ಅಪಘಾತದಲ್ಲಿ ನಿಧನರಾದ ರವಿಚಂದ್ರ ಶೆಟ್ಟಿಗೆ ಶ್ರದ್ಧಾಂಜಲಿ ಸಭೆ
ಮಂಗಳೂರು:ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಮಂಗಳೂರಿನ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕರು ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಕಾರ್ಯದರ್ಶಿಯಾಗಿದ್ದ ರವಿಚಂದ್ರ ಶೆಟ್ಟಿ ಅಶೋಕನಗರ ಅವರಿಗೆ ನಗರದ ಪತ್ತುಮುಡಿ ಸೌಧದಲ್ಲಿ ಭಾವಪೂರ್ಣ ನುಡಿನಮನ ಕಾರ್ಯಕ್ರಮ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಹಾಗೂ ಅದರ ವಿವಿಧ ಘಟಕಗಳ ಸರ್ವ ಸದಸ್ಯರ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಟಮಾತನಾಡಿದ ಕದ್ರಿ ನವನೀತ ಶೆಟ್ಟಿ, “ರವಿಚಂದ್ರ ಶೆಟ್ಟಿ ಅವರ ಅಕಾಲಿಕ ನಿಧನ ಎಲ್ಲರಿಗೂ ಆಘಾತ ತಂದಿದೆ. ತಿರುಪತಿಯಿಂದ…
