“ರಾಜ್ಯ ಸರಕಾರ ದ.ಕ. ಜಿಲ್ಲೆಯನ್ನು ಕಡೆಗಣಿಸುತ್ತಿದೆ!“
ಮಂಗಳೂರು: ರಾಜ್ಯ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಾರಂಭದಿಂದಲೇ ಕಡೆಗಣಿಸುತ್ತ ಬಂದಿದೆ. ಇದರ ಮುಂದುವರಿದ ಭಾಗವಾಗಿ ಮರಳು, ಕೆಂಪು ಕಲ್ಲು ಬಂದ್ ಮಾಡಿ ಜನಸಾಮಾನ್ಯರನ್ನು ಶೋಷಣೆ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಮಾತಾಡಿದ ಅವರು, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು, ಕೆಂಪು ಕಲ್ಲು ಸಿಗದೇ ಜಿಲ್ಲೆಯ ಆರ್ಥಿಕ ಅಭಿವೃದ್ಧಿ ಕುಂಠಿತಗೊಂಡಿದೆ. ಸಾವಿರಾರು ಕೂಲಿ ಕಾರ್ಮಿಕರ ಬದುಕು ಬೀದಿಗೆ ಬಂದು ಬಿದ್ದಿದೆ. ಜಿಲ್ಲೆಯ ಬಿಜೆಪಿ ಶಾಸಕರು…