ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವದ ೭೯ ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ನಗರದ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ೭೯ ನೇ ವರ್ಷದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಂಡಿತು . ಐದು ದಿನಗಳ ಪರ್ಯಂತ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು ವಿವಿಧ ಧಾರ್ಮಿಕ , ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿರುವುದು . ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಮಾನ್ಯ ಸಂಘಚಾಲಕ್ ಡಾ . ಸತೀಶ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು . ರಾಷ್ಟ್ರೀಯ…

Read More

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು, ಆ. 13: ಪ್ರಿಸನ್ ಮಿನಿಸ್ಟ್ರಿ ಇಂಡಿಯಾ (ಪಿಎಂಐ), ಮಂಗಳೂರು ಘಟಕದ ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಮಂಗಳೂರು ಸಹಯೋಗದಲ್ಲಿ ನಗರದ ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಕೈದಿಗಳಿಗಾಗಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಜೈಲು ಅಧೀಕ್ಷಕ ಶರಣಬಸಪ್ಪ ಅವರು, ಜೈಲನ್ನು ಕೇವಲ ಶಿಕ್ಷೆಯ ಸ್ಥಳವಾಗಿ ನೋಡದೆ ‘ತಿದ್ದುಪಡಿ ಕೇಂದ್ರ’ವಾಗಿ ಪರಿಗಣಿಸಬೇಕು. ತಮ್ಮ ತಪ್ಪುಗಳನ್ನು ಅರಿತುಕೊಂಡು ಜೀವನವನ್ನು ಸುಧಾರಿಸಿಕೊಂಡು ಸಮಾಜಕ್ಕೆ ಜವಾಬ್ದಾರಿಯುತ ವ್ಯಕ್ತಿಗಳಾಗಿ ಮರಳಲು ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ…

Read More

ಪೇಸ್ ನಾಲೆಡ್ಜ್ ಸಿಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು, ಆಗಸ್ಟ್ 15: ಪಿ.ಎ. ಎಜುಕೇಶನ್ ಟ್ರಸ್ಟ್‌ನ ವಿವಿಧ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಗಳೂರಿನ ಪೇಸ್ ನಾಲೆಡ್ಜ್ ಸಿಟಿ ಆವರಣದಲ್ಲಿ ಶನಿವಾರ ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಿ.ಎ. ಎಜುಕೇಶನ್ ಟ್ರಸ್ಟ್ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಇಕ್ಬಾಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಡಾ. ಇಕ್ಬಾಲ್, ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿ, ದೇಶದ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ನಿಷ್ಠೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಬೇಕು…

Read More

ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ; ಯು.ಟಿ. ಖಾದರ್ ಅವರಿಂದ ಧ್ವಜಾರೋಹಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಪರೇಡ್ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ, ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆಯನ್ನು ಸದಾ ಕಾಪಾಡುವ ಸಂಕಲ್ಪ ಮಾಡಬೇಕು. ವಿವಿಧ ಭಾಷೆ,…

Read More

ಜಮೀರ್ ಹೇಳಿಕೆಯನ್ನು ರಾಜಕೀಯಗೊಳಿಸುವುದು ಸರಿಯಲ್ಲ: ಯು.ಟಿ. ಖಾದರ್

ಮಂಗಳೂರು:ಸಚಿವ ಜಮೀರ್ ಅಹಮದ್ ಖಾನ್ ಅವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುವ ವಿಚಾರವನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಸ್ ಖಾತೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಇಂದು 78ನೇ ವರ್ಷದ ಸ್ವಾತಂತ್ರ್ಯೋತ್ಸವ. ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಪ್ರೀತಿ, ವಿಶ್ವಾಸ, ಸೌಹಾರ್ದತೆ ಮತ್ತು ಒಗ್ಗಟ್ಟಿನಿಂದ…

Read More

ಜಮೀರ್ ಅಹಮದ್ ಖಾನ್ ಹೇಳಿಕೆ ಖಂಡನೀಯ: ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯದ ಕೊರತೆಯಿಂದಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆ ಸಂವಿಧಾನಕ್ಕೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟದ ಗೌರವಕ್ಕೆ ಅಪಚಾರವಾಗಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟುವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಚಿವರೊಬ್ಬರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳಲು ಸಮಯವಿಲ್ಲ ಎಂದು ಹೇಳಿರುವುದು ಬಾಲಿಶ ಹಾಗೂ ಹಾಸ್ಯಾಸ್ಪದ…

Read More

ಆದಾಯ ಮಿತಿ ತೆರವುಗೊಳಿಸಿ ಎಲ್ಲ ದಿವ್ಯಾಂಗರಿಗೂ ಪಿಂಚಣಿ ನೀಡಲು ಆಗ್ರಹ

ಮಂಗಳೂರು: ಆದಾಯ ಮಿತಿಯ ನೆಪವೊಡ್ಡಿ ಕಳೆದ ಏಪ್ರಿಲ್‌ನಿಂದ ದಿವ್ಯಾಂಗರ ಪಿಂಚಣಿಯನ್ನು ರಾಜ್ಯ ಸರಕಾರ ಸ್ಥಗಿತಗೊಳಿಸಿರುವುದರಿಂದ ದಿವ್ಯಾಂಗರು ಹಾಗೂ ಅವರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ದಿವ್ಯಾಂಗರನ್ನು ಎಪಿಎಲ್‌ ಅಥವಾ ಬಿಪಿಎಲ್‌ ಎಂದು ಪರಿಗಣಿಸದೆ, ಅವರ ದಿವ್ಯಾಂಗತೆಯನ್ನೇ ಮಾನದಂಡವಾಗಿರಿಸಿಕೊಂಡು ಎಲ್ಲ ದಿವ್ಯಾಂಗರಿಗೂ ತಕ್ಷಣ ಪಿಂಚಣಿ ನೀಡಬೇಕು ಎಂದು ವಿಶೇಷ ಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ‘ಸಕ್ಷಮ’ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಗ್ರಹಿಸಿದೆ. ರಾಜ್ಯದಲ್ಲಿ ಎಪಿಎಲ್‌ ಕಾರ್ಡ್‌ ಹೊಂದಿರುವ ಸಾವಿರಾರು ದಿವ್ಯಾಂಗರಿಗೆ ಅರ್ಹವಾಗಿ ದೊರಕಬೇಕಿದ್ದ ಸರಕಾರದ ಪಿಂಚಣಿ…

Read More

ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್‌;

ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಕ್ಯಾ. ಚೌಟ ಮಂಗಳೂರು: ಸಚಿವ ಸ್ಥಾನ ಹಾಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ಅನುಭವಿಸಲು ಸದಾ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನಿರಾಕರಿಸಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ, ದೇಶಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿರುವ ಬಹುದೊಡ್ಡಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಖೇದ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದಂದು ಧ್ವಜಾರೋಹಣದ…

Read More

ದೇಶದಲ್ಲೇ ಪ್ರಪ್ರಥಮವಾಗಿ ಪತ್ರಿಕಾ ಓದುಗರಿಗಾಗಿ “ನಮ್ಮ ಪತ್ರಿಕೆ -ನಮ್ಮ ಹೆಮ್ಮೆ” ಘೋಷಣೆಯೊಂದಿಗೆ ಸ್ವಯಂ ಪ್ರೇರಣೆಯಿಂದ ರಾಜ್ಯಮಟ್ಟದಲ್ಲಿ “ಮನೆಗೊಂದು ಶಾಲೆಗೊಂದು ಕನ್ನಡ ಪತ್ರಿಕಾ ಅಭಿಯಾನ “

ಮನೆಗೊಂದು ಕನ್ನಡ ಪತ್ರಿಕೆ -ಮನೆಗೆರಡು ವಿವಿಧ ಭಾಷಾ ಪತ್ರಿಕೆ ಉಳಿಸಿ ಬೆಳೆಸುವ ಪತ್ರಿಕಾ ಪ್ರತಿಜ್ಞೆಮಂಗಳೂರಿನಲ್ಲಿ 1843 ಜುಲೈ 1ರಂದು ಮಂಗಳೂರು ಸಮಾಚಾರ ಎಂಬ ಕನ್ನಡದ ಪ್ರಥಮ ಪತ್ರಿಕೆ ಮುದ್ರಣಗೊಂಡಿತ್ತು. ಕನ್ನಡ ಪತ್ರಿಕೋದ್ಯಮದ 183 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ 2026 ಜುಲೈ 1 ರಿಂದ 2027 ಜುಲೈ 1ರ ತನಕ ದೇಶದಲ್ಲೇ ಪ್ರಪ್ರಥಮವಾಗಿ ಪತ್ರಿಕಾ ಓದುಗರಿಗಾಗಿ “ನಮ್ಮ ಪತ್ರಿಕೆ ನಮ್ಮ ಹೆಮ್ಮೆ” ಘೋಷಣೆಯೊಂದಿಗೆ “ಮನೆಗೊಂದು ಶಾಲೆಗೊಂದು ಕನ್ನಡ ಪತ್ರಿಕಾ ಅಭಿಯಾನ”ವನ್ನು ಪ್ರಾರಂಭಿಸಲಾಗಿದೆ. ಕೇರಳ ರಾಜ್ಯ ಕನ್ನಡ ಭಾಷಾ…

Read More

ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು,ಸಕಾರಾತ್ಮಕ ಬದಲಾವಣೆಯ ಹರಿಕಾರರಾಗಬೇಕು: ಡಾ. ಮಾಲಿನಿ ಹೆಬ್ಬಾರ್

ಮಂಗಳೂರು, ಆಗಸ್ಟ್ 14: ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶಗಳನ್ನು ಗುರುತಿಸಿ ಸದುಪಯೋಗಪಡಿಸಿಕೊಳ್ಳುವುದು, ವಿವೇಚನೆಯಿಂದ ಸೂಕ್ತ ಆಯ್ಕೆಗಳನ್ನು ಮಾಡಿಕೊಳ್ಳುವುದು ಹಾಗೂ ಆ ಆಯ್ಕೆಗಳ ಮೂಲಕ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಯನ್ನು ರೂಪಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ಪ್ರಾಂಶುಪಾಲರಾದ ಡಾ. ಮಾಲಿನಿ ಎನ್. ಹೆಬ್ಬಾರ್ ಹೇಳಿದರು.ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರು ಇದರ ಸ್ಟೂಡೆಂಟ್ ವೆಲ್ಫೇರ್ ಕೌನ್ಸಿಲ್ ಹಾಗೂ ಲಲಿತ ಕಲಾ ಸಂಘದ ವತಿಯಿಂದ ನಗರದ ಟಿ.ವಿ. ರಾಮನ್ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಟೂಡೆಂಟ್…

Read More
error: Content is protected !!