ಕಟ್ಟೆಪುಣೆ ರಸ್ತೆ ಅಭಿವೃದ್ಧಿಗೆ ₹1 ಕೋಟಿ; ಶಾಸಕ ವೇದವ್ಯಾಸ ಕಾಮತ್‌ರಿಂದ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನಲ್ಲಿ ಒಂದು ಕೋಟಿ ರೂ. ವಿಶೇಷ ಅನುದಾನದಲ್ಲಿ ಕಟ್ಟೆಪುಣೆ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್‌ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಈ ಕಟ್ಟೆಪುಣಿ ರಸ್ತೆಯ ಭಾಗದ ಜನರು ಪ್ರತೀ ವರ್ಷವೂ ಮಳೆಗಾಲದಲ್ಲಿ ನೆರೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಇದಕ್ಕೊಂದು ಪರಿಹಾರ ಸಿಗಬೇಕು, ಈ ಭಾಗಕ್ಕೆ ಸುಸಜ್ಜಿತ ಕಾಂಕ್ರೀಟ್ ರಸ್ತೆ ಹಾಗೂ ಸೇತುವೆ ನಿರ್ಮಾಣವಾಗಬೇಕು…

Read More

ಸೇತುವೆ ಕುಸಿತ: ತಕ್ಷಣ ಸ್ಪಂದಿಸಿದ ಬಜ್ಪೆ ನಾಗರಿಕರಕ್ಷಣಾ ವೇದಿಕೆ – ಎರಡು ದಿನಗಳಲ್ಲಿ ಪರ್ಯಾಯ ರಸ್ತೆ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

ಬಜ್ಪೆ: ಮಂಗಳೂರು–ಬಜ್ಪೆ–ಕಟ್ಟೀಲ್ ರಾಜ್ಯ ಹೆದ್ದಾರಿಯ ಕರಬಾರು ಸಮೀಪದಲ್ಲಿರುವ ಸೇತುವೆ ಕುಸಿದು ವಾಹನ ಸಂಚಾರಕ್ಕೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ, ಬಜ್ಪೆ ನಾಗರಿಕರಕ್ಷಣಾ ವೇದಿಕೆಯ ಪದಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ (PWD) ಅಧಿಕಾರಿಗಳನ್ನು ಸಂಪರ್ಕಿಸಿ, ವಾಹನ ಸಂಚಾರಕ್ಕೆ ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಇಂದು ಬಜ್ಪೆ ನಾಗರಿಕರಕ್ಷಣಾ ವೇದಿಕೆಯ ಅಧ್ಯಕ್ಷರಾದ ಸಿರಾಜ್ ಬಜ್ಪೆ ಅವರ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಮಾತುಕತೆ ನಡೆಸಿತು. ಸೇತುವೆ ದುರಸ್ತಿ ಕಾಮಗಾರಿ…

Read More

ಕರಾವಳಿಯ ವೈಭವ ‘ಮಂಗಳೂರು ದಸರಾ’ಕ್ಕೆ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ-ಐತಿಹಾಸಿಕ ಸಂಭ್ರಮಕ್ಕೆ ಸಾಕ್ಷಿಯಾಗುವ ಭರವಸೆ

​ಬ್ರಹ್ಮಶ್ರೀ ನಾರಾಯಣ ಗುರುಗಳ ಪಾವನ ಸನ್ನಿಧಿ, ಸಮಾನತೆ ಮತ್ತು ಸಂಸ್ಕೃತಿಯ ಸಂಗಮ ಕ್ಷೇತ್ರವಾದ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 21 ರವರೆಗೆ ನಡೆಯಲಿರುವ ಐತಿಹಾಸಿಕ ‘ಮಂಗಳೂರು ದಸರಾ ಮಹೋತ್ಸವ’ದ ಉದ್ಘಾಟನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಕ್ಷೇತ್ರಾಡಳಿತ ಸಮಿತಿಯ ವತಿಯಿಂದಆಹ್ವಾನಿಸಲಾಯಿತು. ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಜೈರಾಜ್ ಹೆಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯರಾದ…

Read More

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಬಸ್ ಚಾಲಕರು, ನಿರ್ವಾಹಕರು ಹಾಗೂ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ

ಮಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಬಸ್ ಸುರಕ್ಷತೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 02-09-2026 ರಂದು ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಮಂಗಳೂರು ನಗರದ ವಿವಿಧ ಶಾಲೆಗಳ ಶಾಲಾ ಬಸ್ ಚಾಲಕರು, ಮಾಲಿಕರು, ಬಸ್ ಮ್ಯಾನೇಜರ್ಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಸುಮಾರು 600 ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಮುಖ್ಯವಾಗಿ ಶಾಲಾ ಬಸ್ ಚಾಲಕರು ಹಾಗೂ ನಿರ್ವಾಹಕರು ಪಾಲಿಸಬೇಕಾದ ಕಾನೂನು ನಿಯಮಗಳು, ರಸ್ತೆ…

Read More

ಖರ್ಗೆ ಅವಮಾನ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಖಂಡನೀಯ: ದಿನೇಶ್ ಮುಳೂರು

ಮಂಗಳೂರು:ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರು ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣದಲ್ಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 10ರಂದು…

Read More

ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್‌ನಿಂದ ಅ.5ರಂದು ವೈವಿಧ್ಯಮಯ ಕಾರ್ಯಕ್ರಮ……..!

ಮಂಗಳೂರು: ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್‌ (ರಿ) ಮಂಗಳೂರು ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಅಕ್ಟೋಬರ್‌ 5ರಂದು ನಗರದ ಪುರಭವನದಲ್ಲಿ ನಡೆಸಲು ಸಂಘ ತೀರ್ಮಾನಿಸಿದೆ . ಅಂದು ಬೆಳಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಟ್ರಸ್ಟ್‌ನ ಅಧ್ಯಕ್ಷ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀನಾರಾಯಣ ಎಂ. (ಅಣ್ಣು ಪೂಜಾರಿ) ಘನ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾವಂತೂರುಗುತ್ತು ದುರ್ಗಾದಾಸ್ ಶೆಟ್ಟಿ, ಗಡಿಕಾರರು, ಬಲವಾಂಡಿ ಪಿಲ್ಟಂಡಿ ದೈವ ಕ್ಷೇತ್ರ, ಮಾವಂತೂರುಗುತ್ತು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಂಟರ…

Read More

ಸೆ. 20ರಂದು ಅಂತರ್ ಜಿಲ್ಲಾಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಅಂತರ್ ಜಿಲ್ಲಾಮಟ್ಟದ ಮಾಸ್ಟರ್ಸ್ ಮತ್ತು ಕಿಡ್ಸ್ ಅಥ್ಲೆಟಿಕ್ ಕ್ರೀಡಾಕೂಟ ಸೆ. 20ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಗೌರವಾಧ್ಯಕ್ಷ ಪ್ರೇಮನಾಥ್ ಶೆಟ್ಟಿ ತಿಳಿಸಿದ್ದಾರೆ. ಕ್ರೀಡಾಕೂಟ ಬೆಳಿಗ್ಗೆ 6 ಗಂಟೆಗೆ ಆರಂಭವಾಗಲಿದ್ದು, ಬೆಳಿಗ್ಗೆ 9.30ಕ್ಕೆ ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ ಉದ್ಘಾಟಿಸಲಿದ್ದಾರೆ. 30ರಿಂದ 90 ವರ್ಷ ಮೇಲ್ಪಟ್ಟ ವಯೋಮಿತಿಯ ಪುರುಷ ಹಾಗೂ ಮಹಿಳಾ ಸ್ಪರ್ಧಿಗಳಿಗೆ…

Read More

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಯು.ಟಿ. ಖಾದರ್

ಮಂಗಳೂರು:ಸೆಪ್ಟೆಂಬರ್ 18ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಂಗಳೂರಿನ ಹೊರಗೆ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಕರಾವಳಿಯಲ್ಲಿ ನಡೆಯುತ್ತಿರುವುದು ಮಂಗಳೂರು ಹಾಗೂ ಕರಾವಳಿ ಜನತೆಗೆ ಹೆಮ್ಮೆಯ ವಿಚಾರ ಎಂದು ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಹಿತಾಸಕ್ತಿದಾರರೊಂದಿಗೆ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಸಂಪುಟ ಸಭೆಯ ಅಜೆಂಡಾ…

Read More

ಸೆ.6ರಂದು ‘ರಾಗ ಸುಧಾ’ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ

ಮಂಗಳೂರು: ಕಲಾಸಾಧನ ಸಂಸ್ಥೆಯ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ಸೆಪ್ಟೆಂಬರ್ 6ರಂದು ಸಂಜೆ 5 ಗಂಟೆಗೆ ನಗರದ ಶ್ರೀರಾಮಕೃಷ್ಣ ಮಠದಲ್ಲಿ ‘ರಾಗ ಸುಧಾ’ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಾಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಕಲಾವಿದರು ಕಾರ್ಯಕ್ರಮದಲ್ಲಿ ಸಂಗೀತ ಪ್ರಸ್ತುತಪಡಿಸಲಿದ್ದಾರೆ. ಗ್ವಾಲಿಯರ್ ಘರಾನಾದ ಖ್ಯಾತ ಗಾಯಕ ಆದಿತ್ಯ ಮೋದಕ್, ಗ್ವಾಲಿಯರ್-ಕಿರಾಣಾ ಪದ್ಧತಿಯ ಗಾಯಕ ಹಾಗೂ ಹಾರ್ಮೋನಿಯಂ ವಾದಕ…

Read More

ಸೆ.4ರಿಂದ ಹೂವಿನ ಹಡಗಲಿಯಲ್ಲಿ ಎಸ್ಸೆಸ್ಸೆಫ್ ರಾಜ್ಯಮಟ್ಟದ ಸಾಹಿತ್ಯೋತ್ಸವ

ಮಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್)ನ 14ನೇ ರಾಜ್ಯಮಟ್ಟದ ಸಾಹಿತ್ಯೋತ್ಸವ ಸೆಪ್ಟೆಂಬರ್ 4, 5 ಮತ್ತು 6ರಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಮದರ್ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ತಿಳಿಸಿದ್ದಾರೆ. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ ,ಸೆ.4ರಂದು ಸಂಜೆ 5 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ಬಳಿಕ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಆಯೋಜಿಸಲಾಗಿದೆ. ಸೆ.5 ಮತ್ತು 6ರಂದು ನಡೆಯುವ ಸಾಹಿತ್ಯೋತ್ಸವದಲ್ಲಿ ರಾಜ್ಯದ…

Read More
error: Content is protected !!