ಮಂಗಳೂರು ದಸರಾ ವಿಜೃಂಭಣೆಯಿಂದ ಆಚರಣೆಗೆ ಸಿದ್ಧತೆ: ಯು.ಟಿ. ಖಾದರ್
ಮಂಗಳೂರು: ನಾಡಹಬ್ಬ ಮಂಗಳೂರು ದಸರಾವನ್ನು ಪವಿತ್ರತೆ, ಶ್ರದ್ಧೆ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ. ಮಂಗಳೂರು ದಸರಾ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ಉತ್ಸವವಾಗಿದೆ. ಸರ್ವ ಧರ್ಮ ಹಾಗೂ ಸಮುದಾಯಗಳ ಗೌರವಕ್ಕೆ ಧಕ್ಕೆ ಬಾರದಂತೆ ದಸರಾ ಮಹೋತ್ಸವವನ್ನು ಅತ್ಯುತ್ತಮವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕರು ಹಾಗೂ…
