ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸಿಬ್ಬಂದಿಯ ಜೀವ ಉಳಿಸಿದ 5ನೇ ತರಗತಿ ಬಾಲಕ
ಮಂಗಳೂರು:ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ತಕ್ಷಣ ಪರಿಸ್ಥಿತಿಯನ್ನು ಗಮನಿಸಿದ್ದಾನೆ. ತಡಮಾಡದೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಮನ್ವಿತ್, ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಿದ್ದಾನೆ. ಬಾಲಕನ…
