ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಐವನ್ ಡಿ’ಸೋಜಾ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆಗ್ರಹಿಸಿದರು. ನಗರದ ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿಯ ಸಾಧಕ-ಬಾಧಕಗಳ ಕುರಿತು ಸಮಗ್ರ ಚರ್ಚೆ ನಡೆಸಿದ ಬಳಿಕವೇ ತೀರ್ಮಾನ ಕೈಗೊಳ್ಳಬೇಕು. ಸ್ಥಳೀಯ ಜನರ ಅಭಿಪ್ರಾಯ, ಕೃಷಿ, ತೋಟಗಾರಿಕೆ, ಗ್ರಾಮೀಣ ವಸತಿ ಹಾಗೂ ಜೀವನೋಪಾಯವನ್ನು ಪರಿಗಣಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಬಾರದು ಎಂದರು. ಕರ್ನಾಟಕದ 10 ಜಿಲ್ಲೆಗಳ 33 ತಾಲೂಕುಗಳು…

Read More

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ: ಮುಖ್ಯ ನ್ಯಾಯಮೂರ್ತಿಗಳ ಭರವಸೆ

ಮಂಗಳೂರು:* ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ವಿಭು ಬಖ್ರು ಭರವಸೆ ನೀಡಿದ್ದಾರೆ ಎಂದು ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ. ಕರಾವಳಿ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲು…

Read More

ಆಗಸ್ಟ್ 31ರಂದು ‘ಪುತ್ತೂರು ಚಲೋ’ ಜನಜಾಗೃತಿ ಆಂದೋಲನ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಆಗಸ್ಟ್ 31ರಂದು ಪುತ್ತೂರು ಚಲೋ- ಜನಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಚಾರ ಪ್ರಸಾರ ಸಹ ಪ್ರಮುಖ್ ಪ್ರದೀಪ್ ಸರಿಪಲ್ಲ ತಿಳಿಸಿದ್ದಾರೆ. ಸ್ವಾಭಿಮಾನಿ ಹಿಂದೂ ಸಮಾಜದ ಜಾಗೃತಿಗಾಗಿ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಈ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು. ಶುಕ್ರವಾರ ನಗರದ ವಿಎಚ್ ಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ…

Read More

ಸುಮಾರು 08 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಎಲ್ ಪಿ ಸಿ ವಾರೆಂಟ್ ಆರೋಪಿತನ ಬಂಧನ

ಮಂಗಳೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ, ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2006ರಲ್ಲಿ ಮೊ.ನಂ. 166/2006, ಕಲಂ 379 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿತನು ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಿತ್ತು. ವಾರಂಟ್ ಜಾರಿಯಲ್ಲಿದ್ದ ಆರೋಪಿತ ಮುವಾಚ್ (45), ಮೊಹಮ್ಮದ್ ಬಾವಾ ಉಸ್ತಾದ್ ಅವರ ಪುತ್ರ, ಹಿಲೇರಿ ನಗರ, ಮುಕ್ಕಚೇರಿ,…

Read More

ಸಾನಿಧ್ಯ ವಸತಿ ಶಾಲೆಯಲ್ಲಿ ಈಜು ತರಬೇತಿ ಆರಂಭ……!

ಮಂಗಳೂರು:* ಜಲಚಿಕಿತ್ಸೆಯ (Aquatic Therapy) ಭಾಗವಾಗಿ ನಗರದ ಸಾನಿಧ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಈಜು ತರಬೇತಿಯನ್ನು ಪ್ರಾರಂಭಿಸಲಾಗಿದೆ. ತರಬೇತಿಯ ಅಂಗವಾಗಿ ಮಕ್ಕಳು ಈಜುಕೊಳದಲ್ಲಿ ತರಬೇತುದಾರರ ಮಾರ್ಗದರ್ಶನದಂತೆ ಉತ್ಸಾಹದಿಂದ ಈಜುವ ಮೂಲಕ ತರಬೇತಿಯಲ್ಲಿ ಸಕ್ರಿಯರಾದರು. ಮಕ್ಕಳ ದೈಹಿಕ ಚಟುವಟಿಕೆ ಹಾಗೂ ಜಲಚಿಕಿತ್ಸೆಗೆ ಪೂರಕವಾಗುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತುದಾರರಾದ ಜುವೆಲ್ ಹಾಗೂ ಲಕ್ಷ್ಮೀ ಅವರು ಮಕ್ಕಳಿಗೆ ಈಜು ತರಬೇತಿ ನೀಡಿದರು. ಸೇಂಟ್ ಅಲೋಶಿಯಸ್ ಕಾಲೇಜಿನ ಈಜುಕೊಳದ ಮುಖ್ಯಸ್ಥ ನವೀನ್ ಅವರ ಸಹಕಾರದಿಂದ ತರಬೇತುದಾರರ ವ್ಯವಸ್ಥೆ ಮಾಡಲಾಗಿತ್ತು.

Read More

ಮಂಗಳೂರು ರೈಲ್ವೇ ನೈಋತ್ಯ ವಲಯಕ್ಕೆ ಸೇರ್ಪಡೆ: ಶೀಘ್ರವೇ ಸಂಭ್ರಮಾಚರಣೆ

ಮಂಗಳೂರು: ಮಂಗಳೂರು ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರ ಲಭ್ಯತೆ ಆಧರಿಸಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಸಚಿವ ವಿ. ಸೋಮಣ್ಣ, ಸಂಸದ ಕ್ಯಾ | ಬ್ರಿಜೇಶ್ ಚೌಟ ಹಾಗೂ ದ….

Read More

ಕೋಳಿ ಸಾಕಾಣಿಕೆ ರೈತರ ಬೇಡಿಕೆ ಈಡೇರಿಸಿ: ಸರ್ಕಾರಕ್ಕೆ ಒಕ್ಕೂಟ ಒತ್ತಾಯ

ಮಂಗಳೂರು:ಕೋಳಿ ಬೆಳೆಗಾರರಿಗೆ ಪ್ರತಿ ಕೆ.ಜಿ.ಗೆ ಕನಿಷ್ಠ ₹10 ನೀಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಖಾಸಗಿ ಇಂಟಿಗ್ರೇಶನ್ ಕಂಪನಿಗಳು ಜಾರಿಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೋಳಿ ಬೆಳೆಗಾರರ ಅಭಿವೃದ್ಧಿ ಒಕ್ಕೂಟ ಆಗ್ರಹಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಪ್ರಭಾಕರ ಎಸ್. ಸುವರ್ಣ, ರಾಜ್ಯದಲ್ಲಿ ಸುಮಾರು 25 ಸಾವಿರ ರೈತರು ಒಪ್ಪಂದ ಪದ್ಧತಿಯಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ. ಆದರೆ ಕಂಪನಿಗಳ ಏಕಸ್ವಾಮ್ಯದಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದರು. ಸರ್ಕಾರದ…

Read More

ಮಂಗಳೂರಿನ ಶಾರದಾ ಆಯುರ್ವೇದ ಆಸ್ಪತ್ರೆಗೆ NABH ಮಾನ್ಯತೆ

ಮಂಗಳೂರು: ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯು ಮಂಗಳೂರಿನ ಪ್ರಥಮ 100 ಹಾಸಿಗೆಗಳ ಬಹುವಿಶೇಷತೆ ಹೊಂದಿರುವ ಆಯುರ್ವೇದ ಆಸ್ಪತ್ರೆಯಾಗಿದ್ದು, ಮೇ 15, 2026ರಿಂದ NABH ಮಾನ್ಯತೆ ಪಡೆದಿದೆ ಎಂದು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಸಂದೀಪ್ ಬೇಕಲ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಾಧುನಿಕ ಮೂಲಸೌಕರ್ಯದೊಂದಿಗೆ ಶುದ್ಧ ಆಯುರ್ವೇದ ಚಿಕಿತ್ಸೆಯನ್ನು ಒದಗಿಸುತ್ತಿರುವ ಆಸ್ಪತ್ರೆಗೆ NABH ಮಾನ್ಯತೆ ದೊರೆತಿರುವುದು ಮಹತ್ವದ ಸಾಧನೆ ಎಂದರು. NABH ಮಾನದಂಡಗಳಿಗೆ ಅನುಗುಣವಾಗಿ ರೋಗಿಗಳ ಸುರಕ್ಷತೆ ಮತ್ತು ಗುಣಮಟ್ಟದ ಆರೈಕೆ,…

Read More

ನಾರಾಯಣ ಗುರುಗಳ ಜಯಂತಿ: ಬಿಜೆಪಿ ವತಿಯಿಂದ ಪುಷ್ಪ ನಮನ

ಬಿಜೆಪಿ ಮಂಗಳೂರು ನಗರ ದಕ್ಷಿಣದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಇಂತಹ ಮಹಾನ್ ಸಂತರ ಗೌರವಾರ್ಥ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಮಂಗಳೂರಿನ ಹೃದಯ ಭಾಗದಲ್ಲಿರುವ ಈ ವೃತ್ತಕ್ಕೆ ನಾರಾಯಣಗುರು ವೃತ್ತ ಎಂದು…

Read More

ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ. ಸಹಸ್ರಾರು ಮಾತೆಯರು ಭಾಗಿ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶುಕ್ರವಾರ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಶ್ರದ್ಧಾಭಕ್ತಿ ಪೂರ್ವಕವಾಗಿ ನೆರವೇರಿತು. ಕ್ಷೇತ್ರದಲ್ಲಿ ಬೆಳಗ್ಗೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ, ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದ ವೇದಿಕೆಯಲ್ಲಿ ಕಲಶ ಪ್ರತಿಷ್ಠಾಪನೆ, ಲಲಿತಾ ಸಹಸ್ರನಾಮ ಪಠಣ, ಭಜನೆ, ಶ್ರೀ ವರಮಹಾಲಕ್ಷ್ಮೀ ಪೂಜೆ, ಮಧ್ಯಾಹ್ನ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ನೆರವೇರಿತು. ಸಹಸ್ರಾರು ಮಾತೆಯರು ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡರು. ಮಾತೆಯರಿಗೆ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಬಾಗಿನ ನೀಡಲಾಯಿತು.ಸುಮಾರು 10 ಸಾವಿರ…

Read More
error: Content is protected !!