ಮಂಗಳೂರು ದಸರಾ ದೀಪಾಲಂಕಾರ ಉದ್ಘಾಟನೆ:- ಶಾಸಕ ಕಾಮತ್

ಪ್ರಸಿದ್ದ ಮಂಗಳೂರು ದಸರಾ ಹಬ್ಬಕ್ಕೆ ಇಡೀ ನಗರವು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದ್ದು ನಗರದ ಪಿವಿಎಸ್ ವೃತ್ತದ ಬಳಿ ನವರಾತ್ರಿಯ ಮೊದಲನೇ ದಿನದಂದು ಶಾಸಕ ವೇದವ್ಯಾಸ ಕಾಮತ್ ರವರು ದೀಪಾಲಂಕಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ದಸರಾ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರನ್ನು, ಪ್ರವಾಸಿಗರನ್ನು ಸೆಳೆಯುವ ಇಂತಹ ಹಬ್ಬದ ಸಂದರ್ಭದಲ್ಲಿ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶೇಷವಾಗಿ ಚಿಂತನೆ ನಡೆಸಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು….

Read More

ಮುಗುಳು ನಗೆಯ ಶಾರದಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ಜಗತ್ ಪ್ರಸಿದ್ಧ ಮಂಗಳೂರು ದಸರಾಗೆ ಚಾಲನೆ…..!

ಮಂಗಳೂರು: ಕರ್ನಾಟಕದಲ್ಲಿ ಮೈಸೂರಿನಂತೆ ಸಂಭ್ರಮದಿಂದ ಇನ್ನೊಂದು ಕಡೆ ದಸರಾವನ್ನು ಆಚರಿಸುವ ಊರೆಂದರೆ ಅದು ಕರಾವಳಿ ನಗರಿ ಮಂಗಳೂರು. ಇದನ್ನು ಮಂಗಳೂರು ದಸರಾ ಎಂದೇ ಕರೆಯುತ್ತಾರೆ.ಇಲ್ಲಿ ನವರಾತ್ರಿಗೆ ಶಾರದಾದೇವಿಯನ್ನು ಪ್ರತಿಷ್ಠಾಪಿಸುವುದೇ ವಿಶೇಷ. ಮಂಗಳೂರು ದಸರಾ 2025ರ ಉದ್ಘಾಟನೆಯು ಇಂದು, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳನ್ನು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮತ್ತು ಬ್ರಹ್ಮಕುಮಾರಿಗಳ ಮುಖ್ಯಸ್ಥೆ ಬ್ರಹ್ಮಕುಮಾರಿ ವಿಶ್ವೇಶ್ವರೀ ಜಿ ಅವರ ಉಪಸ್ಥಿತಿಯಲ್ಲಿ, ಜನಾರ್ದನ ಪೂಜಾರಿ ಅವರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎ.ವಿ….

Read More

ಹುಟ್ಟಿನ ಸಾರ್ಥಕತೆ ಮೆರೆಯುವ ರೀತಿಯಲ್ಲಿ ಹುಟ್ಟು ಹಬ್ಬವನ್ನ ಆಚರಿಸಿದ ಲಂಚುಲಾಲ್.

ಅಸ್ತ್ರ ಗ್ರೂಪ್ CEO, ಸಿನೆಮಾ ನಟ,ನಿರ್ಮಾಪಕ, CATCA ದ ಅಧ್ಯಕ್ಷ ಕೊಡುಗೈ ದಾನಿ ಲಂಚು ಲಾಲ್ ಅವರು ಹತ್ತು ಹಲವು ಸಮಾಜಮುಖಿ ಚಟುವಟಿಕೆಗಳನ್ನು ಮಾಡುವ ಮೂಲಕ ಜನಪ್ರಿಯತೆ ಪಡೆದಿದ್ದು ,ಇವರು ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುವ ಮೂಲಕ ಮತ್ತೆ ಎಲ್ಲರ ಗಮನ ಸೆಳೆದಿದ್ದಾರೆ. ತೊಕ್ಕೋಟು ಸಮೀಪದ ಗಟ್ಟಿ ಸಮಾಜ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಳ್ಳಾಲ, ತೊಕ್ಕೊಟ್ಟು ಪರಿಸರದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್, ಅಕ್ಕಿ, ಹಾಗೂ ದಿನಸಿ ಕಿಟ್ ನೀಡುವ ಮೂಲಕ ವಿಶೇಷವಾಗಿ ತಮ್ಮ…

Read More

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ನೂತನ ಆಡಳಿತ ಕಚೇರಿ ಉದ್ಘಾಟನೆ.

ಮಂಗಳೂರು: ಆಡಳಿತ ಸುಧಾರಣೆ ಮತ್ತು ಜನ ಪರ ನಿಲುವಿಗೆ ಬೇಗನೆ ಸ್ಪಂದಿಸುವ ದೃಷ್ಟಿಯಿಂದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಶಾಸಕರ ಕಚೇರಿಯ ಉದ್ಘಾಟನೆ ಕಾರ್ಯಕ್ರಮವು ಇಂದು ನಡೆಯಿತು . ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರಾದ ಪ್ರಕಾಶ್ ಪಿ ಎಸ್ ನೆರವೇರಿಸಿಕೊಟ್ಟರು . ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಪುರುಷೋತ್ತಮ, ಪುತ್ತೂರು ನಗರ…

Read More

ಜಿ ಎಸ್ ಟಿ ಕಡಿತ ಇಂದಿನಿಂದ ಅನ್ವಯ – ಬಿಜೆಪಿ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂಭ್ರಮ.

ಮಂಗಳೂರು: ಕೇಂದ್ರ ಸರಕಾರವು ನವರಾತ್ರಿಯ ಈ ವಿಶೇಷ ಸಂದರ್ಭದಲ್ಲಿ ಜಿ ಎಸ್ ಟಿ ಯನ್ನು ಕಡಿಮೆ ಮಾಡಿದ್ದು ದೇಶದ ಹಿತದ ದೃಷ್ಟಿಯಿಂದ ಒಳಿತಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹರ್ಷ ವ್ಯಕ್ತಪಡಿಸಿದರು . ಅವರು ಜಿಲ್ಲಾ ಬಿಜೆಪಿ ಕಛೇರಿಯ ವ್ಯಾಪ್ತಿಯಲ್ಲಿ ನಡೆದ GST ಕಡಿತ ಸಂಭ್ರಮದಲ್ಲಿ ಮಾತನಾಡಿ , ನಿನ್ನೆಯ ದಿನ ಪ್ರಧಾನಿ ಮೋದಿಯವರು ಹೇಳಿದಂತೆ ‘ಇಂದಿನಿಂದ ಭಾರತದಾದಂತ್ಯ ಸರಕು ಮತ್ತು ಸೇವಾ ತೆರಿಗೆಗಳ ದರ ಕಡಿತವಾಗಲಿದ್ದು ಇದು ಜನರ ಅಭಿವೃದ್ಧಿಗೆ ಸಹಕಾರಿಯಾಗಲಿದೆ . ಜಿ…

Read More

ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ ಕಾರ್ಯಕ್ರಮ:-

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ….

Read More

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನ ಬಂಧನ.

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಮಂಗಳೂರಿನ ಮೂಲ್ಕಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಯತಿರಾಜ್ (27 ವರ್ಷ), ಬಂಧಿತ ಯುವಕ‌. ಮೂಲ್ಕಿ ಕಾರ್ನಾಡ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ಈತನನ್ನು ಮೂಲ್ಕಿ ಪೊಲೀಸರು ಬಂಧಿಸಿ 1ಕೆಜಿ 200ಗ್ರಾಂ ಗಾಂಜಾ, 1ರಿಕ್ಷಾ, ಗಾಂಜಾ ಮಾರಾಟದಿಂದ ಬಂದ 300ರೂಪಾಯಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರೋಪಿತನನ್ನು ಕೋರ್ಟ್ ಗೆ ಹಾಜರುಪಡಿಸಿದಾಗ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Read More

55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ.

55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ Cr NO 32/1970 u/s 154,155 (2)MF Rules 1969 sec 86 of MF Act ( LPC :2/1972) ಪ್ರಕರಣದಲ್ಲಿ LPC ವಾರಂಟ್ ಆಸಾಮಿ ಯಾಗಿರುವ ಕೇರಳ ರಾಜ್ಯದ ಮಲ್ಲಪುರಂ ಜಿಲ್ಲೆಯ ಸಿಆರ್.ಚಂದ್ರನ್ (78 ವರ್ಷ) ಎಂಬುವವರು 55 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಇವರನ್ನು ಕೇರಳ ರಾಜ್ಯದ ಕ್ಯಾಲಿಕಟ್ ನ ಪುಲ್ಲಿಕಲ್ ಎಂಬಲ್ಲಿ ವಶಕ್ಕೆ…

Read More

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯ ಬಂಧನ.

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕಾಸರಗೋಡು ಕುಂಬಳೆಯ‌ ಹನೀಫ್ ಎಂದು ಗುರುತಿಸಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯದ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ 9 ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಈತನ ವಿರುದ್ಧ ನ್ಯಾಯಾಲಯದ…

Read More

ವೆನ್ಲಾಕ್‌ನಲ್ಲಿ ಕರುಣೆಯ ತೊಟ್ಟಿಲು ಉದ್ಘಾಟನೆ.

ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಶುಭ ಹಾರೈಸಿದರು. ಎಂಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಚೈರ್‌ಮ್ಯಾನ್ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು…

Read More
error: Content is protected !!