ಕರಾವಳಿಗೆ ವಂದೇ ಭಾರತ್ ರೈಲು: ಆಗಸ್ಟ್ 11ರಿಂದ ಟ್ರಯಲ್ ರನ್‌ಗೆ ರೈಲ್ವೆ ಸಜ್ಜು

ಮಂಗಳೂರು : ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್ 11 ರಿಂದ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರವನ್ನು (Trial Run) ನಡೆಸಲು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ರೈಲ್ವೆ ಸಹಾಯಕ ಸಚಿವ ವಿ. ಸೋಮಣ್ಣ ಅವರು ಜೂನ್ ತಿಂಗಳೊಳಗಾಗಿ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸುವುದಾಗಿ ಈ ಹಿಂದೆ ತಿಳಿಸಿದ್ದರು. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ…

Read More

ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಬಿಲ್ಲವಾಸ್ ದುಬಾಯಿ ಮತ್ತು ನಾರ್ಥರ್ನ್ ಎಮಿರೇಟ್ಸ್ ಚಾರಿಟೇಬಲ್ ಟ್ರಸ್ಟ್ (BDNE Trust), ಮಂಗಳೂರು, 2001 ನೇ ಸಾಲಿನಿಂದ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ಪ್ರತೀ ವರ್ಷವೂ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸಹಕರಿಸುತ್ತಿದೆ. ಈ ವರ್ಷದ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮವು ದಿನಾಂಕ 09.08.2026 ರಂದು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಬೆಳಿಗ್ಗೆ ಘಂಟೆ 10 ಕ್ಕೆ ನೆರವೇರಲಿರುವುದು. ಈ ಕಾರ್ಯಕ್ರಮದಲ್ಲಿ ಶ್ರೀ ಜೈರಾಜ್ ಎಚ್ ಸೋಮಸುಂದರಂ, ಅಧ್ಯಕ್ಷರು, ಶ್ರೀ ಗೋಕರ್ಣನಾಥ…

Read More

ರಾಮಕ್ಷತ್ರಿಯ ಸಮಾಜದ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ; ಆಗಸ್ಟ್‌ 20ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಮಂಗಳೂರು, ಆ.6: ದಕ್ಷಿಣ ಕನ್ನಡ ಜಿಲ್ಲಾ ರಾಮಕ್ಷತ್ರಿಯ ಸಂಘಗಳ ಒಕ್ಕೂಟ (ರಿ.) ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ರಾಮಕ್ಷತ್ರಿಯ ಸಮಾಜದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಗಸ್ಟ್‌ 30ರಂದು ಆಯೋಜಿಸಲಾಗಿದೆ. ಮಂಗಳೂರಿನ ಬಾಳಂಭಟ್‌ನ ಶ್ರೀ ರಾಧಾಕೃಷ್ಣ ಹಾಲ್ನಲ್ಲಿ ಆಗಸ್ಟ್‌ 30ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಉನ್ನತ ಸ್ನಾತಕೋತ್ತರ…

Read More

ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಹು ಬೇಡಿಕೆಯ ಎಂ.ಬಿ.ಎ. (ಅಂತಾರಾಷ್ಟ್ರೀಯ ವ್ಯವಹಾರ) ಸಂಧ್ಯಾ ಕೋರ್ಸ್‌ಗೆ ಪ್ರವೇಶಾತಿ ಆರಂಭ

ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜಾದ ವಿಶ್ವವಿದ್ಯಾಲಯ ಕಾಲೇಜು ಮಂಗಳೂರಿನ ಎಂ.ಬಿ.ಎ. (ಅಂತಾರಾಷ್ಟ್ರೀಯ ವ್ಯವಹಾರ) ವಿಭಾಗದಲ್ಲಿ 2026–27ನೇ ಸಾಲಿನ ಸಂಧ್ಯಾ (Evening Programme) ಕೋರ್ಸ್‌ಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಉದ್ಯೋಗದಲ್ಲಿರುವ ವೃತ್ತಿಪರರು ಹಾಗೂ ಉನ್ನತ ಶಿಕ್ಷಣ ಮುಂದುವರಿಸಲು ಬಯಸುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕೋರ್ಸ್ ರೂಪಿಸಲಾಗಿದ್ದು, “ಕಲಿಯುತ್ತಲೇ ಸಂಪಾದಿಸಿ” (Learn While You Earn) ಪರಿಕಲ್ಪನೆಯಡಿ ನಿಯಮಿತ ಸಂಜೆ ತರಗತಿಗಳನ್ನು ನಡೆಸಲಾಗುತ್ತದೆ. ಜಾಗತಿಕ ವ್ಯಾಪಾರ, ಅಂತರರಾಷ್ಟ್ರೀಯ ವ್ಯವಹಾರ ಹಾಗೂ ಸಮಕಾಲೀನ ವ್ಯವಹಾರ ತಂತ್ರಗಳ ಮೇಲೆ ಕೇಂದ್ರೀಕೃತ ಪಠ್ಯಕ್ರಮವನ್ನು ಹೊಂದಿದೆ….

Read More

ಆಗಸ್ಟ್‌ 9ರಂದು ಕುಲಾಲ್ ಸಮಾಜದ ನಿವೃತ್ತ ವೀರ ಯೋಧರು, ವೀರ ನಾರಿಯರಿಗೆ ಸನ್ಮಾನ ಹಾಗೂ ‘ಆಟಿದ ವಿಶೇಷ ಕೂಟ’ : ಡಾ. ಯತೀಶ್ ಕುಮಾರ್

ಮಂಗಳೂರು : ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ಆಶ್ರಯದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕುಲಾಲ್ ಸಮಾಜದ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಗಸ್ಟ್‌ 9ರಂದು ಬೆಳಿಗ್ಗೆ 11.30ಕ್ಕೆ ಕದ್ರಿ ಬಂಜನ್ ಚಾವಡಿಯಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಘಟಕ, ಪ್ರೊ. ಹಾಗೂ ಎನ್‌ಸಿಸಿ (ನೇವಲ್ ವಿಂಗ್) ಲೆಫ್ಟಿನೆಂಟ್ ಕಮಾಂಡರ್ ಡಾ. ಯತೀಶ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ಅಗಸ್ಟ್‌ 9ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) 10ನೇ ವಾರ್ಷಿಕೋತ್ಸವ

ಮಂಗಳೂರು, ಆಗಸ್ಟ್‌ 6: ಕಳೆದ ಹತ್ತು ವರ್ಷಗಳಿಂದ ರಾಜ್ಯಾದ್ಯಂತ ಅಗತ್ಯವಿರುವ ರೋಗಿಗಳಿಗೆ ರಕ್ತ ಪೂರೈಕೆ ಹಾಗೂ ರಕ್ತದಾನ ಜಾಗೃತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಸಂಸ್ಥೆಯ 10ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಆಗಸ್ಟ್‌ 9ರಂದು ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಹತ್ತನೇ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಮುಸ್ತಫಾ ದೆಮ್ಮೆಲೆ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30 ಗಂಟೆಗೆ ಮಂಗಳೂರು…

Read More

ಪಿ.ಎ. ಕಾಲೇಜ್ ಆಫ್ ಫಾರ್ಮಸಿ ‘ಎ’ ಗ್ರೇಡ್ QCI ಮಾನ್ಯತೆ ಪಡೆದು ಕರ್ನಾಟಕದಲ್ಲಿ 6ನೇ ಸ್ಥಾನ ಗಳಿಸಿದೆ

ಮಂಗಳೂರು ಸಮೀಪದ ನಡುಪದವಿನ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಗುಣಮಟ್ಟದ ಶಿಕ್ಷಣ ಹಾಗೂ ಉನ್ನತ ಶೈಕ್ಷಣಿಕ ಮಾನದಂಡಗಳನ್ನು ಕಾಯ್ದುಕೊಳ್ಳುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸುವಂತೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (QCI) ಮಾನ್ಯತೆಯಲ್ಲಿ ‘ಎ’ ಗ್ರೇಡ್ ಅನ್ನು ಪಡೆದುಕೊಂಡಿದೆ. ಕಾಲೇಜಿನಲ್ಲಿ ಪ್ರಸ್ತುತ ಡಿ.ಫಾರ್ಮ್, ಬಿ.ಫಾರ್ಮ್, ಎಂ.ಫಾರ್ಮ್ ಹಾಗೂ ಫಾರ್ಮ್.ಡಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದ್ದು, ಔಷಧ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಸಮಗ್ರ ಶಿಕ್ಷಣವನ್ನು ನೀಡುತ್ತಿದೆ.ಈ ಪ್ರತಿಷ್ಠಿತ ಮಾನ್ಯತೆಯೊಂದಿಗೆ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಕರ್ನಾಟಕ ರಾಜ್ಯದಲ್ಲಿ 6ನೇ…

Read More

ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತಕ್ಕೆ; ಪಾಣೆಮಂಗಳೂರು ಪ್ಲಾಂಟ್ ತೆರವು, ಜನರಲ್ಲಿ ಆತಂಕ ಬೇಡ: ಕೆಎನ್‌ಆರ್‌ಸಿಎಲ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ ಸೇತುವೆ ಸಮೀಪ ಲೀಸ್ ಆಧಾರದಲ್ಲಿ ಬಳಸುತ್ತಿದ್ದ ಖಾಸಗಿ ಜಾಗವನ್ನು ತೆರವುಗೊಳಿಸಿದೆ. ಇದರಿಂದ ಸಾರ್ವಜನಿಕರಲ್ಲಿ ಕಾಮಗಾರಿ ಅರ್ಧದಲ್ಲೇ ನಿಂತಿದೆಯೇ ಎಂಬ ಆತಂಕ ವ್ಯಕ್ತವಾಗಿದ್ದರೂ, ಅಂತಹ ಯಾವುದೇ ಭಯಕ್ಕೆ ಅವಕಾಶ ಇಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ. ಪಾಣೆಮಂಗಳೂರು ಪ್ಲಾಂಟ್‌ನಲ್ಲಿ ಇರಿಸಲಾಗಿದ್ದ ಬಹುತೇಕ ಯಂತ್ರೋಪಕರಣಗಳನ್ನು ಸ್ಥಳಾಂತರಿಸಲಾಗಿದ್ದು, ಕಾಮಗಾರಿಯ ಸುಮಾರು 95 ಶೇಕಡಾ ಪೂರ್ಣಗೊಂಡಿರುವುದರಿಂದ ಅಗತ್ಯವಿಲ್ಲದ ಯಂತ್ರಗಳನ್ನು ಹಿಂತೆಗೆದುಕೊಳ್ಳಲಾಗಿದೆ….

Read More

ಎಕ್ಕೂರಿನ ಡ್ರೈನೇಜ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಶಾಸಕ ವೇದವ್ಯಾಸ ಕಾಮತ್ ಸೂಚನೆ

ನಗರದ ಎಕ್ಕೂರು ಅಯ್ಯಪ್ಪ ಭಜನಾ ಮಂದಿರ ಹಿಂದುಗಡೆ ಇರುವ ಕೆಲವು ಮನೆಗಳಿಗೆ ಡ್ರೈನೇಜ್ ನಿಂದಾಗಿ ತೀವ್ರ ತೊಂದರೆಯಾಗಿದ್ದು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಅಧಿಕಾರಿಗಳ ಹಾಗೂ ಸ್ಥಳೀಯರ ಸಭೆ ನಡೆಯಿತು. ಸ್ಥಳೀಯರ ಪರವಾಗಿ ಹಾಜರಿದ್ದ ಎಕ್ಕೂರು ನಿವಾಸಿ ತನುಜಾರವರು ಅಲ್ಲಿನ ಹತ್ತಾರು ಮನೆಗಳು ಡ್ರೈನೇಜ್ ನಿಂದಾಗಿ ಅನುಭವಿಸುತ್ತಿರುವ ತೊಂದರೆಯನ್ನು ವಿವರಿಸಿದರು. ಕೂಡಲೇ ಸ್ಪಂದಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ…

Read More

ಮಂಗಳೂರು–ಸೋಲಾಪುರ ರಾಷ್ಟ್ರೀಯ ಹೆದ್ದಾರಿ (NH-169) ಕಾಮಗಾರಿಯ ವೈಫಲ್ಯ : ಜನರ ಜೀವದೊಂದಿಗೆ ಚೆಲ್ಲಾಟ ಆಡುತ್ತಿರುವ ಹೆದ್ದಾರಿ ಪ್ರಾಧಿಕಾರ – SDPI ಖಂಡನೆ

ಮಂಗಳೂರು : ಮಂಗಳೂರು–ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ (NH-169) ವಾಮಂಜೂರು–ಕೆತ್ತಿಕಲ್ ಭಾಗದಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಗುಡ್ಡ ಕುಸಿತ, ಮಣ್ಣು ಜರಿತ ಹಾಗೂ ರಸ್ತೆ ಅಸುರಕ್ಷತೆಯ ಘಟನೆಗಳು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿವೆ. ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣ ವೆಚ್ಚ ಮಾಡಿ ನಿರ್ಮಿಸಿರುವ ಹೆದ್ದಾರಿ ಇಂದು ಸಾರ್ವಜನಿಕರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವುದು ಕಾಮಗಾರಿಯ ಗುಣಮಟ್ಟ ಮತ್ತು ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ. ಈ ಗಂಭೀರ ಪರಿಸ್ಥಿತಿಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ತೀವ್ರವಾಗಿ ಖಂಡಿಸುತ್ತದೆ. ಪ್ರತಿ ಮಳೆಗಾಲದಲ್ಲೂ…

Read More
error: Content is protected !!