ತಲಪಾಡಿ ಫಾರ್ಮ್‌ನೊಳಗಿನ ಮರದಲ್ಲಿ ಅಸ್ಥಿಪಂಜರ ಪತ್ತೆ .

ಮಂಗಳೂರು: ತಲಪಾಡಿ ಫಾರ್ಮ್‌ನೊಳಗಿನ ಮರದಲ್ಲಿ ಪತ್ತೆಯಾಗಿರುವ ಅಸ್ಥಿಪಂಜರ ಯಾರದ್ದು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್‌ನಲ್ಲಿ ಮಂಗಳವಾರ ಬೆಳಿಗ್ಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ…

Read More

ವಾಹನ ಚೋರನನ್ನು ಬಂಧಿಸಿದ ಪೊಲೀಸರು. ಪಿಕಪ್‌ ವಾಹನ ಮತ್ತು ಬೈಕ್‌ ವಶ .

ಮಂಗಳೂರು: ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನನ್ನು ಬಂಧಿಸಿರುವ ಪೊಲೀಸರು ಪಿಕಪ್‌ ವಾಹನ ಮತ್ತು ಬೈಕ್‌ ವಶಪಡಿಸಿಕೊಂಡಿದ್ದಾರೆ. ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಿಕಪ್‌ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್‌ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್‌ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಕೇರಳದ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್…

Read More

ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರ ದಾಳಿ. ಆರೋಪಿಗಳ ಬಂಧನ.

ಮಂಗಳೂರು: ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ 3 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿ ಮನೆಯನ್ನು ಮುಟ್ಟು ಗೋಲು ಹಾಕಲು ಕ್ರಮ ಕೈಗೊಂಡಿದ್ದಾರೆ. ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ತನ್ನ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿಯನ್ನು ಪಡೆದ ಸುರತ್ಕಲ್ ಪೊಲೀಸ್ ಠಾಣೆ ಪಿಎಸ್‌ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೊಕ್ಕಬೆಟ್ಟುವಿನ…

Read More

ದಕ್ಷಿಣ ಕನ್ನಡ ಜಿಲ್ಲಾ 10ನೇ ಗಮಕ ಕಲಾ ಸಮ್ಮೇಳನ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅ.17 ಮತ್ತು 18ರಂದು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 10ನೇ ಗಮಕ ಕಲಾ ಸಮ್ಮೇಳನ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅ.17 ಮತ್ತು 18ರಂದು ನಡೆಯಲಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಪ್ರವಚನಗಾರ, ಸಾಹಿತಿ, ಹಿರಿಯ ವಿದ್ವಾಂಸ ಮುಳಿಯ ಶಂಕರ ಭಟ್ಟ ಅವರು ವಹಿಸಲಿದ್ದಾರೆ ಎಂದು ಸಮ್ಮೇಳನದ ಗೌರವ ಮಾರ್ಗದರ್ಶಕ ಪ್ರದೀಪ ಕುಮಾರ ಕಲ್ಕೂರ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಅ.17 ರಂದು ಮಧ್ಯಾಹ್ನ 2.30ಕ್ಕೆ ಒಡಿಯೂರಿನ ಸಾಧ್ಯ ಶ್ರೀ ಮಾತಾನಂದಮಯೀ ಉಪಸ್ಥಿತಿಯಲ್ಲಿ ಡಾ.ಹರಿಕೃಷ್ಣ ಪುನರೂರು ಅವರು…

Read More

ಅ. 11 ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ

ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಅಕ್ಟೋಬರ್ 11 ರಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೆಯ “ಅಮೃತೋತ್ಸವ 2025” ನ್ನು ಶದ್ಧಾ ಭಕ್ತಿಯಿಂದ ವೈವಿಧಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದರು. ಅಂದು ಪೂರ್ವಾಹ್ನ 11.45 ಕೆ.ಸಾಮಿನಿ ಮಂಗಳಾಮೃತ ಪ್ರಾಣ ರವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಲಿರುವರು. ಬೆಳಗ್ಗೆ 9.00…

Read More

ಎಂ ಎಲ್ ಸಿ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆ.

ಮಂಗಳೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ , ಕ್ರಿಸ್ಮಸ್ ಹಬ್ಬ ಹಾಗೂ ರಂಜಾನ್ ಹಬ್ಬಗಳನ್ನು ಸರ್ವಧರ್ಮಿಯರ ಜೊತೆಗೆ ಸೇರಿ ಆಚರಿಸುತ್ತ ಬಂದಿದ್ದು , ಇದೀಗ 11ನೇ ವರ್ಷದ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆಯು ಅಕ್ಟೋಬರ್ 20 ರಂದು ನರಕಚತುರ್ದಶಿ ದಿನದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಸಭಾಭವನದಲ್ಲಿ ಸಂಜೆ ಗಂಟೆ 3:00ರಿಂದ ರಾತ್ರಿಯವರೆಗೆ ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಜೆ….

Read More

ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ. 10ರಂದು.

ಪುತ್ತೂರು; ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 2024ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ 2025ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಸಾಹಿತಿ ಮಕ್ಕಳ ಮಂಟಪದ ರೂವಾರಿ ಡಾ.ಎನ್.ಸುಕುಮಾರ ಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ…

Read More

ಸಂಘಟಿತ ಮತ್ತು ಅಸಂಘಟಿಕ ಕಾರ್ಮಿಕ ವಲಯಗಳಲ್ಲಿ ಕನಿಷ್ಠ ವೇತನ ಜಾರಿಗೆ ಬರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಸುಧಾರಣೆಯನ್ನು ಕಾಣಲಿದೆ-ಟಿ.ಎಂ ಶಹೀದ್ ತೆಕ್ಕಿಲ್

ಮಂಗಳೂರು: ರಾಜ್ಯ ಕಾರ್ಮಿಕ ವಲಯವನ್ನು ಸುಧಾರಣೆಯನ್ನು ತರುವಲ್ಲಿ ಕನಿಷ್ಠ ವೇತನ ಸಲಹಾ ಮಂಡಳಿಯು ಪ್ರಧಾನ ಪಾತ್ರವನ್ನು ವಹಿಸಲಿದೆ . ರಾಜ್ಯದಲ್ಲಿ ಸರಿಯಾದ ಪ್ರಮಾಣದಲ್ಲಿ ಸಂಘಟಿತ ಮತ್ತು ಅಸಂಘಟಿಕ ಕಾರ್ಮಿಕ ವಲಯಗಳಲ್ಲಿ ಕನಿಷ್ಠ ವೇತನ ಜಾರಿಗೆ ಬರುವುದರಿಂದ ಅವರ ಜೀವನ ಸಾಕಷ್ಟು ಪ್ರಮಾಣದಲ್ಲಿ ಸುಧಾರಣೆಯನ್ನು ಕಾಣಲಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ,, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ…

Read More

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ :- ಶಾಸಕ ಕಾಮತ್.

ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ…

Read More

ವಿವಿಧ ನಿಗಮ, ಪ್ರಾಧಿಕಾರ ಮತ್ತು ಅಕಾಡೆಮಿ ಅಧ್ಯಕ್ಷರೊಂದಿಗೆ ಶಾಸಕ ಮಂಜುನಾಥ ಭಂಡಾರಿ ಸಭೆ.ಪಕ್ಷದ ಬಲವರ್ಧನೆಗೆ ಸೂಚನೆ.

ಮಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಮಂಗಳವಾರ ವಿವಿಧ ನಿಗಮಗಳು, ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದರು.ಈ ಸಂದರ್ಭದಲ್ಲಿ ತಮ್ಮ ತಮ್ಮ ನಿಗಮ, ಪ್ರಾಧಿಕಾರ ಹಾಗೂ ಅಕಾಡೆಮಿಗಳಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳಿಗೆ ಸರ್ಕಾರದಿಂದ ಸಿಗುವ ಪರಿಹಾರವನ್ನು ಒದಗಿಸಿಕೊಡಲು ನಿಮ್ಮೊಂದಿಗೆ ನಾನಿದ್ದೇನೆಂಬ ಭರವಸೆ ನೀಡಿದರು.ನಿಗಮದ ಅಧ್ಯಕ್ಷರುಗಳು ಸರ್ಕಾರದ ಅಧಿಕಾರಿಗಳು ಹಾಗೂ ಜನರೊಂದಿಗೆ ಸ್ಪಂದನಾಶೀಲವಾಗಿ ಸಮನ್ವಯತೆಯಿಂದ ವರ್ತಿಸಬೇಕೆಂದು ಈ ವೇಳೆ ಶಾಸಕರು ಸಲಹೆ ನೀಡಿದರು. ಪಕ್ಷವೂ ತಮ್ಮನ್ನು ಗುರುತಿಸಿ ನೀಡಿರುವ ಸ್ಥಾನಮಾನಗಳಿಗೆ…

Read More
error: Content is protected !!