ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಪರ್ಯಾಯ ಮಾರ್ಗ ಬಳಸಲು ಪೊಲೀಸ್ ಇಲಾಖೆ ಮನವಿ

ದಿನಾಂಕ: 18-09-2026 ರಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಸರಕಾರವು ಸಚಿವ ಸಂಪುಟ ಸಭೆಯನ್ನು ಮಂಗಳೂರು ನಗರದ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿರವರ ಕಛೇರಿಯಲ್ಲಿ (ಪ್ರಜಾಸೌಧ) ಹಮ್ಮಿಕೊಂಡಿರುತ್ತದೆ. ದಿನಾಂಕ: 17-09-2026 ರಂದು ಸಂಜೆ ರಾಜ್ಯದ ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಂಪುಟ ದರ್ಜೆಯ ಸಚಿವರು ಬರುವವರಿದ್ದು, ದಿನಾಂಕ 18-09-2026 ರಂದು ಬೆಳಿಗ್ಗೆ ಮಂಗಳೂರು ನಗರದ ಮುಖ್ಯರಸ್ತೆಯ ಮುಖಾಂತರ ಜಿಲ್ಲಾಧಿಕಾರಿಗಳ (ಪ್ರಜಾಸೌಧ) ಕಛೇರಿಯಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಂಡು ಮಧ್ಯಾಹ್ನ ಮೇರಿಹಿಲ್‌ನಲ್ಲಿರುವ ಹೆಲಿಪ್ಯಾಡ್ ಮುಖಾಂತರ ಉಡುಪಿಗೆ ತೆರಳಿ ನಂತರ ಮಂಗಳೂರು ನಗರಕ್ಕೆ ವಾಪಸ್ಸಾಗಿ…

Read More

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಗ್ರಾಹಕ ವೇದಿಕೆ ಚಟುವಟಿಕೆಗಳಿಗೆ ಚಾಲನೆ. ಗ್ರಾಹಕ ಹಕ್ಕು–ಜವಾಬ್ದಾರಿಗಳ ಅರಿವು ಅಗತ್ಯ: ಎಡ್ವಿನ್ ನಜಾರಿಯಸ್ ಡಿ’ಮೆಲ್ಲೋ

ಪುತ್ತೂರು :ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದಲ್ಲಿ 2026–27ನೇ ಸಾಲಿನ ಗ್ರಾಹಕ ವೇದಿಕೆ (Consumer Forum) ಚಟುವಟಿಕೆಗಳಿಗೆ ಮಂಗಳವಾರ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತುವಿದ್ಯಾರ್ಥಿಗಳಲ್ಲಿ ಗ್ರಾಹಕರ ಹಕ್ಕುಗಳು, ಜವಾಬ್ದಾರಿಗಳು ಹಾಗೂ ಗ್ರಾಹಕ ದೂರುಗಳ ಪರಿಹಾರಕ್ಕೆ ಲಭ್ಯವಿರುವ ವ್ಯವಸ್ಥೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಂಗಳೂರಿನ ಗ್ರಾಹಕ ಮಾಹಿತಿ ಕೇಂದ್ರದ ಉಪಾಧ್ಯಕ್ಷ ಎಡ್ವಿನ್ ನಜಾರಿಯಸ್ ಡಿ’ಮೆಲ್ಲೋ ಮುಖ್ಯ ಅತಿಥಿಯಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಕಾರ್ಯದರ್ಶಿ ಡಿ.ಆರ್….

Read More

ಜಕ್ರಿಬೆಟ್ಟು ಬಂಟ್ವಾಳ ಸಾರ್ವಜನಿಕ ಶ್ರೀ ಗಣೇಶೋತ್ಸವದ 23ನೇ ವರ್ಷದ ಆಚರಣೆಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ

ಮಂಗಳೂರು: ಮಾಜಿ ಸಚಿವರಾದ ಬೆಳ್ಳಿಪಾಡಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯುವ ಜಕ್ರಿಬೆಟ್ಟು ಬಂಟ್ವಾಳ ಸಾರ್ವಜನಿಕ ಶ್ರೀ ಗಣೇಶೋತ್ಸವದ 23ನೇ ವರ್ಷದ ಆಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕ್ರಮದ ಆಯೋಜಕರನ್ನು ಅಭಿನಂದಿಸಿ, ಶ್ರೀ ಗಣೇಶ ದೇವರ ಆಶೀರ್ವಾದದೊಂದಿಗೆ 23ನೇ ವರ್ಷದ ಆಚರಣೆಯು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು. ಸಾಂಸ್ಕೃತಿಕ ಪರಂಪರೆ ಹಾಗೂ ಧಾರ್ಮಿಕ ಆಚರಣೆಗಳನ್ನು…

Read More

ಕರಾವಳಿಯಲ್ಲಿ ಸಂಪುಟ ಸಭೆ ನಡೆಸುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ ಶ್ರೀ.ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮಂಗಳೂರು: ಕರಾವಳಿ ಭಾಗದತ್ತ ವಿಶೇಷ ಗಮನ ಹರಿಸಿ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಇದು ಕರಾವಳಿಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುವ ಮಹತ್ವದ ಹೆಜ್ಜೆಯಾಗಿದೆ ಎಂದು ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅಭಿಪ್ರಾಯಪಟ್ಟರು. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಕರಾವಳಿ ಭಾಗಕ್ಕೆ ವಿಶೇಷ ಆದ್ಯತೆ ನೀಡುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ನೀಡಿತ್ತು. ಆದರೆ ಚುನಾವಣೆಯಲ್ಲಿ ಜಿಲ್ಲೆಯ ಜನತೆ ಆ…

Read More

ತುಳು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ; ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ನೀಡಲು ಒತ್ತಾಯ

ಮಂಗಳೂರು: ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ‘ತುಳು ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು. ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತುಳು ಪರಿಷತ್ ಮಂಗಳೂರು ಅಧ್ಯಕ್ಷ ಕೆ. ಶುಭೋದಯ ಆಳ್ವ ಆಗ್ರಹಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ತುಳು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಳೆದ ಏಳು ವರ್ಷಗಳಿಂದ ನಿರಂತರವಾಗಿ ಹೋರಾಟ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು…

Read More

ಕುತ್ತಾರು ಬೈಕ್–ಸ್ಕೂಟರ್ ಅಪಘಾತ : ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯ,ಕುಟುಂಬಸ್ಥರಿಂದ ಅಂಗಾಂಗ ದಾನಗೈಯಲು ನಿರ್ಧಾರ

ಉಳ್ಳಾಲ:ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದಿದ್ದ ಬೈಕ್ ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು,ವೈದ್ಯರ ಸಲಹೆಯಂತೆ ಪೋಷಕರು ಯುವಕನ ಅಂಗಾಂಗ ದಾನ ಪ್ರಕ್ರಿಯೆಗೆ ಮುಂದಾಗಿದ್ದಾರೆ.ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿ ಗೋಪಾಲ ಹಾಗೂ ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21)ಮೆದುಳು ನಿಷ್ಕ್ರಿಯಗೊಂಡ ಯುವಕನಾಗಿದ್ದಾನೆ. ವರ್ಷಿತ್ ಸೋಮವಾರ ರಾತ್ರಿ 7.30 ರ ಹೊತ್ತಿಗೆ ಕುತ್ತಾರುವಿನಿಂದ ತನ್ನ ಮನೆಯ ಕಡೆ ತೆರಳುತ್ತಿದ್ದಾಗ ಕುತ್ತಾರುವಿನ ಕೊರಗಜ್ಜನ…

Read More

ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ತುಳುನಾಡಿನ ಸಂಸ್ಕೃತಿ, ಭದ್ರತೆ ಹಾಗೂ ಯುವಜನರ ಹಿತರಕ್ಷಣೆಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಸರ್ಕಾರದ ಮುಂದೆ ವಿಶ್ವ ಹಿಂದೂ ಪರಿಷದ್ ಆಗ್ರಹ

ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಅಭಿವೃದ್ಧಿಗೆ ವಿಶೇಷ ಪ್ರವಾಸೋದ್ಯಮ ಪ್ಯಾಕೇಜ್ ಹಾಗೂ ಐಟಿ-ಬಿಟಿ ಉದ್ಯಮಗಳ ಉತ್ತೇಜನಕ್ಕೆ ಚರ್ಚಿಸುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ಸಾಮಾಜಿಕ ಹೊಣೆಗಾರಿಕೆಯಿಂದ ಸ್ವಾಗತಿಸುತ್ತದೆ. ಆರ್ಥಿಕ ಪ್ರಗತಿ ಮತ್ತು ಸ್ಥಳೀಯ ಯುವಕರ ಉದ್ಯೋಗ ಸೃಷ್ಟಿ ಅತ್ಯಗತ್ಯ. ಆದರೆ, ಈ ಅಭಿವೃದ್ಧಿ ನೀತಿಗಳನ್ನು ಜಾರಿಗೊಳಿಸುವಾಗ ತುಳುನಾಡಿನ ಮೂಲ ಸಂಸ್ಕೃತಿ, ಧಾರ್ಮಿಕ ಆಚರಣೆ, ರಾಷ್ಟ್ರೀಯ ಭದ್ರತೆ ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು…

Read More

ಮಂಗಳೂರಿನಲ್ಲಿ ಸೆ.20ರಂದು ‘ಸ್ಟ್ರೆಂಥಾನ್’ ಫಿಟ್ನೆಸ್ ಸ್ಪರ್ಧೆ; 300 ಕ್ರೀಡಾಪಟುಗಳ ಭಾಗಿ

ಮಂಗಳೂರು: ಓಟ, ಶಕ್ತಿ ಹಾಗೂ ಕ್ರಿಯಾತ್ಮಕ ಫಿಟ್ನೆಸ್‌ನ್ನು ಒಂದೇ ಸ್ಪರ್ಧಾತ್ಮಕ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದ ‘ಸ್ಟ್ರೆಂಥಾನ್’ (STRENGTHON) ಫಿಟ್ನೆಸ್-ಪರ್ಫಾರ್ಮೆನ್ಸ್ ಸ್ಪರ್ಧೆಯ ಮೊದಲ ಆವೃತ್ತಿ ಸೆ.20ರಂದು ಮಂಗಳೂರಿನ ಉರ್ವದ ಐಕ್ಯ ಸ್ಪೋರ್ಟ್ಸ್ ಫೆಸಿಲಿಟಿಯಲ್ಲಿ ನಡೆಯಲಿದೆ ಎಂದು ಸ್ಟ್ರೆಂಥಾನ್ ಮುಖ್ಯಸ್ಥ ನಿತಿನ್ ಶ್ರಿಯಾನ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕ್ರೀಡೆಗಳಿಗೆ ಸೀಮಿತವಾಗಿರುವ ಫಿಟ್ನೆಸ್‌ಗಿಂತ ಸಮಗ್ರ ದೈಹಿಕ ಸಾಮರ್ಥ್ಯಕ್ಕೆ ಒತ್ತು ನೀಡುವುದು ‘ಸ್ಟ್ರೆಂಥಾನ್’ ಉದ್ದೇಶವಾಗಿದೆ. ಓಟದೊಂದಿಗೆ ವಿವಿಧ ರೀತಿಯ ಕ್ರಿಯಾತ್ಮಕ ವ್ಯಾಯಾಮಗಳನ್ನು ಒಳಗೊಂಡ ಸ್ಪರ್ಧೆ ಇದಾಗಿದ್ದು,…

Read More

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು; ನೈಟ್ ಲೈಫ್ ಆರಂಭಕ್ಕೆ ಕ್ರಮ: ಹರೀಶ್ ಕುಮಾರ್

ಮಂಗಳೂರು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ ಕರಾವಳಿಯನ್ನು ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಪ್ರವಾಸಿ ತಾಣಗಳ ಪರಿಶೀಲನೆ ಹಾಗೂ ಉದ್ಯಮಿಗಳೊಂದಿಗೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನೈಟ್ ಲೈಫ್ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಜಿಲ್ಲೆಯಲ್ಲಿ ಸದ್ಯ…

Read More

ಕೆಡಿಪಿ ಸಭೆಗೆ ಬಜಪೆ ಪ.ಪಂ. ಅಧ್ಯಕ್ಷರಿಗೆ ಆಹ್ವಾನವಿಲ್ಲ; ಜನರ ಸಮಸ್ಯೆ ಮಂಡಿಸಲು ಅವಕಾಶ ತಪ್ಪಿದೆ: ಲೋಕೇಶ್ ಪೂಜಾರಿ

ಮಂಗಳೂರು:ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜನರ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶವಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು, ಕೆಡಿಪಿ ಸಭೆಗೆ ಅಧ್ಯಕ್ಷರನ್ನು ಆಹ್ವಾನಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಸೆ.15ರಂದು ನಡೆದ ಕೆಡಿಪಿ ಸಭೆಗೆ ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷರನ್ನು ಆಹ್ವಾನಿಸದ ಕಾರಣ ಜಿಲ್ಲಾ ಮಟ್ಟದ ಸಭೆಯಲ್ಲಿ ಜನರ ಸಮಸ್ಯೆಗಳನ್ನು ನೇರವಾಗಿ ಮಂಡಿಸುವ ಅವಕಾಶ ತಪ್ಪಿದೆ…

Read More
error: Content is protected !!