ಮೊಸರುಕುಡಿಕೆ, ಮೆರವಣಿಗೆ: ಮಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಧ್ಯ

ದಿನಾಂಕ: 05-09-2026 ರಂದು ಮಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಸಂಜೆ 5:00 ಗಂಟೆಯಿಂದ ನಗರದ ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹಾಗೂ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡದಂತೆ ಸೂಚಿಸಲಾಗಿದೆ. ವಾಹನ ಸಂಚಾರ ದಟ್ಟಣೆಯಾಗುವ ಸ್ಥಳಗಳು ಹಾಗೂ ಪರ್ಯಾಯ ಮಾರ್ಗಗಳ ವಿವರ: ದಿನಾಂಕ 05-09-2026 ರಂದು ಮಂಗಳೂರು…

Read More

ಮಂಗಳೂರಿನಲ್ಲಿ Blinkit ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

ಮಂಗಳೂರಿನಲ್ಲಿ ಆನ್‌ಲೈನ್‌ ಮೂಲಕ ಖರೀದಿಸಿದ ಮೊಟ್ಟೆಯಲ್ಲಿ ಹುಳ ಪತ್ತೆಯಾದ ಆರೋಪದ ಹಿನ್ನೆಲೆಯಲ್ಲಿ ಬ್ಲಿಂಕಿಟ್ ಸಂಸ್ಥೆಯ ಮಳಿಗೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಫಳ್ನೀರ್‌ನ ಫಳ್ನೀರ್ ಸ್ಕ್ವೇರ್ ಕಟ್ಟಡದಲ್ಲಿರುವ ಬ್ಲಿಂಕಿಟ್‌ನ ಆನ್‌ಲೈನ್ ಮಾರಾಟ ಕೇಂದ್ರದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಒಡೆದ ಮೊಟ್ಟೆಗಳನ್ನು ಹೊಂದಿದ್ದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಬ್ಲಿಂಕಿಟ್ ಆ್ಯಪ್ ಮೂಲಕ ಖರೀದಿಸಿದ್ದ ಮೊಟ್ಟೆಯಲ್ಲಿ ಹುಳ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಹಕರು ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ದೂರು ನೀಡಿದ್ದರು. ದೂರಿನ ಆಧಾರದ…

Read More

ಅಶೋಕ್ ರೈ ವಿರುದ್ಧ ಹಕೀಂ ಕೂರ್ನಡ್ಕ ಆಕ್ರೋಶ; ಟಿಕೆಟ್ ನೀಡಿದರೆ ಚುನಾವಣೆಗೆ ಸ್ಪರ್ಧಿಸುವ ಘೋಷಣೆ

ಮಂಗಳೂರು:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿದರೆ ತಾವು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಪುತ್ತೂರಿನ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮನ್ನು ಕಾಂಗ್ರೆಸ್ ಕಾರ್ಯಕರ್ತನಲ್ಲ ಎಂದು ಆರೋಪಿಸಿ ಅಶೋಕ್ ರೈ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಮುಖಂಡ ಜಲೀಲ್ ಕರೋಪಾಡಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಅಶೋಕ್ ರೈ…

Read More

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ: ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ರಾಜೇಶ್ ನಾಯಕ್ ಕರೋಪಾಡಿ ಅವರನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿರುವ ಆದೇಶ ಖಂಡನೀಯ. ಪೊಲೀಸ್ ಇಲಾಖೆಯ ಈ ಏಕಪಕ್ಷೀಯ ಕ್ರಮದ ವಿರುದ್ಧ ಬಂಟ್ವಾಳ ಬಿಜೆಪಿ ಮಂಡಲ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜೇಶ್ ನಾಯಕ್ ಕರೋಪಾಡಿ ಅವರು ಕರೋಪಾಡಿ ಗಡಿಭಾಗದಲ್ಲಿ ಹಲವು ವರ್ಷಗಳಿಂದ ಸಂಘಟನಾತ್ಮಕ ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಬಡವರು ಹಾಗೂ ದೀನದಲಿತರ ಪರವಾಗಿ ವಿವಿಧ ರೀತಿಯ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ವ್ಯಕ್ತಿಯ ವಿರುದ್ಧ ಉದ್ದೇಶಪೂರ್ವಕವಾಗಿ ಗಡಿಪಾರು ಕ್ರಮ ಕೈಗೊಳ್ಳಲಾಗಿದ್ದು, ಇದರ…

Read More

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನುತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ ‘ ರಾಜ್ಯ ಪ್ರಶಸ್ತಿ , 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ,2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ  ;…

Read More

ಕೃಷ್ಣಾಷ್ಟಮಿ ಹೂವಿನ ವ್ಯಾಪಾರಕ್ಕೆ ಪಾಲಿಕೆ ಕಾರ್ಯಾಚರಣೆ; ಲಾರಿ ತಡೆದು ವ್ಯಾಪಾರಿಗಳ ಆಕ್ರೋಶ

ಮಂಗಳೂರು: ಕೃಷ್ಣಾಷ್ಟಮಿ ಹಬ್ಬದ ಪ್ರಯುಕ್ತ ಹೂವಿನ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಮಿನಿವಿಧಾನಸೌಧದ ಎದುರು ಹೂವಿನ ವ್ಯಾಪಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ಲಾರಿ ಕಾರ್ಯಾಚರಣೆಗೆ ಬಂದಿದ್ದು, ಇದನ್ನು ವ್ಯಾಪಾರಿಗಳು ತಡೆದು ಪ್ರತಿಭಟಿಸಿದ್ದಾರೆ. ಹಬ್ಬದ ಸಂದರ್ಭದಲ್ಲೂ ವ್ಯಾಪಾರ ನಡೆಸಲು ಅವಕಾಶ ನೀಡದಿರುವುದಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಾಷ್ಟಮಿ ಹಬ್ಬದ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಈ ಘಟನೆ ನಡೆದಿದ್ದು, ಮಿನಿವಿಧಾನಸೌಧದ ಎದುರು…

Read More

ಜೆಪ್ಪು ಬಪ್ಪಾಲ್ ತಾಂತಿನಗರ ರಸ್ತೆ ಅಭಿವೃದ್ಧಿಗೆ ₹40 ಲಕ್ಷ ಅನುದಾನ; ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಜೆಪ್ಪು ಬಪ್ಪಾಲ್ ತಾಂತಿನಗರ 2ನೇ ಮತ್ತು 3ನೇ ಅಡ್ಡರಸ್ತೆಗಳ ರಸ್ತೆ ಅಭಿವೃದ್ಧಿ ಕಾಮಗಾರಿಯು 40 ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಸ್ಥಳೀಯ ಬಿಜೆಪಿ ಪ್ರಮುಖರು, ನಿವಾಸಿಗಳು ಸಾಕಷ್ಟು ಬಾರಿ ನನ್ನಲ್ಲಿ ಮನವಿ ಮಾಡಿದ್ದರು. ಅದರಂತೆ ಅನುದಾನಗಳನ್ನು ಜೋಡಿಸಿಕೊಂಡು ಈ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರಿಗೆ…

Read More

ಪೆರ್ನೆ ಸಮೀಪ ಮಹಿಳೆ ಅನುಮಾನಾಸ್ಪದ ಸಾವು; ಆತ್ಮಹತ್ಯೆಯೇ, ಕೊಲೆಯೇ ಎಂಬ ಶಂಕೆ

ಮಂಗಳೂರು /ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಇದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ.ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಮೃತರಿಗೆ ಇಬ್ಬರು ಮಕ್ಕಳಿದ್ದು ಇತ್ತೀಚೆಗೆ ಹೆಣ್ಣು ಮಗಳ ಮದುವೆ ನೆರವೇರಿಸಿದ್ದರು.ಅವರು…

Read More

ಫಾತಿಮಾ ನಿಶಾನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಮಂಗಳೂರು:ಸುಳ್ಯದ ಕಡೆಪಾಲ ಬಳಿ ನಿಗೂಢವಾಗಿ ಕೊಲೆಯಾಗಿದ್ದ ಫಾತಿಮಾ ನಿಶಾನ ಕೊಲೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜು.18 ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆಯಿಷಾ ಮತ್ತು ಫಸೀಲಾ ಪರವಾಗಿ ಪುತ್ತೂರು…

Read More

ಸೆ.5ರಂದು ಮಂಗಳೂರಿನಲ್ಲಿ ‘ರೈಸ್ ಆ್ಯಂಡ್ ರೆಕ್ಲೈಮ್’ ಮಹಿಳಾ ಸಮ್ಮೇಳನ

ಮಂಗಳೂರು: ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಹಾಗೂ ನಾಯಕತ್ವ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ವಿಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಸೆ.5ರಂದು ಮಂಗಳೂರಿನ ಪುರಭವನದಲ್ಲಿ ‘ರೈಸ್ ಆ್ಯಂಡ್ ರೆಕ್ಲೈಮ್’ ಧ್ಯೇಯವಾಕ್ಯದಡಿ ಮಹಿಳಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಸ್‌ಡಿಪಿಐ ರಾಜ್ಯ ಸದಸ್ಯೆ ಮಿಸ್ರಿಯಾ ಕಣ್ಣೂರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರು ಕೇವಲ ಕುಟುಂಬ ನಿರ್ವಹಣೆಗೆ ಸೀಮಿತವಾಗದೆ, ದೇಶದ ಭವಿಷ್ಯ ರೂಪಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ರಾಜಕೀಯ, ಆಡಳಿತ, ಆರ್ಥಿಕತೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸಮಾನ…

Read More
error: Content is protected !!