ಮಂಗಳೂರಿನಲ್ಲಿ ದಾರುಣ ಘಟನೆ: ಗಲ್ಫ್‌ನಿಂದ ಬಂದ ಯುವಕ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ

ಮಂಗಳೂರು: ಸಹೋದರಿ ಆತ್ಮಹತ್ಯೆ ಮಾಡಿಕೊಂಡ ದುರಂತ ಮಾಸುವ ಮುನ್ನವೇ, ಆಕೆಯ ಸಹೋದರನೂ ಮಂಗಳೂರಿನ ಲಾಡ್ಜ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಕೇರಳದ ಬೇಕಲ್ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತ ಯುವಕ. ಕಳೆದ ಜೂನ್‌ನಲ್ಲಿ ಅರ್ಜುನ್ ಅವರ ಸಹೋದರಿ ಐಜಾ ಆರ್. ಮಹೇಶ್ ಅವರು ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಮರು ಪರೀಕ್ಷೆಯ ಸಿದ್ಧತೆಯಲ್ಲಿದ್ದ ಐಜಾ ಮಾನಸಿಕ ಒತ್ತಡದಿಂದ ಈ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿತ್ತು. ತಂಗಿಯ ಸಾವಿನ…

Read More

ಮಾನವತೆ ಸಂದೇಶ ಸಾರುವ ಸಂತ ರವಿ ದಾಸರ ಚಿಂತನೆ

ಸಂತ ರವಿದಾಸರ 650ನೇ ಜನ್ಮ ಜಯಂತಿ ಅಂಗವಾಗಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘವು (KRMSS), ದಕ್ಷಿಣ ಕನ್ನಡ ಜಿಲ್ಲೆ ಘಟಕ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬೈಕಂಪಾಡಿ (ಮುಸ್ಲಿಂ), ಅಂಗಾರ್ಗುಂಡಿ ಕ್ಲಸ್ಟರ್ ಸಂಯುಕ್ತ ಆಶ್ರಯದಲ್ಲಿ 2026 ಆಗಸ್ಟ್ ಹತ್ತರಂದು ಬೆಳಿಗ್ಗೆ 11 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು. ಭಾರತೀಯ ಸಂತ ಪರಂಪರೆ ಉಪನ್ಯಾಸಮಾಲೆಯ 12ನೇ ಕಾರ್ಯಕ್ರಮವು ಯಶಸ್ವಿಯಾಗಿ ಆಯೋಜಿಸಲಾಯಿತು. ಮುನ್ನುಡಿಯಾಗಿ ಪ್ರೊಫೆಸರ್ ನಾಗರತ್ನ ರಾವ್ ಅವರು ಭಾರತೀಯ ಸಂತ ಪರಂಪರೆಯಲ್ಲಿ…

Read More

ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ; ಒಂದು ತಿಂಗಳಲ್ಲಿ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ಜಿಲ್ಲೆಯ ದಲಿತರ ಭೂ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಬಳಗ ಎಚ್ಚರಿಸಿದೆ. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ದಿವಂಗತ ಎಂ. ದೇವದಾಸ್ ಅವರ ಸ್ಮರಣಾರ್ಥ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಸೋಮಶೇಖರ್ ಮಾತನಾಡಿ, ದೇವದಾಸ್ ಅವರು ಡಿಸಿ ಮನ್ನಾ ಭೂಮಿಯನ್ನು…

Read More

ಮಂಗಳೂರಿನಲ್ಲಿ ‘ಆಟಿಡೊಂಜಿ ದಿನ’: ತುಳುನಾಡಿನ ಸಂಸ್ಕೃತಿ, ಆಹಾರ ಪದ್ಧತಿಯ ಸ್ಮರಣೆ

ಮಂಗಳೂರು : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್‌ (ರಿ.) ಮಂಗಳಾದೇವಿ ವಲಯ ಸಮಿತಿಯ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ. ಮಂಗಳೂರು, ಆ.9: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್‌ (ರಿ.) ಮಂಗಳಾದೇವಿ ವಲಯ ಸಮಿತಿಯ ವತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಭಾನುವಾರ ಮಂಗಳಾದೇವಿ ದೇವಸ್ಥಾನದ ಬಳಿಯ ಕಾಂತಿ ಚರ್ಚ್ ಹಾಲ್‌ನಲ್ಲಿ ನಡೆಯಿತು. ವೇದಿಕೆಯಲ್ಲಿದ್ದ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಪ್ರಶಾಂತ್ ಕುಮಾರ್ ಕಲ್ಲೂರು, ಆಟಿ ತಿಂಗಳು ಕರಾವಳಿಯ ಜನಜೀವನದಲ್ಲಿ ಕಷ್ಟದ ಕಾಲವಾಗಿದ್ದರೂ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಆರೋಗ್ಯದ…

Read More

ಆ.13ರಿಂದ ಮಂಗಳೂರಿನಲ್ಲಿ ‘ಡೋಲ್ಚೆ ಎಸ್ಥೆಟಿಕಾ’ ಕಾರ್ಯಾರಂಭ

ಮಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆ.13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥಾಪಕ ಡಾ. ಜೋಸೆಫ್ ಥಾಮಸ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಗಳು ಎದುರಾಗುವ ಮುನ್ನವೇ ಅವುಗಳನ್ನು ತಡೆಗಟ್ಟುವ ಮೂಲಕ ಜನರು ಆರೋಗ್ಯಕರ ಹಾಗೂ ಆತ್ಮವಿಶ್ವಾಸದ ಜೀವನ ನಡೆಸಲು ನೆರವಾಗುವುದು ಸಂಸ್ಥೆಯ ಉದ್ದೇಶ ಎಂದರು. ಕೇಂದ್ರದಲ್ಲಿ AI ಆಧಾರಿತ ಆರೋಗ್ಯ ಮೌಲ್ಯಮಾಪನ, ಡಿಜಿಟಲ್ ಆರೋಗ್ಯ ದಾಖಲೆಗಳು, ಅತ್ಯಾಧುನಿಕ ರೋಗನಿರ್ಣಯ ಹಾಗೂ ಅಗತ್ಯವಿದ್ದಲ್ಲಿ ಜಿನೋಮಿಕ್ ವೈದ್ಯಕೀಯ…

Read More

SDTU ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಸಾಮಾಜಿಕ ಮುಖಂಡ ಫಿಲಿಪ್ ಹೆನ್ರಿ ಡಿಸೋಜ ಆಯ್ಕೆ

ಬಂಟ್ವಾಳ : ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ಪುತ್ತೂರು, ಬಂಟ್ವಾಳ, ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕುಗಳನ್ನು ಒಳಗೊಂಡ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಕಾರ್ಮಿಕ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಪಿಲಿಪ್ ಹೆನ್ರಿ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಹನೀಫ್ ಟಿ ಎಸ್ ಆಯ್ಕೆಯಾಗಿದ್ದಾರೆ. ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿದ್ದ ಸಲೀಂ ಗುರುವಾಯನಕೆರೆ ಯವರು ಇತ್ತೀಚೆಗೆ SDTU ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಆಯ್ಕೆ ಯಾದ ಬಳಿಕ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಆಯ್ಕೆ ಪ್ರಕ್ರಿಯೆ…

Read More

60ಕ್ಕೂ ಅಧಿಕ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಗೌರವ.ಕದ್ರಿ ಬಂಜನ್ ಆದಿ ಮೂಲಸ್ಥಾನದಿಂದ ವಿಶೇಷ ಸನ್ಮಾನ; ದೇಶದ ಭದ್ರತೆಯಲ್ಲಿ ಸೈನಿಕರ ಸೇವೆ ಶ್ಲಾಘನೀಯ: ರಾಧಾಕೃಷ್ಣ ಬಂಜನ್

ಮಂಗಳೂರು: ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ 60ಕ್ಕೂ ಅಧಿಕ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ ಸನ್ಮಾನ ಕಾರ್ಯಕ್ರಮ ಭಾನುವಾರ ಕದ್ರಿ ಬಂಜನ್ ಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ಹಿಲ್‌ಸೈಡ್ ಆರ್ಕಿಟೆಕ್ಟ್‌ನ ವ್ಯವಸ್ಥಾಪಕ ನಿರ್ದೇಶಕ ರಾಧಾಕೃಷ್ಣ ಬಂಜನ್, ದೇಶದ ಭದ್ರತೆಗೆ ಪಾಕಿಸ್ತಾನ, ಚೀನಾ ಸೇರಿದಂತೆ ಬಾಹ್ಯ ಶಕ್ತಿಗಳ ಜತೆಗೆ ದೇಶದೊಳಗಿನ ದೇಶದ್ರೋಹಿಗಳಿಂದಲೂ ಸವಾಲು ಎದುರಾಗುತ್ತಿದೆ. ಇಂತಹ ಸವಾಲುಗಳನ್ನು…

Read More

ಮಂಗಳೂರಿನಲ್ಲಿ ಆ.13ರಿಂದ ‘ಡೋಲ್ಚೆ ಎಸ್ಥೆಟಿಕಾ’ ಕಾರ್ಯಾರಂಭ.ಮುನ್ನೆಚ್ಚರಿಕಾ ಆರೋಗ್ಯ ಸೇವೆಗೆ ಆದ್ಯತೆ: ಡಾ. ಜೋಸೆಫ್ ಥಾಮಸ್

ಮಂಗಳೂರು:ಆರೋಗ್ಯ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯು ಕರ್ನಾಟಕದಲ್ಲಿ ತನ್ನ ಮೊದಲ ಶಾಖೆಯನ್ನು ಮಂಗಳೂರಿನಲ್ಲಿ ಆರಂಭಿಸಲಿದೆ. ತಜ್ಞ ವೈದ್ಯರ ನೇತೃತ್ವದಲ್ಲಿ ಮುನ್ನೆಚ್ಚರಿಕಾ ಆರೋಗ್ಯ ಆರೈಕೆ ಸೇವೆಗಳನ್ನು ಒದಗಿಸುವ ಈ ಕೇಂದ್ರವು ಆಗಸ್ಟ್ 13ರಂದು ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಡಾ. ಜೋಸೆಫ್ ಥಾಮಸ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜನರು ಹೆಚ್ಚು ಆರೋಗ್ಯಕರವಾಗಿ, ಹೆಚ್ಚು ವರ್ಷಗಳ ಕಾಲ ಹಾಗೂ ಆತ್ಮವಿಶ್ವಾಸದಿಂದ ಬದುಕಲು ನೆರವಾಗುವುದು ಸಂಸ್ಥೆಯ ಧ್ಯೇಯ. ಆರೋಗ್ಯ ಸಮಸ್ಯೆಗಳು…

Read More

ವಿಮಾನ ನಿಲ್ದಾಣದ ಸಮಸ್ಯೆ ಖಂಡಿಸಿ ಬಜ್ಪೆ ಪಂಚಾಯತ್‌ನ 19 ಕೌನ್ಸಿಲರ್‌ಗಳ ಪ್ರತಿಭಟನೆ

ಮಂಗಳೂರು: ಬಜ್ಪೆಯಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದೆ ಎಂದು ಆರೋಪಿಸಿ ಬಜ್ಪೆ ಪಟ್ಟಣ ಪಂಚಾಯತ್ ಎಲ್ಲಾ 19 ಕೌನ್ಸಿಲರ್ ಗಳು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಮಾನ ನಿಲ್ದಾಣ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಹೊರಹಾಕಿ ಆಕ್ರೋಶ ಹೊರಹಾಕಿದರು. ಇಲ್ಲಿನ ರಾಜಕಾಲುವೆಗಳಲ್ಲಿ ಹೂಳು ತುಂಬಿದ್ದು, ತಡೆಗೋಡೆ ಕುಸಿದು ಮಳೆಕಾಲದ ವೇಳೆ ಹಲವು ಸಮಸ್ಯೆಗಳು ಉಂಟಾಗುತ್ತಿವೆ. ಇದರಿಂದ ಮರವೂರು ಹಾಗೂ ಕೆಂಜಾರು ಭಾಗದಲ್ಲಿ ಕೂಡ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಮಾನ…

Read More

ಸಮಾನ ಮನಸ್ಕರನ್ನು ಒಗ್ಗೂಡಿಸಿ ಹೊಸ ರಾಜಕೀಯ ಪಕ್ಷ: ಚೇತನ್ ಅಹಿಂಸಾ

ಮಂಗಳೂರು:ರಾಜ್ಯದಲ್ಲಿ ಹೊಸ ರಾಜಕೀಯ ಚಳವಳಿಯ ಅಗತ್ಯವಿದ್ದು, ಸಮಾನ ಮನಸ್ಕರನ್ನು ಒಗ್ಗೂಡಿಸಿ ಮುಂದಿನ ಜನವರಿಯೊಳಗೆ ಹೊಸ ಪ್ರಾದೇಶಿಕ ರಾಜಕೀಯ ಪಕ್ಷವನ್ನು ಕಟ್ಟಲಾಗುವುದು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಸ ನಡೆಸಿ ಸಮಾನ ಮನಸ್ಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಕ್ಷೇತ್ರಗಳ ಜನರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಹಿಂದುತ್ವ ಸೇರಿದಂತೆ ವಿವಿಧ ಸಿದ್ಧಾಂತ ಹಾಗೂ ಅಜೆಂಡಾಗಳನ್ನು ಮುಂದಿಟ್ಟುಕೊಂಡು ಹಲವು ಸಂಘಟನೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಇಂತಹ…

Read More
error: Content is protected !!