ಮಳೆಯ ಹಾನಿ ಪ್ರದೇಶಗಳಿಗೆ ಸಚಿವ ಯು.ಟಿ. ಖಾದರ್ ಭೇಟಿ; ಪರಿಹಾರಕ್ಕೆ ಒತ್ತಾಯ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಆಗಸ್ಟ್ 1 ರಂದು ಸುರಿದ ಭಾರೀ ಮಳೆಗೆ ಹಲವೆಡೆ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ ಮತ್ತು ಮನೆಗಳು ಜಲಾವೃತಗೊಂಡು ವ್ಯಾಪಕ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಅವರು ಇಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾಯಿಲ ಭಾಗದಲ್ಲಿ ಸಂಪರ್ಕ ಕಡಿತಗೊಂಡಿರುವ ರಸ್ತೆಗಳು ಮತ್ತು ಗುಡ್ಡ ಕುಸಿತದ ಸಾಧ್ಯತೆ…
