ಆಗಸ್ಟ್ 8ರಂದು ‘ಸಾನಿಧ್ಯ ಅರ್ಜುನ್ ಶೆಟ್ಟಿ ಶಾಲೆ’ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆ … !
ಮಂಗಳೂರು: ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿ ಒದಗಿಸುವ ಉದ್ದೇಶದಿಂದ ನಿರ್ಮಾಣಗೊಂಡಿರುವ ‘ಸಾನಿಧ್ಯ ಅರ್ಜುನ್ ಶೆಟ್ಟಿ ಶಾಲೆ’ಯ ಉದ್ಘಾಟನಾ ಸಮಾರಂಭವು ಆಗಸ್ಟ್ 8ರಂದು (ಶನಿವಾರ) ಬೆಳಿಗ್ಗೆ 9.20ಕ್ಕೆ ಶಕ್ತಿನಗರದ ಸಾನಿಧ್ಯ ಶಾಲೆಯ ಆವರಣದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯು.ಟಿ. ಖಾದರ್…
