2.2 ಲಕ್ಷ ರೂ ಮೌಲ್ಯದ ಅಡಿಕೆ ಕಳ್ಳತನ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಯಶಸ್ವಿ.
ಸುಮಾರು 2.2 ಲಕ್ಷ ರೂ ಮೌಲ್ಯದ ಅಡಕೆಯನ್ನು ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಕಳವು ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಯಶಸ್ವಿಯಾಗಿದ್ದಾರೆ. ಆರೋಪಿಗಳಲ್ಲಿ ಒರ್ವನಾದ ಸುಳ್ಯ ತಾಲೂಕಿನ ಪೈಚಾರು ಗ್ರಾಮದ ಸತೀಶ್ (29)ನನ್ನು ದಸ್ತಗಿರಿ ಮಾಡಿ, ಕಳವುಗೈದ ರೂ. 74000 ಮೌಲ್ಯದ 15 ಚೀಲ ಒಣ ಅಡಿಕೆ, ಕಳವು ಅಡಿಕೆಯನ್ನು ಮಾರಾಟ ಮಾಡಿದ ನಗದು ಹಣ ರೂ 70,000 ವನ್ನು ಒಟ್ಟು ಹಾಗೂ ಕೃತ್ಯಕ್ಕೆ ಬಳಸಿದ…