ಕೂಳೂರು ರಸ್ತೆ ಅವ್ಯವಸ್ಥೆ: ಮೂಲಸೌಕರ್ಯಕ್ಕೆ ಆಗ್ರಹ, ಹೋರಾಟದ ಎಚ್ಚರಿಕೆ

ಮಂಗಳೂರು: ನಗರದ ಪ್ರಮುಖ ಪ್ರವೇಶ ದ್ವಾರವಾಗಿರುವ ಕೂಳೂರು ರಸ್ತೆಯ ಅವ್ಯವಸ್ಥೆ ಹಾಗೂ ಮೂಲಸೌಕರ್ಯಗಳ ಕೊರತೆ ವಿರುದ್ಧ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಸೇಷನ್‌ (ರಿ), ಬೆಂಗಳೂರು ದಕ್ಷಿಣ ಕನ್ನಡ ವಿಭಾಗದ ಜಿಲ್ಲಾಧ್ಯಕ್ಷ ಸಂದೀಪ್ ಸಾಲಿಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಳೂರು ರಸ್ತೆ ಮಂಗಳೂರು ನಗರಕ್ಕೆ ಪ್ರವೇಶಿಸುವ ಪ್ರಮುಖ ಮಾರ್ಗವಾಗಿದ್ದು, ವಿಮಾನ ನಿಲ್ದಾಣ, ಹಾರ್ಬರ್ ಹಾಗೂ ಎ.ಜೆ. ಆಸ್ಪತ್ರೆ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಾಗಿದೆ. ಇಂತಹ ಮಹತ್ವದ ರಸ್ತೆಯ ಪರಿಸ್ಥಿತಿ ಮಾತ್ರ ತೀವ್ರ ಹದಗೆಟ್ಟಿರುವುದು ಬೇಸರದ…

Read More

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ ರಜೆ ಘೋಷಿಸುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರಿಗೆ ಮನವಿ ಸಲ್ಲಿಸಿದ್ದಾರೆ.ಪ್ರವಾದಿ ಮುಹಮ್ಮದ್ ಮುಸ್ತಫಾ (ಸ) ರವರ ಜನ್ಮದಿನ “ ಈದ್ ಮಿಲಾದ್” ಕಾರ್ಯಕ್ರಮ ಪ್ರಯುಕ್ತ ಸರಕಾರಿ ಸಾರ್ವತ್ರಿಕ ರಜೆ ಆಗಸ್ಟ್ 26ರಂದು ನಿಗದಿಯಾಗಿರುತ್ತದೆ. ಆದರೆ, ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರ ದರ್ಶನದಲ್ಲಿ ವ್ಯತ್ಯಾಸದ ಕಾರಣ ಆಗಸ್ಟ್ 25ರಂದು ಮೀಲಾದ್ ನಡೆಯಲಿದೆ…

Read More

ಆಗಸ್ಟ್ 19 ಬಾಲಭವನ್ ಶಾಲೆಯಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ

ರಾಷ್ಟ್ರೀಯ ರೈತರ ದಿನದಂದು ಕಾಸರಗೋಡು ಬಾಲಭವನ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯಿನಿ ಹಾಗೂ ಹಿರಿಯ ಕೃಷಿಕರೂ ಆದ ದಿವಂಗತ ಶ್ರೀ ಸದಾಶಿವ ಶಾನ್ ಬಾಗ್ ಅವರ ಧರ್ಮ ಪತ್ನಿಯವರಾದ ಮೊಹಿನಿ ರಾವ್ ‌ಅವರನ್ನು ಶಾಲೆಯ ಪರವಾಗಿ ಮುಖ್ಯೋಪಾಧ್ಯಾಯಿನಿ ಲೀಲಾವತಿ ನಾಯರ್ ಶಾಲು, ಫಲಕ ನೀಡಿ ಗೌರವಿಸಿದರು. ಗೌರವಾರ್ಪಣೆ ಸ್ವೀಕರಿಸಿ ಮಕ್ಕಳಿಗೆ ಶುಭ ನುಡಿಯನ್ನಾಡಿದರು. ಈ ಸಮಾರಂಭದಲ್ಲಿ ಎಜುಕೇಷನ್ ಅಕಾಡಮಿಕ್ ಎಡ್ ವೈಸರ್ ಡಾl ಕೆ.ಎನ್. ವೆಂಕಟ್ರಮಣ ಹೊಳ್ಳ, ಪಿಟಿಎ ಉಪಾಧ್ಯಕ್ಷೆ…

Read More

ಲಕ್ಷ್ಮಣ್ ಶೆಟ್ಟಿ ನಿಧನ: ಜಿಲ್ಲಾ ಕಾಂಗ್ರೆಸ್‌ನಿಂದ ತೀವ್ರ ಸಂತಾಪ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ, ಮಂಗಳೂರು ನಗರ ಬ್ಲಾಕ್ ವಕ್ತಾರ ಲಕ್ಷ್ಮಣ್ ಶೆಟ್ಟಿ (52) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಲಕ್ಷ್ಮಣ್ ಶೆಟ್ಟಿ ಅವರ ಅಕಾಲಿಕ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಆಘಾತಕ್ಕೊಳಗಾಗಿದೆ. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ಸಂಘಟನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲ ವರ್ಗದ ಜನರೊಂದಿಗೆ ಆತ್ಮೀಯವಾಗಿ ಬೆರೆತು ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ…

Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಪ್ರಕರಣ–1 👉 ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ 👉 ₹1.36 ಲಕ್ಷ ಮೌಲ್ಯದ 13.69 ಗ್ರಾಂ MDMA ವಶ ದಿನಾಂಕ 18-08-2026 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ವೆಲ್ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ, ಸುಮಾರು 30–35 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ಹೊಂದಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಮಂಗಳೂರು ಪೂರ್ವ ಪೊಲೀಸ್…

Read More

ಮಂಗಳೂರಿನಲ್ಲಿ ಇ-ರಿಕ್ಷಾ ಚಾಲಕರ ಹೋರಾಟ ತೀವ್ರ: ಪರ್ಮಿಟ್, ವಲಯ ನಿಯಮ, ಪಾರ್ಕಿಂಗ್ ಸಮಸ್ಯೆ ವಿರುದ್ಧ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

ಮಂಗಳೂರು: ಇ-ರಿಕ್ಷಾ ಚಾಲಕರು ಎದುರಿಸುತ್ತಿರುವ ಪರ್ಮಿಟ್ ಗೊಂದಲ, ವಲಯ ನಿಯಮ, ಪಾರ್ಕಿಂಗ್ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ತೀವ್ರಗೊಳಿಸಲು ಚಾಲಕರ ಸಂಘಟನೆ ನಿರ್ಧರಿಸಿದೆ ಎಂದು ಟೀಮ್ ಗ್ರೀನ್ ಸಿಟಿಯ ಮಾಜಿ ಅಧ್ಯಕ್ಷ ಪ್ರಜೇಶ್ ತಿಳಿಸಿದ್ದಾರೆ. ಪರ್ಮಿಟ್ ವಿಚಾರದಲ್ಲಿ ಚಾಲಕರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂಬುದು ಪ್ರಮುಖ ಆರೋಪವಾಗಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಅಗತ್ಯ ನಿಯಮಗಳು ಹಾಗೂ ದಾಖಲೆಗಳನ್ನು ಪೂರ್ಣಗೊಳಿಸಿದ್ದರೂ, ಸುಮಾರು ಶೇ.99ರಷ್ಟು ಚಾಲಕರಿಗೆ ಗ್ರಾಮಾಂತರ ಪರ್ಮಿಟ್ ನೀಡಲಾಗುತ್ತಿದೆ. ಕೆಲವೇ ಚಾಲಕರಿಗೆ ಮಾತ್ರ ನಗರ ಪರ್ಮಿಟ್ ನೀಡಲಾಗುತ್ತಿದ್ದು,…

Read More

ಮಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳವು: 40ಕ್ಕೂ ಅಧಿಕ ಪ್ರಕರಣಗಳ ಆರೋಪಿ ಬಂಧನ

ದ್ವಿ ಚಕ್ರ ವಾಹನ ಕಳವು ಮಾಡಿದ್ದ ಆರೋಪಿತನನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತ ವ್ಯಕ್ತಿಯನ್ನು ಮಹಮ್ಮದ್ ಫೈಝಲ್ @ ತೋಟ ಫೈಜಲ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್ ಎಂಬಲ್ಲಿ ವಾಸದ ಮನೆಯ ಎದುರು ಪಾರ್ಕ್ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಬಗ್ಗೆ ಮೊನ್ನೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ತನಿಖೆ ಕೈಗೊಂಡು ದ್ವಿ ಚಕ್ರ ವಾಹನವನ್ನು ಕಳ್ಳತನ ಮಾಡಿದ್ದ ಮಹಮ್ಮದ್ ಫೈಜಲ್ @ ತೋಟ…

Read More

ವಿಟ್ಲದಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಆರೋಪಿ ನ್ಯಾಯಾಂಗ ಬಂಧನಕ್ಕೆ

ಬಾಲಕನಿಗೆ ಲೈಂಗಿಕ ಕಿರುಕುಳ ‌ನೀಡಿದ ಅರೋಪದಡಿಯಲ್ಲಿ 53 ವರ್ಷದ ಪುರುಷನನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಮೊನ್ನೆ ಅಪ್ರಾಪ್ತ ಪ್ರಾಯದ ಸಂತ್ರಸ್ಥ ಬಾಲಕನು ವಿಟ್ಲ‌ ಠಾಣಾ ವ್ಯಾಪ್ತಿಯ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬಂದು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಬಂದಿದ್ದ. ಆಗ ಅಪರಿಚಿತ ವ್ಯಕ್ರಿಯೊಬ್ರು ಬಾಲಕನ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿರುವಾಗ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ ಹಾಗೂ ಬಾಲಕನು ತನ್ನ ಮನೆಗೆ ತೆರಳಿದಾಗ ಅಪರಿಚಿತ ವ್ಯಕ್ತಿ ಬಾಲಕನ‌ ಮನೆಗೆ ಬಂದು ಲೈಂಗಿಕ ಕಿರುಕುಳ…

Read More

ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪಡಿಸಿ:- ಶಾಸಕ ಕಾಮತ್ ಆಗ್ರಹ

ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಸುತ್ತಮುತ್ತಲಿನ ಸಾರ್ವಜನಿಕರು ಮೊಬೈಲ್ ನೆಟ್ವರ್ಕ್ ಸಿಗದೇ ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡಿದೆಯೇ ಹೊರತು ಇಚ್ಛಾಶಕ್ತಿ ತೋರಿಲ್ಲ. ಕೂಡಲೇ ಕಾಲಮಿತಿ ನಿಗದಿಪಡಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಮತ್ತೊಮ್ಮೆ ಆಗ್ರಹಿಸಿದರು. ಸಾರ್ವಜನಿಕರ ಬೇಡಿಕೆಯಂತೆ ಕಳೆದ ಒಂದೂವರೆ ವರ್ಷದಿಂದ ಸಂಬಂಧಪಟ್ಟವರಲ್ಲಿ ಹಲವು ಬಾರಿ ಮನವಿ ಮಾಡಲಾಗಿದೆ. ಪ್ರತಿಭಟನೆಗಳಾಗಿವೆ. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಗೃಹ ಸಚಿವರಿಗೆ ಮಾತ್ರವಲ್ಲದೇ,…

Read More

ಆ.21ರಂದು ಮಂಗಳೂರಿನಲ್ಲಿ ಮೆಗಾ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಸಮಾವೇಶ

ಮಂಗಳೂರು: ಪ್ರೊಡಕ್ಟಿವಿಟಿ ಕೌನ್ಸಿಲ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ ಆಗಸ್ಟ್ 21ರಂದು ಮಂಗಳೂರಿನ ಓಲ್ಡ್ ಪೋರ್ಟ್ ರಸ್ತೆಯ ತಾಜ್ ವಿವಾಂತ ಹೋಟೆಲ್ ಎದುರಿನ ರೆಡ್ ಕ್ರಾಸ್ ಪ್ರೇರಣಾ ಸಭಾಂಗಣದಲ್ಲಿ ಒಂದು ದಿನದ ಮೆಗಾ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಸಮಾವೇಶ ಆಯೋಜಿಸಲಾಗಿದೆ ಎಂದು ನಿರ್ದೇಶಕ ಎಸ್.ಎಸ್. ನಾಯಕ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಉದ್ಯಮಿಗಳು ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದ್ದು, 400ಕ್ಕೂ ಹೆಚ್ಚು ಉದ್ಯಮಿಗಳು…

Read More
error: Content is protected !!