ಕಲಾ ಶಿಕ್ಷಕ ಝುಬೇರ್ ಖಾನ್ ಕುಡ್ಲ “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ”ಗೆ ಆಯ್ಕೆ

ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯ ಕಲಾ ಶಿಕ್ಷಕ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿರುವ ಝುಬೇರ್ ಖಾನ್ ಕುಡ್ಲ ಅವರು 2026ನೇ ಸಾಲಿನ ಪ್ರತಿಷ್ಠಿತ ‘ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.​ಬಿ ನ್ಯೂಸ್ ಪತ್ರಿಕೆ ಹಾಗೂ ಸಿರಿಗನ್ನಡ ಫೌಂಡೇಶನ್ ಕರ್ನಾಟಕ ಇವರ ಜಂಟಿ ಆಶ್ರಯದಲ್ಲಿ, ಇವರ ಸುದೀರ್ಘ ಸಮಾಜಮುಖಿ, ಸಾಹಿತ್ಯಿಕ ಮತ್ತು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ​ಈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 06/09/2026 ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ…

Read More

ಕೃಷ್ಣ ಜನ್ಮಾಷ್ಟಮಿ, ತೆನೆಹಬ್ಬಕ್ಕೆ ರಜೆ: ಜಿಲ್ಲಾಧಿಕಾರಿಗೆ ವೇದವ್ಯಾಸ ಕಾಮತ್ ಮನವಿ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಕ್ರೈಸ್ತ ಸಮುದಾಯದವರ ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರವರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದರು. ನಾಡಿನೆಲ್ಲೆಡೆ ಹಬ್ಬಗಳ ಸಂಭ್ರಮ ಆರಂಭವಾಗಿದ್ದು, ಇದೇ ಸೆಪ್ಟೆಂಬರ್ 4 ರಂದು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಸಂಖ್ಯಾತ ಭಕ್ತರು, ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಿದ್ದಾರೆ. ಇದು ಕೇವಲ ಧಾರ್ಮಿಕ ಆಚರಣೆಯಾಗಿರದೇ,…

Read More

ಪುತ್ತೂರು ಜನಸೇವಾ ಕೇಂದ್ರ ಹಲ್ಲೆ ಪ್ರಕರಣ: ಸುದರ್ಶನ್ ಪೈಗೆ ಜಾಮೀನು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ದರ್ಬೆಯ ಜನಸೇವಾ ಕೇಂದ್ರದಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರೊಬ್ಬರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಸುಳ್ಯ ತಾಲೂಕಿನ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ವಾನ್ ನೀಡಿದ ದೂರಿನ ಆಧಾರದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು….

Read More

ಸೆ.4 ಮತ್ತು 5ರಂದು ಕದ್ರಿಯಲ್ಲಿ ಭವ್ಯ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆ ಉತ್ಸವ

ಮಂಗಳೂರು:ಕದ್ರಿ ಶ್ರೀ ಗೋಪಾಲಕೃಷ್ಣ ಮಠ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನವನ್ನು ಕೇಂದ್ರವಾಗಿಸಿಕೊಂಡು ಸೆಪ್ಟೆಂಬರ್ 4 ಮತ್ತು 5ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಹಾಗೂ ಸಂಪ್ರದಾಯಬದ್ಧ ಮೊಸರುಕುಡಿಕೆ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಸಮಿತಿಯ ಪ್ರಮುಖ ಸುಧಾಕರ್ ರಾವ್ ಪೇಜಾವರ ತಿಳಿಸಿದ್ದಾರೆ. ಕದ್ರಿ ದೇವಸ್ಥಾನದಿಂದ ಸುಮಾರು ಒಂದರಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಪುರಾತನ ಶ್ರೀ ಗೋಪಾಲಕೃಷ್ಣ ಮಠ ಮತ್ತು ಕದ್ರಿ ದೇವಸ್ಥಾನದ ನಡುವೆ ಪ್ರತಿವರ್ಷ ಭವ್ಯ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು…

Read More

ಸೆ.6ರಂದು ಮಂಗಳೂರಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ

ಮಂಗಳೂರು: ಬಂಟ ಬಾಂಧವರನ್ನು ಒಗ್ಗೂಡಿಸುವ ಉದ್ದೇಶದಿಂದ ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಓಂಕಾರ ನಗರ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇವರ ಸಹಯೋಗದಲ್ಲಿ ಸೆಪ್ಟೆಂಬರ್ 6ರಂದು ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ನಗರದ ಬಂಟ್ಸ್ ಹಾಸ್ಟೆಲ್‌ನ ಬಂಟರ ಮಾತೃಸಂಘದ ಆವರಣ ಹಾಗೂ ಶ್ರೀ ರಾಮಕೃಷ್ಣ ಶಾಲಾ ಮೈದಾನದಲ್ಲಿ ಬೆಳಗ್ಗೆ 9 ಗಂಟೆಯಿಂದ ಕ್ರೀಡೋತ್ಸವ…

Read More

ಇ-ಸ್ವತ್ತು 2.0 ಲೋಪ ಸರಿಪಡಿಸಲು ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು, ರೈತರು ಹಾಗೂ ಬಡ ಕುಟುಂಬಗಳಿಗೆ ಇ-ಸ್ವತ್ತು 2.0 ತಂತ್ರಾಂಶದಿಂದ ತೀವ್ರ ಸಮಸ್ಯೆಯಾಗುತ್ತಿದ್ದು, ಸರ್ಕಾರ ತಕ್ಷಣ ತಂತ್ರಾಂಶದ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ. ಮನಪಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಜಿಟಲೀಕರಣ ಹಾಗೂ ಆಡಳಿತ ಸುಧಾರಣೆಯ ಹೆಸರಿನಲ್ಲಿ ಜಾರಿಗೊಳಿಸಿರುವ ಇ-ಸ್ವತ್ತು 2.0 ವ್ಯವಸ್ಥೆಯು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಬದಲು ಕಚೇರಿಗಳ ಅಲೆದಾಟ, ವಿಳಂಬ ಹಾಗೂ ಮಾನಸಿಕ ಕಿರುಕುಳಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು….

Read More

ಅಪಘಾತ ತಡೆಗೆ ಯುವಕರ ವಿಶಿಷ್ಟ ಹೆಜ್ಜೆ: ಕಿನ್ನಿಗೋಳಿಯಲ್ಲಿ ರೋಡ್ ಹಂಪ್ಸ್‌ಗೆ ಪೈಂಟ್ ಬಳಿದ ‘ಮೀಡಿಯಾ ಮನಸುಗಳು’

ಕಿನ್ನಿಗೋಳಿ: ರಾತ್ರಿ ವೇಳೆ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ರಸ್ತೆ ಹಂಪ್ಸ್ ಗಳಿಗೆ ಬಣ್ಣ ಬಳಿಯುವ ಮೂಲಕ ‘ಮೀಡಿಯಾ ಮನಸುಗಳು’ ತಂಡವು ಅಪಘಾತ ತಡೆಯುವ ಮಹತ್ವದ ಕಾರ್ಯ ಕೈಗೊಂಡಿದೆ.ಇಲ್ಲಿನ ಸೈಂಟ್ ಮೇರಿ ಶಿಕ್ಷಣ ಸಂಸ್ಥೆಗಳು, ಕಾನ್ಸೆಟ್ಟ ಆಸ್ಪತ್ರೆ ಹಾಗೂ ಚರ್ಚ್‌ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿದ್ದ ರೋಡ್ ಹಂಪ್ಸ್‌ಗಳ ಬಣ್ಣ ಮಾಸಿಹೋಗಿತ್ತು. ಇದರಿಂದಾಗಿ ತಡರಾತ್ರಿ ಸಂಚರಿಸುವ ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಸವಾರರಿಗೆ ರಸ್ತೆ ಹಂಪ್ಸ್ ಗಳು ಗೋಚರಿಸದೆ ಅಪಾಯ ಸೃಷ್ಟಿಯಾಗುತ್ತಿತ್ತು. ಸಮಸ್ಯೆಯ ಗಂಭೀರತೆಯನ್ನು ಅರಿತ ‘ಮೀಡಿಯಾ…

Read More

ಸೆ.4ರಿಂದ 6ರವರೆಗೆ ಕುಳಾಯಿಯ ಇಸ್ಕಾನ್‌ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ

ಮಂಗಳೂರು: ಕುಳಾಯಿಯ ನೂತನ ಇಸ್ಕಾನ್ ದೇವಸ್ಥಾನದಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ಮೂರು ದಿನಗಳ ಕಾಲ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕುಳಾಯಿ ಇಸ್ಕಾನ್ ದೇವಸ್ಥಾನದ ಅಧ್ಯಕ್ಷ ಹಾಗೂ ಜನರಲ್ ಮ್ಯಾನೇಜರ್ ನಾಮ ನಿಷ್ಠ ದಾಸ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಗವದ್ಗೀತೆಯ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮಹೋತ್ಸವದ ಅಂಗವಾಗಿ ಇಸ್ಕಾನ್ ಸಂಸ್ಥಾಪಕ ಆಚಾರ್ಯ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ…

Read More

ಸೆ.3, 4ರಂದು ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಮಂಗಳೂರು: ಇಸ್ಕಾನ್ ಮಂಗಳೂರು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ 2026 ಅನ್ನು ಸೆಪ್ಟೆಂಬರ್ 3 ಮತ್ತು 4ರಂದು ಪಿಲಿಕುಳದ ಸೌಟ್ಸ್ ಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮಂಗಳೂರಿನ ಇಸ್ಕಾನ್ ಪಿವಿಎಸ್ ಕಲಾಕುಂಜ್‌ನ ಶ್ರೀಕೃಷ್ಣ ಬಲರಾಮ ಮಂದಿರದ ಅಧ್ಯಕ್ಷ ಗುಣಾಕರ ರಾಮ ದಾಸ ತಿಳಿಸಿದ್ದಾರೆ. ಇಸ್ಕಾನ್ ಪಿವಿಎಸ್ ಕಲಾಕುಂಜ್‌ನ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಯುವಜನ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು. ಮಹೋತ್ಸವದ ಅಂಗವಾಗಿ ಆಳ್ವಾಸ್ ವತಿಯಿಂದ…

Read More

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು  ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ  ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ ‘ ರಾಜ್ಯ ಪ್ರಶಸ್ತಿ , 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ,2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; 2019ರಲ್ಲಿ ಜಾನಪದ ಲೋಕ…

Read More
error: Content is protected !!