ಡಿಸಿ ಬಂಗಲೆ ನಾಮಫಲಕದಿಂದ ಪತ್ನಿಯ ಹೆಸರು ತೆರವುಗೊಳಿಸಲು ಪ್ರತಿಭಾ ಕುಳಾಯಿ ಆಗ್ರಹ

ಮಂಗಳೂರು:ಮಂಗಳೂರು ಜಿಲ್ಲಾಧಿಕಾರಿಗಳ ಅಧಿಕೃತ ಬಂಗಲೆಯ ನಾಮಫಲಕದಲ್ಲಿ ಜಿಲ್ಲಾಧಿಕಾರಿಗಳ ಪತ್ನಿಯ ಹೆಸರನ್ನು ನಮೂದಿಸಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಸರ್ಕಾರಿ ಆಸ್ತಿಗಳಲ್ಲಿ ಖಾಸಗಿ ವ್ಯಕ್ತಿಗಳ ಹೆಸರುಗಳನ್ನು ಪ್ರದರ್ಶಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಮೂಲಕ ಪ್ರಶ್ನೆ ಎತ್ತಿದ್ದಾಗಿ ತಿಳಿಸಿದರು. “ಮಂಗಳೂರು ಜಿಲ್ಲಾಧಿಕಾರಿಗಳ ಬಂಗಲೆಯ ಹೊರಭಾಗದಲ್ಲಿರುವ ನಾಮಫಲಕದಲ್ಲಿ ಮೊದಲಿಗೆ ಜಿಲ್ಲಾಧಿಕಾರಿಗಳ ಪತ್ನಿಯ ಹೆಸರನ್ನು ಹಾಗೂ…

Read More

‘ಪುತ್ತೂರು ಚಲೋ’ ಸವಾಲಿಗೆ ಪ್ರತಿಭಾ ಕುಳಾಯಿ ತಿರುಗೇಟು

ಮಂಗಳೂರು: ಬಿಜೆಪಿ ಮುಖಂಡರು ಆಯೋಜಿಸಲು ಉದ್ದೇಶಿಸಿರುವ ‘ಪುತ್ತೂರು ಚಲೋ’ ಕಾರ್ಯಕ್ರಮಕ್ಕೆ ಸಂಬಂಧಿಸಿ ತನಗೆ ಸವಾಲು ಹಾಕಿರುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಧರ್ಮ, ಜಾತಿ ಅಥವಾ ರಾಜಕೀಯ ಪಕ್ಷಕ್ಕೆ ಸೇರಿದ ಮಹಿಳೆಗೆ ಅನ್ಯಾಯವಾದರೂ ತಾನು ಆಕೆಯ ಪರವಾಗಿ ನಿಲ್ಲುವುದಾಗಿ ಅವರು ಹೇಳಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡರು ‘ಪುತ್ತೂರು ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾನು ಈ ಕಾರ್ಯಕ್ರಮಕ್ಕೆ ಬರಬೇಕೆಂದು ಸವಾಲು…

Read More

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳಿಗೆ ಆದ್ಯತೆ

ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆಪ್ಟೆಂಬರ್ 18, 2026ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದ ಅಗತ್ಯ ಪ್ರಸ್ತಾವನೆಗಳನ್ನು ತಕ್ಷಣ ಸಿದ್ಧಪಡಿಸಿ, ಸಚಿವ ಸಂಪುಟದ ಮುಂದೆ ಮಂಡಿಸಲು ಬೇಕಾದ ಸಚಿವ ಸಂಪುಟ ಟಿಪ್ಪಣಿಗಳನ್ನು ರೂಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕರಾವಳಿ ಭಾಗದ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳನ್ನು…

Read More

ದ.ಕ. ಜಿಲ್ಲಾ ಮುಂಡಾಲ ಮಹಾಸಭಾ ಪದಗ್ರಹಣ ಸಮಾರಂಭ ಹಾಗೂ ಸ್ನೇಹ ಸಂಗಮ ಸೆ.6ರಂದು … !

ಮಂಗಳೂರು: ಮುಂಡಾಲ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಮುಂಡಾಲ ಸಮುದಾಯದ ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮವು ಸೆಪ್ಟೆಂಬರ್ 6ರಂದು ಭಾನುವಾರ ಬೆಳಗ್ಗೆ 11.30ಕ್ಕೆ ನಗರದ ಲಾಲ್‌ಬಾಗ್‌ನ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆಯಲಿದೆ. ಕಚೂರು ಶ್ರೀ ಮಾಲ್ತಿದೇವಿ ದೇವಸ್ಥಾನದ ಧರ್ಮದರ್ಶಿ ಹಾಗೂ ಶ್ರೀ ಮಾಲ್ತಿದೇವಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಗೋಕುಲ್‌ದಾಸ್ ಬಾರ್ಕೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಚಿತ್ರದುರ್ಗದ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಷಡಕ್ಷರಮುನಿ…

Read More

ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಜಿಲ್ಲಾಧಿಕಾರಿ ಕಚೇರಿ

ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮದ ಸವಿನೆನಪಿಗಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಭಾನುವಾರ ರಾತ್ರಿ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಿತು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ. ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ…

Read More

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮಾದರಿ ನಡೆ…..!

ಮಂಗಳೂರು:ಸಮಾಜದಲ್ಲಿ ವಿಭಿನ್ನವಾಗಿ ಕಾಣುವವರೊಂದಿಗೆ ಸಹೋದರತ್ವ ಹಾಗೂ ಸಮಾನತೆಯ ಸಂದೇಶ ಸಾರುವ ಉದ್ದೇಶದಿಂದ ರಾಜಕೇಸರಿ ಸೇವಾ ಟ್ರಸ್ಟ್‌ (ರಿ.), ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ನವಸಹಜ ಸಮುದಾಯ ಸಂಘಟನೆ (ರಿ.) ದಕ್ಷಿಣ ಕನ್ನಡ ಜಿಲ್ಲೆ ಇವರ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರೊಂದಿಗೆ ವಿಶಿಷ್ಟ ರೀತಿಯಲ್ಲಿ ರಕ್ಷಾಬಂಧನ ಸಂಭ್ರಮವನ್ನು ಆಚರಿಸಲಾಯಿತು. ಮಂಗಳೂರಿನ ಪೊಲೀಸ್ ಲೇನ್‌ನ ಶ್ರೀ ಮುನೀಶ್ವರ ಮಹಾಗಣಪತಿ ಕಲಾಮಂಟಪದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಪರಸ್ಪರ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದರು….

Read More

ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಡಾ. ಶ್ರೀನಿವಾಸ್ ವೇಲು

ಮಂಗಳೂರು: ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಭಿವೃದ್ಧಿಗಾಗಿ ದೊರೆಯುವ ವಿವಿಧ ಯೋಜನೆಗಳು, ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ರಾಜ್ಯ ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶ್ರೀನಿವಾಸ್ ವೇಲು ಹೇಳಿದ್ದಾರೆ. ಶನಿವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ಕುಂಬಾರ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಬಳಿಕ ಅವರು ಮಾತನಾಡುತ್ತಿದ್ದರು. ಕುಂಬಾರ ಸಮಾಜದ ಸಮಸ್ಯೆ ಮತ್ತು ಬೇಡಿಕೆಗಳನ್ನು ಹಂತ ಹಂತವಾಗಿ ಪರಿಹರಿಸುವ ನಿಟ್ಟಿನಲ್ಲಿ…

Read More

ಮಂಗಳೂರು ರೈಲ್ವೆ ವ್ಯವಸ್ಥೆ ಮೈಸೂರು ವಿಭಾಗಕ್ಕೆ: ಐವನ್ ಡಿ’ಸೋಜಾ ಸ್ವಾಗತ

ಮಂಗಳೂರು: ಕೇರಳದ ಪಾಲಕ್ಕಾಡ್ ವಿಭಾಗದಲ್ಲಿದ್ದ ಮಂಗಳೂರು ರೈಲ್ವೆ ವ್ಯವಸ್ಥೆಯನ್ನು ಕರ್ನಾಟಕದ ಮೈಸೂರು ವಿಭಾಗಕ್ಕೆ ಸೇರಿಸುವ ನಿರ್ಧಾರವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಸ್ವಾಗತಿಸಿದ್ದಾರೆ. ನಗರದ ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ರೈಲ್ವೆಯನ್ನು ಕರ್ನಾಟಕದ ವಿಭಾಗಕ್ಕೆ ಸೇರಿಸುವಂತೆ ಹಲವು ವರ್ಷಗಳಿಂದ ವಿವಿಧ ವೇದಿಕೆಗಳಲ್ಲಿ ಒತ್ತಾಯಿಸಲಾಗುತ್ತಿತ್ತು. ಹಿಂದೆ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿದ್ದ ಸಂದರ್ಭದಲ್ಲೂ ಈ ಬೇಡಿಕೆಯನ್ನು ಮುಂದಿಟ್ಟಿದ್ದೆ. ಇದೀಗ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದರು. ಮಂಗಳೂರು ಸೇರಿದಂತೆ ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ…

Read More

ಪುತ್ತೂರಿನ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಫಿಲೋನೆಕ್ಸ – 2026’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ)ಕಾಲೇಜು ಪುತ್ತೂರು ಇದರ ಆಶ್ರಯದಲ್ಲಿ ಆ 28 ರಂದು ನಡೆದ ‘ಫಿಲೋನೆಕ್ಸ – 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶಿಶಿರ್ ರೈ ಹಾಗೂ ಆಶ್ರಯ್ ಎ ಶೆಟ್ಟಿ ಪ್ರಥಮ ಸ್ಥಾನ ಹಾಗೂ ವಿಜ್ಞಾನ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸಿಯಾ ಸುಧೀರ್ ಹಾಗೂ…

Read More

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ‌ ದಿನ ಸರಕಾರಿ ರಜೆ ಘೋಷಣೆ ಮಾಡುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಸಿ ಎಂ ಅವರನ್ನು ಭೇಟಿ ಮಾಡಿದ ಶಾಸಕರು ದ ಕ ,ಉಡುಪಿ ಸೇರಿದಂತೆ ರಾಜ್ಯಾಧ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಆದರದಿಂದ ಆಚರಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತದೆ. ಈ ದಿನದಂದು ಸರಕಾರಿ ರಜಾ‌ದಿನ…

Read More
error: Content is protected !!