ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರನ್ನು ಭೇಟಿಯಾದ ಕಾಂಗ್ರೆಸ್ ನಾಯಕರ ನಿಯೋಗ
ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಹಕರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಪೊರೇಟರ್‌ಗಳ ನಿಯೋಗವು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಶ್ರೀ ರಾಹುಲ್ ರತ್ನಂ ಪಾಂಡೆ, ಐಎಎಸ್ ಅವರನ್ನು ಭೇಟಿಯಾಗಿ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿತು ಸಭೆಯಲ್ಲಿ ನಗರದ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಎಲ್‌ಇಡಿ ಬೀದಿ ದೀಪಗಳ ಸಮಸ್ಯೆ, ಗ್ರಾಸ್ ಕಟಿಂಗ್, ಕಸ ವಿಲೇವಾರಿ ಸೇರಿದಂತೆ…
