ಅಕ್ರಮ ಕಸಾಯಿಖಾನೆ ಮೇಲೆ ದಾಳಿಯಿಂದ 9 ಜಾನುವಾರಿನ ತಲೆಗಳ ವಶ.
ಬೆಳ್ತಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಹಿನ್ನಲೆ ಬೆಳ್ತಂಗಡಿ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ, ಒಂಬತ್ತು ಜಾನುವಾರುಗಳ ತಲೆಯನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿ ಎಂಬಾತನ ಮನೆ ಮೇಲೆ ಈ ದಾಳಿ ನಡೆದಿದೆ. ಕಳವು ಮಾಡಿದ ಜಾನುವಾರುಗಳನ್ನು ಇಲ್ಲಿಗೆ ತಂದು ಅಕ್ರಮವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು….
