ಜಪ್ಪು ಗುಳಿಗಜ್ಜ ದೈವಸ್ಥಾನ–ನೇತ್ರಾವತಿ ನದಿ ರಸ್ತೆ ಅಭಿವೃದ್ಧಿಗೆ ಚಾಲನೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಜಪ್ಪು ಗುಳಿಗಜ್ಜ ದೈವಸ್ಥಾನ ಬಳಿಯಿಂದ ನೇತ್ರಾವತಿ ನದಿಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯು 30 ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡು ಗುಳಿಗಜ್ಜ ಕಟ್ಟೆಗೆ ಹೋಗುವ ಮುಖ್ಯ ರಸ್ತೆಯ ಅಭಿವೃದ್ಧಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಮುಖ್ಯ ಕಾರಣವೆಂದರೆ, ಈ ಭಾಗದಲ್ಲಿ ಮಳೆಗಾಲದಲ್ಲಿ ನೀರು ನಿಂತು ಸುತ್ತಮುತ್ತಲಿನ…
