ಜನೌಷಧಿ ಕೇಂದ್ರಗಳಲ್ಲಿ ಮೂಲ ಉದ್ದೇಶವೇ ಮರೆತಿದೆ: ಯು.ಟಿ. ಖಾದರ್
ಮಂಗಳೂರು: ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಔಷಧ ಒದಗಿಸುವ ಉದ್ದೇಶದಿಂದ ಆರಂಭಿಸಲಾದ ಜನೌಷಧಿ ಕೇಂದ್ರಗಳ ಕಾರ್ಯವೈಖರಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಸಮಾಧಾನ ವ್ಯಕ್ತಪಡಿಸಿದರು . ಈ ಯೋಜನೆ ಆರಂಭಿಸುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿದ್ದಾಗಲೇ, ಔಷಧಗಳ ಗುಣಮಟ್ಟ ಹಾಗೂ ಪೂರೈಕೆ ವ್ಯವಸ್ಥೆಯಲ್ಲಿ ಬದಲಾವಣೆ ಅಗತ್ಯವಿದೆ ಎಂದು ತಾನು ಸಲಹೆ ನೀಡಿದೆ . ಜನೌಷಧಿ ಕೇಂದ್ರಗಳಿಗೆ ಔಷಧ ಪೂರೈಕೆ ಮಾಡುವಾಗ ಕಡಿಮೆ ದರ ನೀಡುವ ಎಲ್-1 ಬಿಡ್‌ದಾರರಿಗೆ ಆದ್ಯತೆ ನೀಡಲಾಗುತ್ತದೆ. ಆದರೆ…
