ನಾರಾವಿ ಗ್ರಾಮ ಪಂಚಾಯತಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಭೇಟಿ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM)…

Read More

ಸೆಪ್ಟೆಂಬರ್ – 5 ರಂದು ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರರ ಜನ್ಮದಿನವಾದ ಈದ್ ಮೀಲಾದ್ ಹಬ್ಬ ಆಚರಣೆ

ಮಂಗಳೂರು: ಈ ತಿಂಗಳ ೫ ನೇ ತಾರೀಖಿನಂದು ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರರ ಜನ್ಮದಿನವಾದ ಈದ್ ಮೀಲಾದ್ ಹಬ್ಬದ ಆಚರಣೆ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ ಜಿ ಹನೀಫ್ ಹಾಜಿ ತಿಳಿಸಿದರು. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವರ್ಷಂಪ್ರತೀ ನಡೆಸಿಕೊಂಡು ಬರುವಂತೆ. ಈ ವರ್ಷವೂ ಕೂಡ ಉಳ್ಳಾಲ ಜುಮ್ಮಾ ಮಸ್ಟಿದ್ ಮತ್ತು ಹಝ್ರತ್ ಸಯ್ಯದ್ ಮದನಿ ದರ್ಗಾದ ವತಿಯಿಂದ 27 ಮೊಹಲ್ಲಾಗಳ ಮತ್ತು 32 ಮದ್ರಸಗಳ ವಿದ್ಯಾರ್ಥಿಗಳು ಹಾಗೂ ಉಳ್ಳಾಲ ಮೊಹಲ್ಲಾ…

Read More

ಸೆಪ್ಟೆಂಬರ್ 27ರಂದು ಪಿ.ಎ. ಪುಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ ‘ಕನ್‌ವರ್ಜೆನ್ಸ್‌ 2025’ ಕಾರ್ಯಕ್ರಮ

ಮಂಗಳೂರು: ಪಿ.ಎ.ಪ್ರಥಮ ದರ್ಜೆ ಕಾಲೇಜು ಮತ್ತು ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್, ಪಿ.ಎ. ಕಾಲೇಜು ಆಫ್ ಎಂಜಿನಿಯರಿಂಗ್, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ)ಇವರ ಸಹಯೋಗದೊಂದಿಗೆ ಸುಸ್ಥಿರ ಭವಿಷ್ಯದ ಕೃತಕ ಬುದ್ಧಿಮತ್ತೆಯ ಅಂತಾರಾಷ್ಟ್ರೀಯ ಸಮ್ಮೇಳನವಾದ ‘ಕನ್‌ವರ್ಜೆನ್ಸ್‌ 2025’ ಕಾರ್ಯಕ್ರಮವು ನಡುಪದವಿನ ಪಿ.ಎ. ಪುಥಮ ದರ್ಜೆ ಕಾಲೇಜಿನಲ್ಲಿ ಸೆಪ್ಟೆಂಬರ್ 27ರಂದು ನಡೆಯಲಿದೆ ಎಂದು ಪಿ.ಎ.ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಸರ್ಫ್ರಾಜ್ ಜೆ ಹಾಸಿಂ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,…

Read More

ಏರ್ ಪೋರ್ಟ್ ‌ನಲ್ಲಿ ಚಿನ್ನ ಕಳ್ಳತನ – 4 ಮಂದಿ ಸಿಬ್ಬಂದಿ ಸೇರಿ ಐವರನ್ನು ಬಂಧಿಸಿದ ಬಜ್ಪೆ ಪೊಲೀಸರು

ಮಂಗಳೂರು: ಮಂಗಳೂರು ಏರ್ ಪೋರ್ಟ್ ‌ನಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳ್ಳತನ ಪ್ರಕರಣದಲ್ಲಿ 4 ಮಂದಿ ಸಿಬ್ಬಂದಿ ಸೇರಿ ಐವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ – ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್…

Read More

ಮಂಗಳೂರು ತಾಲೂಕು ಪಂಚಾಯತ್ ತ್ರೈಮಾಸಿಕ ಕೆಡಿಸಿ ಸಭೆ

ಮಂಗಳೂರು : ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮತ್ತು ಮಲೇರಿಯಾದ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿಯ ವಾಸದ ಮನೆಗಳಿಗೂ ರಾಜ್ಯ ಆರೋಗ್ಯ ಇಲಾಖೆಯು ದಂಡ ಪ್ರಯೋಗಕ್ಕೆ ಸುತ್ತೋಲೆ ಹೊರಡಿಸಿದೆ. ಜಿಲ್ಲಾಧಿಕಾರಿ ನೇತೃತ್ವದ ಸಭೆಯ ಬಳಿಕ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಭಂಡಾರಿ ತಿಳಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳೂರು ತಾಪಂನ ಸಭಾಂಗಣದಲ್ಲಿ ಪ್ರಥಮ ತ್ರೈಮಾಸಿಕ ಸಭೆಯಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಡೆಂಗ್ಯೂ ಹಾಗೂ…

Read More

ಆಟೋ ಚಾಲಕನ ಸುಳ್ಳು ಆರೋಪ . ಕಟ್ಟು ಕಥೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಪೊಲೀಸರು.

ಆಟೋ ಚಾಲಕನ ಮೇಲೆ ರವಿವಾರ ರಾತ್ರಿ ಮಂಗಳೂರಿನ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿಂದು ತಿಳಿಸಿದ್ದಾರೆ. ರಿಕ್ಷಾ ಚಾಲಕ ಬಶೀರ್ ಎಂಬುವವರು ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರು ನೀಡಿದ್ದರು.ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ…

Read More

ಬಾಯಿ ತೆರೆದಿದೆ ಡ್ರೈನೇಜ್ ಗುಂಡಿ, ಜನರು ಸಂಕಷ್ಟದಲ್ಲಿ

ಕೆಪಿಟಿ ಕಾಲೇಜು ಬಳಿಯ ಶರಬತ್ ಕಟ್ಟೆಯ ಬಸ್ ನಿಲ್ದಾಣದ ಬಳಿಇರುವ ಡ್ರೈನೇಜ್ ಗುಂಡಿಯೊಂದು ಬಾಯಿ ತೆರೆದು ಅಪಾಯಕ್ಕೆ ಆಸ್ಪದವನ್ನು ನೀಡುತ್ತಾ ಇದೆ . ಈ ಮಾರ್ಗವಾಗಿ ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚಾರವನ್ನು ನಡೆಸುತ್ತೆ . ಮಳೆಗಾಲದಂತಹ ಈ ವಿಷಮ ಕಾಲದಲ್ಲೂ ಈ ರೀತಿಯಾಗಿ ಬಾಯಿ ತೆರೆದು ನಿಂತ ಗುಂಡಿಯ ಸಮೀಪವಾಗಿ ಯಾರಾದರೂ ಪಾದಚಾರಿಗಳು ಅಥವಾ ವಾಹನ ಸವಾರರು ಹೋದರಂತೂ ಆಕಸ್ಮಿಕ ಅಪಘಾತಕ್ಕೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿದೆ . ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ಮುತುರ್ವರ್ಜಿಯನ್ನು ವಹಿಸಬೇಕು…

Read More

ಮಾದಕ ವಸ್ತುವಾದ ಎಂಡಿಎಂಎ ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೋಲೀಸರ ಬಲೆಗೆ

ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಫಝಲ್ ಹುಸೇನ್(33) ಮತ್ತು ನೌಶಾದ್(32) ಬಂಧಿತರು. ಇವರಿಂದ 15 ಗ್ರಾಂ ಎಂಡಿಎಂಎ, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 95,500/-ರೂಪಾಯಿ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು ಪಡಿಸಿಕೊಂಡು, ಆರೋಪಿಗಳ ವಿರುದ್ಧ…

Read More

ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಆರೋಪದಲ್ಲಿ ಬಿಹಾರದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ ರೈಲ್ವೇ ಸ್ಟೇಶನ್ ಬಳಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಆರೋಪದಲ್ಲಿ ಬಿಹಾರದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ ರಾಜ್ಯದ ಅರ್ನೌಟ್ ಗ್ರಾಮದ ಹರ್ಷ ಕುಮಾರ್ (22 ) ಮತ್ತು ಶಾಪುರ್ ಗ್ರಾಮದ ಅಮರ್ ಕುಮಾರ (28) ಬಂಧಿತ ಆರೋಪಿಗಳು.ಹರ್ಷ ಕುಮಾರ್ ಎಂಬಾತನಿಂದ 1 ಕೆ ಜಿ 230 ಗ್ರಾಂ ಮತ್ತು ಅಮರ್ ಕುಮಾರ್ ನಿಂದ 80 ಗ್ರಾಂ…

Read More

ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ.

ಮಂಗಳೂರು: ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸಿ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸೆಪ್ಟಂಬರ್ 7 ರಂದು ಭಾನುವಾರ ಮುಂಬಯಿಯ ಜಯಲೀಲಾ ಬ್ಯಾಂಕ್ವೆಟ್ ಹಾಲ್ ಗೋರೆಗಾಂವ್ ಪೂರ್ವ ಇಲ್ಲಿ ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಆಯೋಜಿಸಿರುವ 171 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಐಕಳ ಹರೀಶ್ ಶೆಟ್ಟಿ ಅವರನ್ನು…

Read More
error: Content is protected !!