ನಿಸರ್ಗ ಗೌರವ ಪುರಸ್ಕಾರಕ್ಕೆ ಪ್ರೊ. ಬಿ.ಎ. ವಿವೇಕ ರೈ ಆಯ್ಕೆ

ಮಂಗಳೂರು: ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಬಿ. ದಾಮೋದರ ನಿಸರ್ಗ ಅವರ ಸ್ಮರಣಾರ್ಥ ಸ್ಥಾಪಿಸಲಾಗಿರುವ ದಾಮೋದರ ನಿಸರ್ಗ ತುಳು ಪ್ರತಿಷ್ಠಾನ ವತಿಯಿಂದ ನೀಡಲಾಗುವ 2026ನೇ ಸಾಲಿನ ನಿಸರ್ಗ ಗೌರವ ಪುರಸ್ಕಾರಕ್ಕೆ ತುಳು ಸಾಹಿತ್ಯದ ಹಿರಿಯ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಪತ್ರಿಕಾಭವನದಲ್ಲಿ ಮಾಹಿತಿ ನೀಡಿದ ಪ್ರಶಸ್ತಿ ಸಮಿತಿ ಸದಸ್ಯ ವರ್ಕಾಡಿ ರವಿ ಅಲೆವೂರಾಯ, ಪುರಸ್ಕಾರ ಪ್ರದಾನ ಸಮಾರಂಭವು…

Read More

ಗುರುಗಳ ತತ್ವ–ಆದರ್ಶ ಪಾಲನೆಯೇ ಶ್ರೇಷ್ಠ ಗುರುದಕ್ಷಿಣೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ–ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ಶ್ರೇಷ್ಠ ಗುರುದಕ್ಷಿಣೆಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಅವರು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದಲ್ಲಿ ಸಂಘರ್ಷಕ್ಕೆ ಅವಕಾಶ ನೀಡದೆ ಅಹಿಂಸೆಯ ಮಾರ್ಗದ ಮೂಲಕ ಪರಿವರ್ತನೆ ತಂದ ಮಹಾನ್ ಸಮಾಜ ಸುಧಾರಕರಲ್ಲಿ ನಾರಾಯಣ ಗುರುಗಳು ಪ್ರಮುಖರಾಗಿದ್ದಾರೆ. ಅವರ ಆದರ್ಶಗಳನ್ನು…

Read More

ಸೆ. 4ರಂದು ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ; 44 ವಿಭಾಗಗಳಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಹಾಗೂ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ ಸೆಪ್ಟೆಂಬರ್ 4ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 44 ವರ್ಷಗಳಿಂದ ನಡೆಯುತ್ತಿರುವ ಈ ಉತ್ಸವದಲ್ಲಿ ಈ ಬಾರಿ…

Read More

ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾರದ ಆರೋಪ

ಮಂಗಳೂರು: ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಈ ಕುರಿತು ಸಹಕಾರಿ ನಿಬಂಧಕರಿಗೆ ದೂರು ಸಲ್ಲಿಸಲಾಗಿದೆ ಎಂದು ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪವನ್ ರಾಜ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಸಂಘದ ಕಾರ್ಯಕಾರಿ ಸಮಿತಿ ಸದಸ್ಯನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಹಿಂದಿನ ಮಹಾಸಭೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಸುರೇಶ್ ಭಟ್ ನಗರ ಹಾಗೂ ಸಂಘದ ಅಧ್ಯಕ್ಷರಾಗಿ ಉಮೇಶ್ ಬೆಂಜನಪದವು ಸರ್ವಾನುಮತದಿಂದ ಆಯ್ಕೆಯಾಗಿದ್ದರು. ಆದರೆ…

Read More

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದಕ್ಷಿಣ ಕನ್ನಡ ಉಸ್ತುವಾರಿ.ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯಾದ್ಯಂತ ‘ಭಾರತ್ ಜೋಡೋ ಸಂಘ’ಗಳ ಸ್ಥಾಪನೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಗಳ ರಚನೆ ಮತ್ತು ಸಮನ್ವಯದ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರಿಗೆ ವಹಿಸಲಾಗಿದೆ. ಪಂಚಾಯತ್ ರಾಜ್ ಸಂಘಟನೆಯಲ್ಲಿ ಅವರು ತೋರಿದ ಸಕ್ರಿಯ ನಾಯಕತ್ವ, ಸಂಘಟನಾ ಸಾಮರ್ಥ್ಯ, ನಿರಂತರ ಜನಸಂಪರ್ಕ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವಲ್ಲಿ ವಹಿಸಿದ ಪ್ರಮುಖ ಪಾತ್ರವನ್ನು ಪರಿಗಣಿಸಿ…

Read More

ಮಂಗಳೂರು: ಗಾಳಿ-ಮಳೆಗೆ ಗ್ಯಾರೇಜ್ ಮೇಲೆ ಬೃಹತ್ ಮರ, ವಿದ್ಯುತ್ ಕಂಬ; 3 ವಾಹನ ಜಖಂ

ಮಂಗಳೂರು: ನಗರದಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಕೊಟ್ಟಾರ ಚೌಕಿ ಸಮೀಪ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ಗ್ಯಾರೇಜ್ ಮೇಲೆ ಮುರಿದು ಬಿದ್ದ ಪರಿಣಾಮ ಮೂರು ಚತುಷ್ಚಕ್ರ ವಾಹನಗಳು ಜಖಂಗೊಂಡಿದ್ದು, ಕಟ್ಟಡಕ್ಕೂ ಅಪಾರ ಹಾನಿಯಾಗಿದೆ. ಮುಂಜಾನೆ ಸುಮಾರು 2.15ರ ವೇಳೆಗೆ ಬೀಸಿದ ಬಿರುಗಾಳಿಯಿಂದ ಈ ಘಟನೆ ಸಂಭವಿಸಿದೆ. ಗ್ಯಾರೇಜ್‌ನ ಮೇಲ್ಭಾಗದಲ್ಲಿದ್ದ ವಾಚ್‌ಮನ್ ಕೊಠಡಿಯೂ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಮರ ಹಾಗೂ ವಿದ್ಯುತ್ ಕಂಬ ಬಿದ್ದ ಪರಿಣಾಮ ಗ್ಯಾರೇಜ್‌ನಲ್ಲಿದ್ದ ಮೂರು…

Read More

ಮಂಗಳೂರಿನಲ್ಲಿ ಮೊದಲ ‘ಝೈಸ್ ವಿಷನ್ ಸೆಂಟರ್’ ಆರಂಭ

ಮಂಗಳೂರು: ಪ್ರೀಮಿಯಂ ಲೈಫ್‌ಸ್ಟೈಲ್ ಐವೇರ್ ಬ್ರ್ಯಾಂಡ್ ಕ್ಯಾವೋಲಿನ್, ಝೈಸ್ ಇಂಡಿಯಾ ಸಹಭಾಗಿತ್ವದಲ್ಲಿ ನಗರದ ಫೋರಂ ಫಿಜಾ ಮಾಲ್‌ನಲ್ಲಿ ಮಂಗಳೂರಿನ ಮೊದಲ ‘ಝೈಸ್ ವಿಷನ್ ಸೆಂಟರ್’ ಆರಂಭಿಸಿದೆ. ಕ್ಯಾವೋಲಿನ್‌ನ ಪ್ರೀಮಿಯಂ ಐವೇರ್ ಪರಿಣತಿಯನ್ನು ಝೈಸ್‌ನ ನಿಖರ ಆಪ್ಟಿಕ್ಸ್ ಹಾಗೂ ದೃಷ್ಟಿ ಆರೈಕೆ ತಂತ್ರಜ್ಞಾನದೊಂದಿಗೆ ಸಂಯೋಜಿಸಿ ಗ್ರಾಹಕರಿಗೆ ಸಮಗ್ರ ಮತ್ತು ವೈಯಕ್ತಿಕಗೊಳಿಸಿದ ದೃಷ್ಟಿ ಆರೈಕೆ ಅನುಭವ ನೀಡುವುದು ಕೇಂದ್ರದ ಉದ್ದೇಶವಾಗಿದೆ ಎಂದು ಕ್ಯಾವೋಲಿನ್ ವ್ಯವಸ್ಥಾಪಕ ನಿರ್ದೇಶಕ ನಿಖಿಲ್ ನಂದೀಶ ಉದ್ಘಾಟನಾ ಸಮಾರಂಭದಲ್ಲಿ ತಿಳಿಸಿದರು. ಫಿಜಾ ಬೈ ನೆಕ್ಸಸ್ ಮಾಲ್‌ನ ಮೊದಲ…

Read More

ವಿಶೇಷ ಚೇತನ ಮಕ್ಕಳಿಂದ ಪತ್ರಕರ್ತರಿಗೆ ರಕ್ಷಾ ಬಂಧನ

ಮಂಗಳೂರು: ನಗರದ ಶಕ್ತಿನಗರದಲ್ಲಿರುವ ಸಾನಿಧ್ಯ ವಿಶೇಷ ಮಕ್ಕಳ ಶಾಲೆ ಮತ್ತು ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಪತ್ರಕರ್ತರಿಗೆ ರಕ್ಷಾ ಬಂಧನ ಕಟ್ಟಿ ಶುಭಾಶಯ ಕೋರಿದ ಅಪರೂಪದ ಕಾರ್ಯಕ್ರಮ ನಗರದ ಪತ್ರಿಕಾಭವನದಲ್ಲಿ ನಡೆಯಿತು. ರಕ್ಷಾ ಬಂಧನದ ಅಂಗವಾಗಿ ಸಾನಿಧ್ಯ ಸಂಸ್ಥೆಯ ವಿಶೇಷ ಚೇತನ ಮಕ್ಕಳು ಮಂಗಳೂರು ನಗರದ ಪತ್ರಕರ್ತರನ್ನು ಭೇಟಿ ಮಾಡಿ, ಆತ್ಮೀಯವಾಗಿ ರಾಖಿ ಕಟ್ಟಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಮಕ್ಕಳ ಮುಗ್ಧ ನಗು, ಪ್ರೀತಿ ಹಾಗೂ ಆತ್ಮೀಯತೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ವಿಶೇಷ ಚೇತನ ಮಕ್ಕಳೊಂದಿಗೆ ಕೆಲ…

Read More

ಮಣಿಪಾಲ ಆರೋಗ್ಯ ಕಾರ್ಡ್ 2026: ನೋಂದಣಿಗೆ ಆ.31 ಕೊನೆಯ ದಿನ

ಮಂಗಳೂರು:* ಮಣಿಪಾಲ ಆರೋಗ್ಯ ಕಾರ್ಡ್ 2026ಕ್ಕೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್ ಕರೆ ನೀಡಿದರು. ನಗರದ ಓಷನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 26 ವರ್ಷಗಳಿಂದ ಮಣಿಪಾಲ ಆರೋಗ್ಯ ಕಾರ್ಡ್ ಮೂಲಕ ಜನರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಪ್ರಸ್ತುತ ಕರ್ನಾಟಕ ಮತ್ತು ಕೇರಳದಲ್ಲಿ ಸುಮಾರು 6.5 ಲಕ್ಷ ಸದಸ್ಯರು…

Read More

ಅಂತರ್‌ರಾಜ್ಯ ಕಳ್ಳತನ ಗ್ಯಾಂಗ್ ಪುತ್ತೂರು ಪೊಲೀಸರ ಬಲೆಗೆ; ನಾಲ್ವರು ಅರೆಸ್ಟ್

ಅಂತರ್ ರಾಜ್ಯ ಕಳ್ಳತನ ಪ್ರಕರಣದ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ದಿನಾಂಕ:19-06-2026 ರಿಂದ ದಿನಾಂಕ:20-06-2026 ರ ಅವಧಿಯಲ್ಲಿ ನಡೆದ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ: 94/2026, 303(2)BNS ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ರ ಮಾರ್ಗದರ್ಶನದಲ್ಲಿ ಪುತ್ತೂರು…

Read More
error: Content is protected !!