೆಂದುಕೊಂಡು 2023ರಲ್ಲಿ ಕಾರ್ಯರೂಪಕ್ಕೆ ಬಂದ ಈ ಯೋಜನೆಯು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಆಶ್ರಯದಲ್ಲಿ ಮುಂದುವರಿಯುತ್ತಿದೆ. ಆರಂಭದಲ್ಲಿ ದ.ಕ ಜಿಲ್ಲೆಯ ಒಟ್ಟು 38 ಶಾಲೆಗಳಲ್ಲಿ ಪ್ರಾರಂಭವಾದ ಈ ಯೋಜನೆಗೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಒಟ್ಟು ನಾಲ್ಕು ಜಿಲ್ಲೆಯ 87 ಶಾಲೆಗಳು ಒಳಪಟ್ಟಿದ್ದವು. ಈ ಬಾರಿ ದ.ಕ…

Read More

ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ – ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಗಾಂಜಾ ಖದೀಮರು

ಮಂಗಳೂರು ಅಗಸ್ಟ್ 1 : ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ ತೆಗೆದುಕೊಂಡು ಬರುತ್ತಿದ್ದ ದೊಡ್ಡ ಗ್ಯಾಂಗ್ ನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೇರಳ ರಾಜ್ಯದ ನಿವಾಸಿಗಳಾದ ಮಸೂದ್ ಎಂಕೆ (45), ಮೊಹಮ್ಮದ್ ಆಶಿಕ್ (24), ಸುಬೇರ್ (30) ಎಂದು ಗುರುತಿಸಲಾಗಿದೆ.ಸಿಸಿಬಿ ಪೊಲೀಸರು ದಿನಾಂಕ 31-07-2025 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ…

Read More

“ರಾಜ್ಯ ಸರಕಾರ ದ.ಕ. ಜಿಲ್ಲೆಯನ್ನು ಕಡೆಗಣಿಸುತ್ತಿದೆ!“

ಮಂಗಳೂರು: ರಾಜ್ಯ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಾರಂಭದಿಂದಲೇ ಕಡೆಗಣಿಸುತ್ತ ಬಂದಿದೆ. ಇದರ ಮುಂದುವರಿದ ಭಾಗವಾಗಿ ಮರಳು, ಕೆಂಪು ಕಲ್ಲು ಬಂದ್ ಮಾಡಿ ಜನಸಾಮಾನ್ಯರನ್ನು ಶೋಷಣೆ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಮಾತಾಡಿದ ಅವರು, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು, ಕೆಂಪು ಕಲ್ಲು ಸಿಗದೇ ಜಿಲ್ಲೆಯ ಆರ್ಥಿಕ ಅಭಿವೃದ್ಧಿ ಕುಂಠಿತಗೊಂಡಿದೆ. ಸಾವಿರಾರು ಕೂಲಿ ಕಾರ್ಮಿಕರ ಬದುಕು ಬೀದಿಗೆ ಬಂದು ಬಿದ್ದಿದೆ. ಜಿಲ್ಲೆಯ ಬಿಜೆಪಿ ಶಾಸಕರು…

Read More

ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆಭೀಕರ ಅಪಘಾತ-ಮಗು ಸಹಿತ ಮೂವರಿಗೆ ಗಂಭೀರ ಗಾಯ

ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸಹಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ 25ವರ್ಷದ ನಿತಿಲ್, 23ವರ್ಷದ ಅವಿನಾಶ್ ಹಾಗೂ 2ವರ್ಷದ ಮೃತ್ತಿನ್ ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಟೀಲು ಕಡೆಯಿಂದ ದೇವರ ದರ್ಶನ ಮುಗಿಸಿಕೊಂಡು ಕುಂದಾಪುರದ ಕಡೆಗೆ ಹೊರಟಿದ್ದ ಕಾರು, ಕಿನ್ನಿಗೋಳಿ ರಾಜ್ಯ ಹೆದ್ದಾರಿಯ…

Read More

ಛತ್ತೀಸ್ ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ ಖಂಡಿಸಿ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ

ಮಂಗಳೂರು: ಛತ್ತೀಸ್‌ಗಢದಲ್ಲಿ ಕೇರಳದ ಇಬ್ಬರು ಸನ್ಯಾಸಿನಿಯರು ಮೂವರು ಬುಡಕಟ್ಟು ಮಹಿಳೆಯರ ಜೊತೆ ಸಾಗುತ್ತಿದ್ದಾಗ ಅವರ ಮೇಲೆ ಮತಾಂತರ ಹಾಗೂ ಮಾನವ ಕಳ್ಳ ಸಾಗಾಟದ ಸುಳ್ಳು ಆರೋಪ ಹೊರಿಸಿ ಜೈಲಿಗೆ ಹಾಕಿದ್ದಾರೆ. ಬಜರಂಗದಳದ ಕಾರ್ಯಕರ್ತರ ಸುಳ್ಳು ದೂರಿನ ಅನುಸಾರ ಕ್ರೈಸ್ತ ಸನ್ಯಾನಿಯರ ಮೇಲೆ ಪ್ರಕರಣ ದಾಖಲಿಸಿದ ಛತ್ತೀಸ್‌ಗಢದ ಕ್ರಮ ಖಂಡನೀಯ. ಇದರ ವಿರುದ್ಧ ನಾವು ಹೋರಾಟ ನಡೆಸುವುದಾಗಿ ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಜೆ.ಆರ್.‌ ಲೋಬೋ ಎಚ್ಚರಿಕೆ ನೀಡಿದ್ದಾರೆ. ಛತ್ತೀಸ್ ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ ಖಂಡಿಸಿ ಮಲ್ಲಿಕಟ್ಟೆಯ…

Read More

ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಭದ್ರತಾ ಲೋಪದ ಕಾರಣಕ್ಕೆ ಪಹಲ್ಗಾಮ್ ನಲ್ಲಿ ದೇಶದ 26 ಅಮಾಯಕ ನಾಗರಿಕರ ಹತ್ಯೆಯಾಯಿತು. ಈ ಬಗ್ಗೆ ಸಂಸತ್ ಅಧಿವೇಶನಲ್ಲಿ ಕಾಂಗ್ರೆಸ್ ನಾಯಕರು ಪ್ರಶ್ನಿಸಲು ಮುಂದಾದರೆ ಸರಿಯಾದ ಉತ್ತರ ನೀಡಬೇಕಾದ ಪ್ರಧಾನಿ ಮೋದಿ ಅವರು ಸುಳ್ಳಿನ ಮುಖಾಂತರ ಜನರ ಭಾವನೆ ತಿರುಚಿದ್ದಾರೆ. ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು…

Read More
error: Content is protected !!