ಕರಾವಳಿ ಅಭಿವೃದ್ಧಿಗೆ ಮಹತ್ವದ ತೀರ್ಮಾನ ನಿರೀಕ್ಷೆ: ಯು.ಟಿ. ಖಾದರ್
ಮಂಗಳೂರು: ತುಳುನಾಡಿನ ಬಹುದಿನಗಳ ಬೇಡಿಕೆಯಂತೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು. ಮಂಗಳೂರಿನ ಪ್ರಜಾ ಸೌಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಸಮಸ್ಯೆಗಳಿಗೆ ಬೆಂಗಳೂರಿನಿಂದಲೇ ಪರಿಹಾರ ಕಂಡುಕೊಳ್ಳುವ ಬದಲು ಸಚಿವ ಸಂಪುಟವೇ ಮಂಗಳೂರಿನಲ್ಲಿ ಸಭೆ…
