ಆಸನವೇ ಇಲ್ಲದ ಮಂಗಳೂರು ಸ್ಟೇಟ್ ಬ್ಯಾಂಕ್ ನ ಬಸ್ಸ್ ನಿಲ್ದಾಣ.ಸಂಕಷ್ಟದಲ್ಲಿ ಪ್ರಯಾಣಿಕರು

ಮಂಗಳೂರು :ಬಸ್ಸ್ ಸ್ಟಾಂಡ್ ಅಂದ ಕೂಡಲೇ ಅಲ್ಲಿ ಆಸನದ ವ್ಯವಸ್ಥೆ ಮುಖ್ಯವಾಗಿ ಬೇಕಾಗುತ್ತೆ . ಆದರೆ ಕುಳಿತುಕೊಳ್ಳಲು ಆಸದ ವ್ಯವಸ್ಥೆಯೇ ಇಲ್ಲದಿದ್ರೆ ಪ್ರಯಾಣಿಕರಿಗೆ ಸಲ್ಪ ಕಷ್ಟವೇ ಅಂತ ಹೇಳಬಹುದು . ಆಸನವೇ ಇಲ್ಲದ ಒಂದು ಬಸ್ಸ್ ನಿಲ್ದಾಣ ಇರುವುದು ನಗರದ ಹೃದಯ ಭಾಗವೆಂದು ಕರೆಸಿಕೊಳ್ಳುವ ಸ್ಟೇಟ್ ಬ್ಯಾಂಕ್ ನ ಬಸ್ಸ್ ನಿಲ್ದಾಣದಲ್ಲಿ . ದಿನವೊಂದಕ್ಕೆ ಸಾಕಷ್ಟು ಬಸ್ಸುಗಳು ಓಡಾಟ ನಡೆಸುವ ಈ ನಿಲ್ದಾಣದಲ್ಲಿ ಇನ್ನು ಕೂಡ ಆಸನದ ವ್ಯವಸ್ಥೆ ಇಲ್ಲದಿರುವುದು ವಿಪರ್ಯಾಸವೇ ಆಗಿದೆ .ಅಧಿಕ ಸಂಖ್ಯೆಯ ಪ್ಲಾಟ್ಫಾರ್ಮ್…

Read More

‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉಧ್ಘಾಟನೆ: ಜು.26ರಂದು

ಮಂಗಳೂರು :ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉದ್ಘಾಟನಾ ಸಮಾರಂಭ ಜು.26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ತಿಳಿಸಿದರು . ಅವರು ಮಂಗಳೂರಿನ ಪಾಂಡೇಶ್ವರದಲ್ಲಿರುವ ರೆಡ್ ಕ್ರಾಸ್ ಪ್ರೇರಣ ಹಾಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, . ಕರ್ನಾಟಕದ…

Read More

ಜನಾರ್ದನ ಚೆಂಡ್ತಿಮಾರ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಂದಾಳು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಬಂಟ್ವಾಳ ಪುರಸಭೆ ಸದಸ್ಯ ಜನಾರ್ದನ ಚೆಂಡ್ತಿಮಾರ್ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಜನಾರ್ದನ ಚೆಂಡ್ತಿಮಾರ್ ಅವರ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಆಘಾತಕ್ಕೊಳಗಾಗಿದೆ. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ಜನಪರ, ಜೀವಪರ ಚಳವಳಿಗಳಲ್ಲಿ ಭಾಗಿಯಾಗುತ್ತಾ ಜನಸಾಮಾನ್ಯರ ಧ್ವನಿಯಾಗಿದ್ದರು. ರಾಜಕೀಯದ ಜೊತೆಗೆ ಸಾಮಾಜಿಕ ಸೇವೆಯೂ ಅನುಪಮವಾದುದು. ಭ್ರಷ್ಟಾಚಾರ ರಹಿತ ನಾಯಕರಾಗಿದ್ದ…

Read More

ಮಂಗಳೂರು : ಮಣ್ಣಗುಡ್ಡೆ ಅಂಗನವಾಡಿ ಕೇಂದ್ರದ ಕೊಠಡಿಯ ನಿರ್ಮಾಣಕ್ಕೆಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸತತ ಪ್ರಯತ್ನದ ಫಲವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ 20 ಲಕ್ಷ ರೂ ವಿಶೇಷ ಅನುದಾನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಗಾಂಧಿನಗರ ಹಾಗೂ ಕಸಬಾ ಬೆಂಗ್ರೆಯಲ್ಲಿ ಎರಡು ಅಂಗನವಾಡಿ ಕೊಠಡಿಗಳಿಗೆ ಮಂಜೂರಾತಿ ದೊರೆತಿದೆ. ಶೀಘ್ರದಲ್ಲಿಯೇ ಕಸಬಾ ಬೆಂಗ್ರೆಯಲ್ಲೂ ಶಿಲನ್ಯಾಸ…

Read More

ತುಳು ಅಕಾಡೆಮಿಯಿಂದ ತುಳು ನೋಟ್ ಪುಸ್ತಕ ಬಿಡುಗಡೆ

ಮಂಗಳೂರು : ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಪಠ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುವ ಸಲುವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹೊರ ತಂದ ತುಳು ನೋಟ್ ಪುಸ್ತಕವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಶನಿವಾರ ಬಿಡುಗಡೆ ಮಾಡಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ , ಖಾಸಗಿ, ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಸುಮಾರು 2,000 ವಿದ್ಯಾರ್ಥಿಗಳು ತೃತೀಯ ಭಾಷೆಯಾಗಿ ತುಳು ಪಠ್ಯವನ್ನು ಅಧ್ಯಯನ ಮಾಡುತ್ತಿದ್ದಾರೆ. ರಾಜ್ಯ…

Read More

ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆ:

ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ವಿವೇಕ ಯೋಜನೆಯ ಕೊಠಡಿಗಳು ಇದಾಗಿದೆ. ಈ ಕಾಲೇಜಿನ ವಿಜ್ಞಾನ ಪ್ರಯೋಗ ಶಾಲೆಯ ಉನ್ನತೀಕರಣಕ್ಕೆ ಬೇಡಿಕೆಯಿದ್ದು, ಎಂ.ಆರ್.ಪಿ.ಎಲ್, ಎಂ.ಸಿ.ಎಫ್ ನಂತಹ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಸಿಎಸ್ಆರ್ ಅನುದಾನದ ಮೂಲಕ ಬೇಡಿಕೆಯನ್ನು ಪೂರ್ಣ ಗೊಳಿಸಲು ಪ್ರಯತ್ನಿಸಲಾಗುವುದು. ಇದೇ ವೇಳೆ…

Read More

ಪೊಲೀಸರ ಮಿಂಚಿನ ಕಾರ್ಯಕ್ಕೆ ತಗಲು ಹಾಕಿಕೊಂಡ ಮಾಸ್ಟರ್ ಮೈಂಡ್ ರೋಹನ್ ಸಾಲ್ಡಾನ ಬಂಧನ

ಮಂಗಳೂರು: ಸಾಲ ಕೊಡುವ ಆಮಿಷವೊಡ್ಡಿ ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳಿಂದ 200 ಕೋಟಿಗೂ ಅಧಿಕ ಹಣವನ್ನು ವಂಚಿಸಿದ ಆರೋಪಿ ರೋಹನ್ ಸಲ್ಡಾನಾ (45) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ತನ್ನ ಐಷಾರಾಮಿ ಬಂಗಲೆಯಲ್ಲಿ ವಿದೇಶಿ ಯುವತಿಯರೊಂದಿಗೆ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಬಂಗಲೆಯಲ್ಲಿ ಗುಪ್ತ ಕೊಠಡಿ (ಹೈಡ್ ಔಟ್ ರೂಮ್) ಇರುವುದು ಕೂಡ ಪತ್ತೆಯಾಗಿದೆ. ರೋಹನ್ ಸಲ್ಡಾನಾ ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು, ಭೂ ವ್ಯವಹಾರ ಮತ್ತು ಉದ್ಯಮದಲ್ಲಿ…

Read More

ಮಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಡ್ರಗ್ಸ್ ವ್ಯಾಪಕ , ರಾಜಕೀಯ ನಾಯಕರು ಶಾಮೀಲಾಗಿರುವ ಸಾಧ್ಯತೆ .ಪತ್ರಿಕಾಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದ ಶಾಸಕ ವೈ ಭರತ್ ಶೆಟ್ಟಿ :

ಶಿಕ್ಷಣ ಕಾಶಿ ಮಂಗಳೂರಿನಲ್ಲಿ ಸಾಕಷ್ಟು ವಿದ್ಯಾ ಕೇಂದ್ರಗಳಿವೆ.ಆದರೆ ಈ ಭಾಗದಲ್ಲಿನ ಡ್ರಗ್ಸ್ ಹಾವಳಿಗೆ ಅನೇಕ ಯುವಕರು ಬಲಿಯಾಗುತ್ತಿದ್ದಾರೆ ಇದನ್ನು ಸರಕಾರ ತಡೆಯುವಲ್ಲಿ ವಿಫಲವಾಗಿದೆ. ಈ ಭಾಗಗಳಿಗೆ ತೆಲಂಗಾಣ,ಮಹಾರಾಷ್ಟ್ರ,ಕೇರಳ ಭಾಗದಿಂದ ಡ್ರಗ್ಸ್ ಪೂರೈಕೆಯಾಗುತ್ತಿದೆ.ಕರ್ನಾಟಕ ಸರಕಾರದಿಂದ ಡ್ರಗ್ಸ್ ಜಾಲವನ್ನು ಸರಿಯಾಗಿ ಬೇಧಿಸುವ ಪ್ರಯತ್ನಗಳು ನಡೆಯುತ್ತಿಲ್ಲ ಜೊತೆಗೆ ರಾಜಕೀಯ ನಾಯಕರು ಇದರಲ್ಲಿ ಶಾಮೀಲಾಗಿರುವ ಸಾಧ್ಯತೆಗಳು ಆತಂಕಕಾರಿ ವಿಷವಾಗಿದೆ ಎಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಉತ್ತರ ವಲಯದ ಶಾಸಕರಾದ ವೈ ಭರತ್ ಶೆಟ್ಟಿ ಆತಂಕ ವ್ಯಕ್ತಪಡಿಸಿದರು . ಸುದ್ದಿಗೋಷ್ಠಿಯಲ್ಲಿ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಾಣಬೇಕು: ಮಾಜಿ ಸಚಿವ ರಾಮನಾಥ್ ರೈ.

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಮಾಜಿ ಸಚಿವರಾದ ರಾಮನಾಥ್ ರೈ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು .ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆಂಪು ಕಲ್ಲು ಮತ್ತು ಮರಳಿನ ಲಭ್ಯತೆ ಆಗುತ್ತಾ ಇಲ್ಲ ಎನ್ನುವ ಚರ್ಚೆ ಪ್ರಸ್ತುತ ಇದೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ.ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲೇ ಸಮಸ್ಯೆ ಇತ್ತು. ಬಿಜೆಪಿ ಸರ್ಕಾರ…

Read More

ವಾತ್ಸಲ್ಯ ಛಾಯ ಟ್ರಸ್ಟ್ ಹಾಗೂ ನಮ್ಮ ಮೀಡಿಯಾ 24×7 ನ ‘ಗೋಲ್ಡನ್ ವಾಯ್ಸ್ ಒಫ್ ನಮ್ಮ ಮೀಡಿಯಾ 2025’ ಗೆ ಅದ್ಧೂರಿಯ ಚಾಲನೆ

ಮಂಗಳೂರು : ಮಂಗಳೂರಿನ ವಾತ್ಸಲ್ಯ ಛಾಯ ಟ್ರಸ್ಟ್ ಹಿರಿಯ ನಾಗರಿಕರ ಹಗಲು ಯೋಗಕ್ಷೇಮದ ಆಶ್ರಯದಲ್ಲಿ ಹಾಗೂ ಕರಾವಳಿಯ ನಾಡಿ ಮಿಡಿತ ಜನತೆಯ ಧ್ವನಿ ಯಾಗಿರುವ ನಮ್ಮ ಮೀಡಿಯಾ 24×7 ನ ಸಾರಥ್ಯದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ಸಂಗೀತ ರಿಯಾಲಿಟಿ ಶೋ ‘ಗೋಲ್ಡನ್ ವಾಯ್ಸ್ ಒಫ್ ನಮ್ಮ ಮೀಡಿಯಾ 2025’ ರ ಪ್ರಥಮ ಆಡಿಷನ್ ಬಲ್ಲಾಳ್ ಭಾಗ್ ನ ವಾತ್ಸಲ್ಯ ಛಾಯಾ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಿತು.ಮೊಗವೀರ ಮಹಾಜನ ಸಭಾ ದ ಉಪಾಧ್ಯಕ್ಷ ಮೋಹನ್ ಬೆಂಗ್ರೆ…

Read More
error: Content is protected !!