ಪುತ್ತೂರು ಯೋಜನಾ ಪ್ರಾಧಿಕಾರದಿಂದ ಕಡತ ವಿಲೇವಾರಿ.ರಾಜ್ಯದಲ್ಲೇ ಪ್ರಪ್ರಥಮ ಬಾರಿ ಕಡತ ವಿಲೇವಾರಿ ಕಾರ್ಯಾಗಾರ-ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ.
ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ವಿನ್ಯಾಸ ಅನುಮೋದನೆ ಕುರಿತ ಅರ್ಜಿಗಳಿಗೆ ಸಂಬಂಧಿಸಿ ೪ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಯ ಅದಾಲತ್ ಸೆ.೩೦ರಂದು ಶಾಸಕರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ ಕರ್ನಾಟಕ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಯೋಜನಾ ಪ್ರಾಧಿಕಾರದಿಂದ ಕಡತ ವಿಲೇವಾರಿ ಕಾರ್ಯಾಗಾರ ಆಯೋಜಿಸಲಾಗಿದೆ. ಏಕ ನಿವೇಶನ ನಕ್ಕಷೆ ಈ ಮೊದಲು ಗ್ರಾಮ ಪಂಚಾಯತ್‌ನಲ್ಲಿ…
